ZEROಗೆ ಔಟ್.. ಹೆನ್ರಿಗೆ ಕೊಹ್ಲಿ ಗಿಫ್ಟ್ – BAD ಬ್ಯಾಟಿಂಗ್.. ಗಂಭೀರ್‌ಗೆ ಟೆನ್ಷನ್

ZEROಗೆ ಔಟ್.. ಹೆನ್ರಿಗೆ ಕೊಹ್ಲಿ ಗಿಫ್ಟ್ –  BAD ಬ್ಯಾಟಿಂಗ್.. ಗಂಭೀರ್‌ಗೆ ಟೆನ್ಷನ್

ಕ್ರಿಕೆಟ್ ಲೋಕದ ಇಂಟ್ರೆಸ್ಟಿಂಗ್ ಸುದ್ದಿಗಳು

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದನೇ ಹಾಗೂ ಅಂತಿಮ ಏಕದಿನ ಪಂದ್ಯ ನವೆಂಬರ್ 15ರಂದು ನಡೆಯಲಿದೆ. ನಾಲ್ಕನೇ ಪಂದ್ಯದಲ್ಲಿ ಹೀನಾಯ ಸೋಲು ಕಂಡಿರುವ ಭಾರತ ಗೆಲುವಿನೊಂದಿಗೆ ಸರಣಿಗೆ ವಿದಾಯ ಹೇಳಲು ಎದುರು ನೋಡುತ್ತಿದೆ. ಈಗಾಗಲೇ ಭಾರತ ಸರಣಿಯಲ್ಲಿ 2-1 ಮುನ್ನಡೆ ಹೊಂದಿದೆ. ಕೊನೆಯ ಪಂದ್ಯದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಪ್ರಮುಖ ಆಟಗಾರರು ಹೇಗೆ ಪ್ರದರ್ಶನ ನೀಡುತ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ.

ನ್ಯೂಜಿಲೆಂಡ್ ವಿರುದ್ಧದ ಸೋಲಿನ ಬಳಿಕ ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ಭಾರತದ ಬ್ಯಾಟಿಂಗ್ ಸಮಸ್ಯೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ವೇಗದ ಬೌಲಿಂಗ್ ಮತ್ತು ಬೌನ್ಸ್ ಇರುವ ಪಿಚ್‌ಗಳಲ್ಲಿ ಭಾರತೀಯ ಬ್ಯಾಟರ್‌ಗಳು ಪದೇಪದೇ ಕುಸಿಯುತ್ತಿರುವುದು ಆತಂಕಕಾರಿ ಎಂದಿದ್ದಾರೆ. 2027ರ ಏಕದಿನ ವಿಶ್ವಕಪ್ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಯನ್ನು ಈಗಲೇ ಸರಿಪಡಿಸಬೇಕಿದೆ ಎಂಬುದು ಗಂಭೀರ್ ಅಭಿಪ್ರಾಯ.

ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸೇರಿದಂತೆ ಭಾರತದ ಮೂವರು ಪ್ರಮುಖ ಬ್ಯಾಟರ್‌ಗಳನ್ನು ಶೂನ್ಯಕ್ಕೆ ಔಟ್ ಮಾಡಿದ್ದ ಮ್ಯಾಟ್ ಹೆನ್ರಿಗೆ ವಿರಾಟ್ ಕೊಹ್ಲಿ ವಿಶೇಷ ಗೌರವ ನೀಡಿದ್ದಾರೆ. ಪಂದ್ಯದ ಬಳಿಕ ತಮ್ಮ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿ ಬೆನ್ನುತಟ್ಟಿ ಅಭಿನಂದಿಸಿದ್ದಾರೆ. ಮೈದಾನದಲ್ಲಿ ಎದುರಾಳಿಗಳಾಗಿದ್ದರೂ ಆಟದ ನಂತರ ಕ್ರೀಡಾಸ್ಫೂರ್ತಿ ಮೆರೆದ ಕೊಹ್ಲಿಯ ನಡೆ ಕ್ರಿಕೆಟ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಸೋಲಿನ ನಡುವೆಯೂ ಕೊಹ್ಲಿ ತೋರಿದ ಈ ದೊಡ್ಡ ಗುಣಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ತಾನೂ ಆಡಲ್ಲ.. ತಂಡವನ್ನೂ ಗೆಲ್ಲಿಸಲ್ಲ – ಕ್ಯಾಪ್ಟನ್ಸಿ ಖದರ್ ಕಳ್ಕೊಂಡ ಶ್ರೇಯಸ್

ಸೈಯದ್ ಮುಷ್ತಾಕ್ ಅಲಿ ಟ್ರೋಫಿ 2026ರ ಟೂರ್ನಿಯ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾ ಮಾಜಿ ಟಿ20 ನಾಯಕ ಹಾಗೂ ಮುಂಬೈ ತಂಡದ ಸಾರಥಿ ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಸೂರ್ಯಕುಮಾರ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಮುಂಬೈ ತಂಡವು ಹೈದರಾಬಾದ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಐಪಿಎಲ್ 2027ಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡದಲ್ಲಿ ಮಹತ್ವದ ಬದಲಾವಣೆಯಾಗಿದೆ. ನಾಯಕ ಹಾರ್ದಿಕ್ ಪಾಂಡ್ಯ ಪಂಜಾಬ್ ಕಿಂಗ್ಸ್ ತಂಡಕ್ಕೆ ಟ್ರೇಡ್ ಆಗಿದ್ದು, ಇದೀಗ ರೋಹಿತ್ ಶರ್ಮಾ ಮತ್ತೆ ನಾಯಕನಾಗುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ರೋಹಿತ್ ನಾಯಕತ್ವದಲ್ಲಿ ಮುಂಬೈ ಐದು ಬಾರಿ ಐಪಿಎಲ್ ಟ್ರೋಫಿ ಗೆದ್ದಿದೆ. ಮಿಚೆಲ್ ಸ್ಯಾಂಟ್ನರ್ ಕೂಡ ರೋಹಿತ್ ಅವರನ್ನು ‘ಸ್ಕಿಪ್ಪರ್’ ಎಂದು ಕರೆದಿರುವ ವಿಡಿಯೋ ವೈರಲ್ ಆಗಿದೆ. Skipper ಎಂದರೆ ನಾಯಕ ಅಥವಾ ಕ್ಯಾಪ್ಟನ್ ಎಂದರ್ಥ. ಆದರೆ ನಾಯಕತ್ವದ ಬಗ್ಗೆ ಮುಂಬೈ ಇಂಡಿಯನ್ಸ್ ಅಧಿಕೃತ ಘೋಷಣೆ ಮಾಡಿಲ್ಲ.

ನ್ಯೂಜಿಲೆಂಡ್ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳ ಸರಣಿಗೆ ಆಯ್ಕೆಯಾಗಿದ್ದ ಕುಲದೀಪ್ ಯಾದವ್ ಅವರನ್ನು ಭಾರತ ತಂಡದಿಂದ ಬಿಡುಗಡೆ ಮಾಡಲಾಗಿದೆ. ಅವರು ದೇಶೀಯ ಕ್ರಿಕೆಟ್‌ನಲ್ಲಿ ಉತ್ತರ ಪ್ರದೇಶ ತಂಡದ ಪರ ಆಡಲಿದ್ದಾರೆ. ನ್ಯೂಜಿಲೆಂಡ್ ಪ್ರವಾಸದ 10 ವೈಟ್‌ಬಾಲ್ ಪಂದ್ಯಗಳಲ್ಲಿ ಕುಲದೀಪ್ ಕೇವಲ ಒಂದು ಪಂದ್ಯವನ್ನಷ್ಟೇ ಆಡಿದ್ದರು. ಅವರ ಬದಲಿಗೆ ವೇಗದ ಬೌಲರ್ ಗುರ್‌ನೂರ್ ಬ್ರಾರ್ ಅವರನ್ನು ಟೆಸ್ಟ್ ತಂಡಕ್ಕೆ ಸೇರಿಸಲಾಗಿದೆ.

ಭಾರತದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಕೇವಲ 15 ವರ್ಷ 232 ದಿನಗಳ ವಯಸ್ಸಿನಲ್ಲಿ ಬಿಹಾರ ತಂಡದ ನಾಯಕತ್ವ ವಹಿಸುವ ಮೂಲಕ ಪುರುಷರ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕಿರಿಯ ನಾಯಕ ಎನಿಸಿಕೊಂಡಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಸೌರಾಷ್ಟ್ರ ವಿರುದ್ಧ ಬಿಹಾರ ತಂಡವನ್ನು ಮುನ್ನಡೆಸಿರುವುದು ಇದೀಗ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದೆ.

ಬಿಸಿಸಿಐ ಅಂಡರ್-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದ 17 ವರ್ಷದ ನಂದಿನಿ ವಿಕಾರಾಬಾದ್‌ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ.   ನಂದಿನಿಗೆ ಅನಿಲ್ ಮತ್ತು ಕೃಷ್ಣ ಎಂಬ ಇಬ್ಬರು ಯುವಕರು ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎಂದು ಸಂಬಂಧಿಕರು ಆರೋಪಿ, ಪ್ರತಿಭಟನೆ ನಡೆಸಿದ್ದಾರೆ. ಇತ್ತೀಚೆಗಷ್ಟೇ ಬಿಸಿಸಿಐ ಅಂಡರ್‌-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದರು.

ಸಮಾಜವಾದಿ ಪಕ್ಷದ ಸಂಸೆದೆ ಪ್ರಿಯಾ ಸರೋಜ್ ಜೊತೆ ಟೀಂ ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್ ಮದುವೆ ಡಿ.4ರಂದು ನಡೆಯಲಿದೆ. ಈ ಮದುವೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಆಹ್ವಾನ ನೀಡಲಾಗಿದೆ. ರಿಂಕು ಸಿಂಗ್ ಅವರ ತಾಯಿ ಬೀನಾ ದೇವಿ, ಸಹೋದರ ಸೋನು ಸಿಂಗ್ ಮತ್ತು ಸಹೋದರಿ ನೇಹಾ ಸಿಂಗ್ ಲಕ್ನೋದಲ್ಲಿರುವ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ ಯೋಗಿ ಆದಿತ್ಯನಾಥ್ ಅವರಿಗೆ ವಿವಾಹ ಆಮಂತ್ರಣ ಪತ್ರಿಕೆಯನ್ನು ಹಸ್ತಾಂತರಿಸಿದರು.

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಏಳು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಕೇವಲ 131 ರನ್‌ಗಳಿಗೆ ಆಲೌಟ್ ಆಯಿತು. ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಸುಲಭವಾಗಿ ಗೆಲುವು ದಾಖಲಿಸಿತು. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 1-0 ಮುನ್ನಡೆ ಸಾಧಿಸಿದೆ.

Kishor KV

Leave a Reply

Your email address will not be published. Required fields are marked *