ರಾಮ ನಾಮ ಪಾಯಸಕ್ಕೆ ಕೃಷ್ಣ ನಾಮ ಸಕ್ಕರೆ- ಅಯೋಧ್ಯೆಗೆ ಹೊರಟ ಕಾರ್ಕಳದ ಕೃಷ್ಣಶಿಲೆ

ರಾಮ ನಾಮ ಪಾಯಸಕ್ಕೆ ಕೃಷ್ಣ ನಾಮ ಸಕ್ಕರೆ- ಅಯೋಧ್ಯೆಗೆ ಹೊರಟ ಕಾರ್ಕಳದ ಕೃಷ್ಣಶಿಲೆ

ರಾಮ ನಾಮ ಪಾಯಸಕ್ಕೆ ಕೃಷ್ಣ ನಾಮ ಸಕ್ಕರೆ ಎನ್ನುವಂತೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪವಿತ್ರ ಶ್ರೀ ರಾಮರ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ ಆಯ್ಕೆಯಾಗಿದೆ.  ಶ್ರೀರಾಮ ಮೂರ್ತಿ ತಯಾರಿಸಲು ಬಳಸಲಾಗುವ ಬೃಹತ್ ಕೃಷ್ಣಶಿಲೆಯನ್ನು ಕಾರ್ಕಳದ ನೆಲ್ಲಿಕ್ಕಾರು ಗ್ರಾಮದಿಂದ ಅಯೋಧ್ಯೆಗೆ ಕಳುಹಿಸಿಕೊಡಲಾಗಿದೆ. ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದ ಬಳಿಕ ಬೃಹತ್ ಟ್ರೇಲರ್ ಟ್ರಕ್‌ನಲ್ಲಿ ಶಿಲೆಯನ್ನು ಕಳುಹಿಸಿಕೊಡಲಾಗಿದೆ.

ಇದನ್ನೂ ಓದಿ:  ಕುಂದಾನಗರಿಯಲ್ಲಿ ಕಾಂಗ್ರೆಸ್ ಯುವಕ್ರಾಂತಿ ರಣಕಹಳೆ – ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3 ಸಾವಿರ ಭತ್ಯೆ..!

9.5 ಅಡಿ ಎತ್ತರ, 6 ಅಡಿ ಅಗಲ ಹಾಗೂ 10 ಟನ್ ತೂಕದ ಈ ಕೃಷ್ಣ ಶಿಲೆ ಕಾರ್ಕಳದ ನೆಲ್ಲಿಕ್ಕಾರುವಿನ ಈದು ಗ್ರಾಮದ ತುಂಗ ಪೂಜಾರಿಯವರ ಭೂಮಿಯಲ್ಲಿತ್ತು. ಶಿಲೆಯನ್ನು ಅಯೋಧ್ಯೆಗೆ ಟ್ರಕ್‌ನಲ್ಲಿ ಕಳುಹಿಸಿಕೊಡುವುದಕ್ಕೂ ಮುನ್ನ ಬಜಗೋಳಿಯ ಅಯ್ಯಪ್ಪ ಮಂದಿರದಲ್ಲಿ ಪ್ರಾರ್ಥನೆ ನಡೆಸಲಾಯಿತು. ಕೆಲವು ದಿನಗಳ ಹಿಂದಷ್ಟೇ ಅಯೋಧ್ಯೆಯಿಂದ ತಜ್ಞರ ತಂಡ ನೆಲ್ಲಿಕ್ಕಾರುವಿಗೆ ಭೇಟಿ ನೀಡಿ ಶಿಲೆಯ ಪರಿಶೀಲನೆ ನಡೆಸಿತ್ತು. ಮಳೆ, ಬಿಸಿಲು, ಬೆಂಕಿ ಮತ್ತು ಯಾವುದೇ ವಿಪರೀತ ಪರಿಸ್ಥಿತಿಯನ್ನು ತಡೆದುಕೊಳ್ಳುವ ಸಾಂರ್ಥ್ಯ ಇರುವ ಶಿಲೆ ಎಂಬುದನ್ನು ಖಚಿತಪಡಿಸಿದ ನಂತರ ತಂಡವು ಅದನ್ನು ಆಯ್ಕೆ ಮಾಡಿತ್ತು. ಅಯೋಧ್ಯೆಯ ರಾಮ ಮೂರ್ತಿಗೆ ಕಾರ್ಕಳದ ಶಿಲೆ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ ಎಂದು ಕಾರ್ಕಳ ಶಾಸಕರೂ ಆಗಿರುವ ಇಂಧನ ಸಚಿವ ವಿ. ಸುನಿಲ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಇತ್ತೀಚೆಗಷ್ಟೇ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟ್ವೀಟ್ ಮೂಲಕ ಕೃಷ್ಣಶಿಲೆ ಬಗ್ಗೆ ಮಾಹಿತಿ ನೀಡಿದ್ದರು. ರಾಮ ನಾಮ ಪಾಯಸಕ್ಕೆ ಕೃಷ್ಣ ನಾಮ ಸಕ್ಕರೆ ಎನ್ನುವಂತೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭ್ಯವ ಪ್ರಭು ಶ್ರೀ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪವಿತ್ರ ಶ್ರೀ ರಾಮರ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ ಆಯ್ಕೆಯಾಗಿದೆ. ಶಿಲ್ಪಿಗಳ ತವರೂರು ಎಂದೇ ಖ್ಯಾತವಾಗಿರುವ ಕಾರ್ಕಳದ ಈದು ಗ್ರಾಮದ ತುಂಗ ಪೂಜಾರಿಯವರ ಭೂಮಿಯಲ್ಲಿದ್ದ ಶಿಲೆಯನ್ನು ಆಯ್ಕೆ ಮಾಡಲಾಗಿದೆ. ಸಂಪೂರ್ಣ ವಿಶ್ವವೇ ಈ ಶಿಲೆಯಿಂದ ರೂಪುಗೊಳ್ಳಲಿರುವ ಭಗವಾನ್ ಶ್ರೀ ರಾಮನ ದರ್ಶನ ಪಡೆಯಲಿದೆ ಎಂಬುದು ನಮ್ಮನ್ನು ಪುಳಕಿತರನ್ನಾಗಿ ಹಾಗೂ ಪುನೀತರನ್ನಾಗಿಸುವಂತಹದಾಗಿದೆ. ಈ ಸೇವೆ ಮಾಡುವ ಅವಕಾಶವನ್ನು ರಾಜ್ಯಕ್ಕೆ ನೀಡಿದ ಪ್ರಭು ಶ್ರೀ ರಾಮನಿಗೆ ಶಿರಸಾಷ್ಟಾಂಗ ನಮಸ್ಕಾರಗಳು ಎಂದು ಟ್ವೀಟ್‌ನಲ್ಲಿ ಅವರು ಉಲ್ಲೇಖಿಸಿದ್ದರು.

suddiyaana