ಖಾಸಗಿ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ರೇ*ಪ್‌!?- ಅತ್ಯಾಚಾರಿ ಸೇರಿ ಹೋಂ ಸ್ಟೇ ಮಾಲೀಕ ಅರೆಸ್ಟ್

ಖಾಸಗಿ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ರೇ*ಪ್‌!?- ಅತ್ಯಾಚಾರಿ ಸೇರಿ ಹೋಂ ಸ್ಟೇ ಮಾಲೀಕ ಅರೆಸ್ಟ್

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಮೊನ್ನೆ ಏಪ್ರಿಲ್ 19ರಂದು ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ, ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಈ ಸಂಬಂಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯಾಗಿರುವ ವೃಜೇಶ್ ಕುಮಾರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಹೋಂಸ್ಟೇ ಮಾಲೀಕ ವಿಶಾಲ್ ಮೇಲೂ ಆರೋಪಗಳಿದ್ದು, ಅವರನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಹಿನ್ನೆಲೆ ಹಾಗೂ ಆರೋಪಗಳ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಪಹಲ್ಗಾಮ್‌ ದಾಳಿಗೆ ಒಂದು ವರ್ಷ – ಪಾಪಿಗಳ ಅಟ್ಟಹಾಸಕ್ಕೆ ಬಲಿಯಾದ ಮುಗ್ಧ ಜೀವಗಳನ್ನ ನೆನೆದು ಶಪಥಗೈದ ಮೋದಿ

ಪೊಲೀಸರಿಗೆ ನೀಡಿದ ದೂರು ಪ್ರಕಾರ, ಮಹಿಳೆಗೆ ಪಾನೀಯದಲ್ಲಿ ಮಾದಕ ಪದಾರ್ಥಗಳನ್ನು ಮಿಶ್ರಣ ಮಾಡಿ ಕುಡಿಯಲು ನೀಡಿ ಮತ್ತು ಬರಿಸಿ ಅತ್ಯಾಚಾರವೆಸಗಲಾಯಿತು ಎಂದು ಆರೋಪಿಸಿದ್ದಾರೆ. ಈ ಘಟನೆ ಮರೆಮಾಚಲು ಹೋಂಸ್ಟೇ ಮಾಲೀಕರು ಯತ್ನಿಸಿದ್ದು, ಪೊಲೀಸರಿಗೆ ದೂರು ನೀಡಲು ಸಹಾಯ ಮಾಡಿಲ್ಲ ಎಂದು ಆರೋಪಿಸಿದ್ದಾರೆ.ಹೋಂಸ್ಟೇಯಿಂದ ಹೊರಟ ನಂತರ, ಮಹಿಳೆ ರಾಯಭಾರ ಕಚೇರಿ ಅಧಿಕಾರಿಗಳನ್ನು ಸಂಪರ್ಕಿಸಿದ ನಂತರ ಕೊಡಗು ಪೊಲೀಸರು ಪ್ರಕರಣ ದಾಖಲಿಸಿದರು. ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರು ಇಬ್ಬರ ಬಂಧನ ದೃಢಪಡಿಸಿದ್ದಾರೆ.

ಆರೋಪಿ ಹೋಂಸ್ಟೇನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯಾಗಿದ್ದು, ಜಾರ್ಖಂಡ್‌ನ ಮೂಲದವನಾಗಿದ್ದಾನೆ; ಅವನನ್ನು ಬಂಧಿಸಲಾಗಿದೆ. ಹೋಂಸ್ಟೇ ಮಾಲೀಕರನ್ನೂ ಸಹಾಯ ನೀಡದೆ ಅಪರಾಧವನ್ನು ಮರೆಮಾಚಲು ಯತ್ನಿಸಿದ ಆರೋಪದಲ್ಲಿ ಬಂಧಿಸಲಾಗಿದೆ. ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Kishor KV