ಶಾಲೆಗೆ ರಜೆ ಸಿಗಲಿ ಅಂತಾ ಕುಡಿಯುವ ನೀರಿಗೆ ಇಲಿ ಪಾಷಾಣ ಹಾಕಿದ! – ವಿದ್ಯಾರ್ಥಿಯ ಕಿತಾಪತಿಗೆ ಮೂವರು ಅಸ್ವಸ್ಥ!

ಶಾಲೆಗೆ ರಜೆ ಸಿಗಲಿ ಅಂತಾ ಕುಡಿಯುವ ನೀರಿಗೆ ಇಲಿ ಪಾಷಾಣ ಹಾಕಿದ! – ವಿದ್ಯಾರ್ಥಿಯ ಕಿತಾಪತಿಗೆ ಮೂವರು ಅಸ್ವಸ್ಥ!

ಶಾಲೆಗೆ ಹೋಗುವ ಮಕ್ಕಳು ಯಾವಾಗ ರಜೆ ಸಿಗುತ್ತೆ ಅಂತಾ ಕಾಯುತ್ತಾ ಇರುತ್ತಾರೆ. ಇನ್ನೂ ಹಾಸ್ಟೆಲ್‌ನಲ್ಲಿರುವ ಮಕ್ಕಳು ಹೆಚ್ಚು ರಜೆ ಸಿಗಲಿ.. ಮನೆಗೆ ಹೋಗಬೇಕು ಅಂತಾ ಕಾಯುತ್ತಾರೆ. ಹೀಗಾಗಿ ಕೆಲವೊಂದು ಬಾರಿ ಮಕ್ಕಳು ಶಾಲೆಗೆ ಹೋಗುವುದನ್ನು ತಪ್ಪಿಸಲು ತಲೆನೋವು, ಹೊಟ್ಟೆ ನೋವು ಅಂತಾ ಪೊಳ್ಳು ನೆಪ ಹೇಳುತ್ತಾರೆ. ಇಲ್ಲೊಬ್ಬ ವ್ಯಕ್ತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಏನಾದರು ತೊಂದರೆಯಾದರೆ ರಜೆ ಕೊಡುತ್ತಾರೆ ಅಂತಾ ಶಾಲೆಯಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗೆ ಇಲಿ ಪಾಷಾಣ ಹಾಕಿದ್ದಾನೆ.

ಇದನ್ನೂ ಓದಿ: ಬೆಂಗಳೂರಿಗರೇ ಎಚ್ಚರ..! ಸದ್ದಿಲ್ಲದೇ ನಡೆಯುತ್ತಿದೆ ಮಕ್ಕಳ ಮಾರಾಟ – ಎಂಟು ಮಂದಿ ಅರೆಸ್ಟ್

ಹೌದು, ಬಂಗಾರಪೇಟೆ ತಾಲ್ಲೂಕು ಡೊಡ್ಡಪೊನ್ನಾಂಡಹಳ್ಳಿ ಗ್ರಾಮದ ಬಳಿ ಇರುವ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ವಿಷ ಬೆರೆಸಿರುವ ನೀರು ಸೇವಿಸಿ ಇದೀಗ ಮೂವರು ಮಕ್ಕಳು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾಗಿದ್ದು, ಮಕ್ಕಳನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೀರಿಗೆ ಇಲಿ ಪಾಷಾಣ ಹಾಕಿದ್ದು ಏಕೆ?

ಈ ಘಟನೆ ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಪೊಲೀಸರು ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಏನಾದರು ತೊಂದರೆಯಾದರೆ ರಜೆ ಕೊಡುತ್ತಾರೆ. ನಂತರ ನಾನು ಊರಿಗೆ ಹೋಗಿ ತಂದೆ-ತಾಯಿಯನ್ನು ನೋಡಬಹದು ಎಂದು ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ಲೆಕ್ಕಾಚಾರ ಹಾಕಿದ್ದಾನೆ. ಹೀಗಾಗಿ ಈತ ಕುಡಿಯುವ ನೀರಿಗೆ ಇಲಿ ಪಾಷಾಣ ಹಾಕಿದ್ದಾನೆ. ವಿದ್ಯಾರ್ಥಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾನೆ ಎಂಬ ವಿಷಯ ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.

ಇನ್ನು ವಿದ್ಯಾರ್ಥಿಯ ತಂದೆ ಮತ್ತು ತಾಯಿ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ. ನಮ್ಮ ಮಗ ಚೆನ್ನಾಗಿ ಓದಲಿ ಎಂದು ಹಾಸ್ಟೆಲ್​ಗೆ ದಾಖಲು ಮಾಡಿದ್ದರು. ಆದರೆ ಮಗ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ದುರದೃಷ್ಟಕರ.  ಸದ್ಯ ಈ ವಿದ್ಯಾರ್ಥಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Shwetha M