ಬಿಜೆಪಿಯಿಂದ ಕೆ.ಎಸ್.ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ – ನಾನು ಹೆದರುವುದಿಲ್ಲ ಎಂದು ಕೆ.ಎಸ್ ಈಶ್ವರಪ್ಪ ಗುಡುಗು

ಬಿಜೆಪಿಯಿಂದ ಕೆ.ಎಸ್.ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ – ನಾನು ಹೆದರುವುದಿಲ್ಲ ಎಂದು ಕೆ.ಎಸ್ ಈಶ್ವರಪ್ಪ ಗುಡುಗು

ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಆದರೆ, ಬಂಡಾಯ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ನಾನು ಯಾವುದೇ ಉಚ್ಚಾಟನೆಗೆ ಹೆದರುವುದಿಲ್ಲ ಎಂದು ಗುಡುಗಿದ್ದಾರೆ.

ಇದನ್ನೂ ಓದಿ:  ಹುಬ್ಬಳ್ಳಿ – ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಯೂಟರ್ನ್‌! – ನಾಮಪತ್ರ ವಾಪಸ್‌ ಪಡೆಯಲು ನಿರ್ಧಾರ?

ಪುತ್ರ ಕೆ.ಇ.ಕಾಂತೇಶ್​ಗೆ ಹಾವೇರಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕೆ.ಎಸ್.ಈಶ್ವರಪ್ಪ ಸ್ಪರ್ಧಿಸುತ್ತಿದ್ದಾರೆ. ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಮನವಿ ಮಾಡಿದ್ದರು. ಆದರೆ, ಯಾರ ಮಾತಿಗೂ ಕೇರ್ ಮಾಡದ ಈಶ್ವರಪ್ಪ ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ಬಂಡಾಯ ಎದ್ದಿರುವ ಈಶ್ವರಪ್ಪ ಮನವೊಲಿಕೆಗೆ ಕೇಂದ್ರ ನಾಯಕರ ತಂಡ, ರಾಜ್ಯ ನಾಯಕರು, ಸ್ಥಳೀಯರ ಮುಖಂಡರು ಯತ್ನಿಸಿದ್ದರೂ ಯಾವುದೇ ಪ್ರಯೋಜವಾಗಿರಲಿಲ್ಲ. ಇತ್ತೀಚೆಗೆ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಮನೆಗೆ ಬಂದಾಗ, ವಿಜಯೇಂದ್ರ ಮತ್ತು ಬಿಎಸ್ ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ತಮ್ಮ ಅಸಮಾಧಾನ ಹೊರಹಾಕಿದ್ದರು. ಮೋದಿ ಕಾರ್ಯಕ್ರಮ ಇದ್ದಿದ್ದರಿಂದ ಕೊನೆ ಕ್ಷಣದಲ್ಲಿ RSS ನಾಯಕರೂ ಸಹ ಮನವೊಲಿಕೆಗೆ ಮುಂದಾಗಿದ್ದರು. ರಾಮಮಂದಿರದಿಂದ ಕರೆ ಮಾಡಿದ್ದ ಗೋಪಾಲ್ ಅವರ ಸಂಧಾನಕ್ಕೂ ಈಶ್ವರಪ್ಪ ಸೊಪ್ಪು ಹಾಕಿರಲಿಲ್ಲ. ಕೊನೆಗೆ ಹೈಕಮಾಂಡ್ ನಾಯಕರು, ರಾಜ್ಯ ಬಿಜೆಪಿ ನಾಯಕರು ಅವರನ್ನು ಮನವೊಲಿಸೋ ಪ್ರಯತ್ನವನ್ನೇ ಬಿಜೆಪಿ ಕೊನೆಗೆ ಕೈಬಿಟ್ಟಿತ್ತು.

ಬಿಜೆಪಿಯಿಂದ 6 ವರ್ಷ ಉಚ್ಚಾಟನೆ ಬೆನ್ನಲ್ಲೇ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪ್ಪ, ಮಕ್ಕಳು ಆರಂಭದಿಂದ ಸುಳ್ಳು ಹೇಳುತ್ತಾ ಬಂದಿದ್ದಾರೆ. ಅವರು ಷಡ್ಯಂತ್ರ ಮಾಡುತ್ತಾ ಬಂದರು. ಅವರು ಯಾವ ಮುಖ ಇಟ್ಟುಕೊಂಡು ಉತ್ತರ ನೀಡುತ್ತಾರೆ. ಅವರು ಪ್ರಕ್ರಿಯೆ ನೀಡಲಿ, ನಂತರ ನಾನು ಅವರಿಗೆ ಉತ್ತರ ನೀಡುತ್ತೇನೆ ಎಂದು ವಾಗ್ದಾಳಿ ಮಾಡಿದ್ದಾರೆ. ನಾನು ಐದು ಬಾರಿ ಕಮಲದ ಚಿಹ್ನೆಯಿಂದ ಸ್ಪರ್ಧೆ ಮಾಡಿದ್ದೇನೆ. ನನಗೆ ರೈತನ ಚಿಹ್ನೆ ಬಂದಿರುವುದು ಸಂತೋಷ ತಂದಿದೆ. ಲೋಕಸಭೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ನನಗೆ ಶೇ 60 ರಷ್ಟು ಬಿಜೆಪಿ ಬೆಂಬಲ ಇದೆ ಎಂದು ಹೇಳಿದ್ದಾರೆ.

Sulekha

Leave a Reply

Your email address will not be published. Required fields are marked *