IPL ಟೀಂಗೆ 538 ಕೋಟಿ ಪರಿಹಾರ! BCCIಗೆ ಸಸ್ಪೆಂಡ್ ಫ್ರಾಂಚೈಸಿ ಶಾಕ್!

13 ವರ್ಷಗಳ ಬಳಿಕ IPL ತಂಡಕ್ಕೆ 538 ಕೋಟಿ ರೂ. ಪರಿಹಾರ..!
ನಿಮ್ಗೆ ನೆನೆಪಿದ್ಯೋ ಇಲ್ವೋ ಗೊತ್ತಿಲ್ಲ. 2011 ರ ಐಪಿಎಲ್ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿದಿದ್ದವು. ಈಗಿರುವ 8 ತಂಡಗಳ ಜೊತೆ ಅಂದು ಕೊಚ್ಚಿ ಟಸ್ಕರ್ಸ್ ಕೇರಳ ಹಾಗೂ ಪುಣೆ ವಾರಿಯರ್ಸ್ ಇಂಡಿಯಾ ತಂಡಗಳು ಕಾಣಿಸಿಕೊಂಡಿದ್ದವು. ಆ ವರ್ಷ ಆಡಿದ 14 ಪಂದ್ಯಗಳಲ್ಲಿ ಟಸ್ಕರ್ಸ್ ಪಡೆ ಗೆದ್ದಿರುವುದು ಕೇವಲ 6 ಪಂದ್ಯಗಳನ್ನು ಮಾತ್ರ. ಇನ್ನು 8 ಮ್ಯಾಚ್ಗಳಲ್ಲಿ ಸೋತಿದ್ದ ಕೊಚ್ಚಿ ಟಸ್ಕರ್ಸ್ ಕೇರಳ ತಂಡವು ಅಂಕ ಪಟ್ಟಿಯಲ್ಲಿ 8ನೇ ಸ್ಥಾನ ಅಲಂಕರಿಸುವ ಮೂಲಕ ಟೂರ್ನಿಯನ್ನು ಅಂತ್ಯಗೊಳಿಸಿತ್ತು. ಆದರೆ 2012 ರಲ್ಲಿ ಕೊಚ್ಚಿ ಟಸ್ಕರ್ಸ್ ಕೇರಳ ತಂಡವನ್ನು ಐಪಿಎಲ್ನಿಂದ ಬಿಸಿಸಿಐ ಕೈ ಬಿಡ್ತು. ಬಿಸಿಸಿಐ 2011ರಲ್ಲಿ ಕೊಚ್ಚಿ ಟಸ್ಕರ್ಸ್ ಕೇರಳ ತಂಡದ ಐಪಿಎಲ್ ಒಪ್ಪಂದವನ್ನು ರದ್ದುಗೊಳಿಸಿತ್ತು.
ಹೀಗೆ ಒಂದೇ ಒಂದು ಸೀಸನ್ಗೆ ಕೊಚ್ಚಿ ಟಸ್ಕರ್ಸ್ ಕೇರಳ ಫ್ರಾಂಚೈಸಿಯನ್ನು ರದ್ದುಗೊಳಿಸಲು ಮುಖ್ಯ ಕಾರಣ ಐಪಿಎಲ್ ಫ್ರಾಂಚೈಸಿ ನಿಯಮವನ್ನು ಉಲ್ಲಂಘಿಸಿರುವುದು. ಅಂದರೆ ಕೊಚ್ಚಿ ಟಸ್ಕರ್ಸ್ ಕೇರಳ ಫ್ರಾಂಚೈಸಿಯು ಮೊದಲ ಸೀಸನ್ನಲ್ಲೇ ಫ್ರ್ಯಾಂಚೈಸ್ ಶುಲ್ಕದ ಭಾಗವಾಗಿರುವ ಶೇಕಡಾ 10 ರಷ್ಟು ಬ್ಯಾಂಕ್ ಗ್ಯಾರಂಟಿಯನ್ನು ಪಾವತಿಸಲು ವಿಫಲವಾಗಿತ್ತು. ಹೀಗಾಗಿ ಕೊಚ್ಚಿ ಟಸ್ಕರ್ಸ್ ಕೇರಳ ಫ್ರಾಂಚೈಸಿಯನ್ನು ಐಪಿಎಲ್ನಿಂದ ಕೈ ಬಿಡಲಾಯಿತು. BCCI ಈ ನಿರ್ಧಾರದ ವಿರುದ್ಧ ಕೊಚ್ಚಿ ಫ್ರಾಂಚೈಸಿ 2012 ರಲ್ಲಿ ಕೋರ್ಟ್ ಮೆಟ್ಟಿಲೇರಿತ್ತು. ಅದರಂತೆ 2015 ರಲ್ಲಿ ಮಧ್ಯಸ್ಥಿಕೆ ನ್ಯಾಯಮಂಡಳಿಯು ಕೊಚ್ಚಿ ಟಸ್ಕರ್ಸ್ ಕೇರಳ ಫ್ರಾಂಚೈಸಿ ಮಾಲೀಕರ ಪರ ತೀರ್ಪು ನೀಡಿತ್ತು. ಈ ತೀರ್ಪಿನಂತೆ ಬಿಸಿಸಿಐ, ಕೊಚ್ಚಿ ಟಸ್ಕರ್ಸ್ ಕೇರಳ ಫ್ರಾಂಚೈಸಿ ಮಾಲೀಕರಿಗೆ 384.8 ಕೋಟಿ ರೂ. ಮತ್ತು 153.3 ಕೋಟಿ ರೂ.ಗಳಿಗೂ ಬಡ್ಡಿ ವೆಚ್ಚದೊಂದಿಗೆ ಪರಿಹಾರ ಮೊತ್ತವನ್ನು ಪಾವತಿಸಲು ಆದೇಶಿಸಿತು. ಆದರೆ ಈ ತೀರ್ಪಿನ ವಿರುದ್ಧ ಬಿಸಿಸಿಐ ಬಾಂಬೆ ಹೈಕೋರ್ಟ್ನ ಮೆಟ್ಟಿಲೇರಿತ್ತು. ಇದೀಗ ಬಾಂಬೆ ಹೈಕೋರ್ಟ್ ಕೂಡ ಬಿಸಿಸಿಐ ವಿರುದ್ಧ ತೀರ್ಪು ನೀಡಿದೆ. ಇದರಿಂದ ಬಿಸಿಸಿಐಗೆ ದೊಡ್ಡ ಹಿನ್ನಡೆಯಾಗಿದೆ. ನ್ಯಾಯಾಲಯದ ತೀರ್ಪಿನಿಂದ ಕೊಚ್ಚಿ ಟಸ್ಕರ್ಸ್ ಕೇರಳ ತಂಡದ ಮಾಲೀಕರಿಗೆ ಒಟ್ಟು 538 ಕೋಟಿ ಪರಿಹಾರ ಸಿಗಲಿದೆ.

ನೋಡಿರಿ

