ಕ್ರಿಸ್‌ಮಸ್‌ಗೆ ಸಾಲು ಸಾಲು ರಜೆ – ಕೆಎಸ್‌ಆರ್‌ಟಿಸಿಯಿಂದ 1,000 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

ಕ್ರಿಸ್‌ಮಸ್‌ಗೆ ಸಾಲು ಸಾಲು ರಜೆ – ಕೆಎಸ್‌ಆರ್‌ಟಿಸಿಯಿಂದ 1,000 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

ಕ್ರಿಸ್‌ಮಸ್‌ ಹಬ್ಬಕ್ಕೆ ಮೂರು ದಿನಗಳು ಮಾತ್ರ ಬಾಕಿ ಉಳಿದಿದೆ. ಹಬ್ಬದ ಹಿನ್ನೆಲೆಯಲ್ಲಿ ಸಾಲು ಸಾಲು ಇರಲಿದೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿರುವವರು ಊರಿ, ಪ್ರವಾಸಿ ತಾಣಗಳಿಗೆ ತೆರಳಲು ಸಿದ್ದವಾಗಿದ್ದಾರೆ. ಸಾಲು ಸಾಲು ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಲಿದೆ. ಹೀಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಕ್ರಿಸ್‌ಮಸ್‌ ಹಬ್ಬಕ್ಕೆ ವಿಶೇಷ ಬಸ್‌ಗ ವ್ಯವಸ್ಥೆ ಮಾಡಿದೆ. ಬೆಂಗಳೂರು ನಗರದಿಂದ ರಾಜ್ಯದ ವಿವಿಧ ಭಾಗಗಳಿಗೆ 1,000 ವಿಶೇಷ ಬಸ್‌ಗಳು ಸಂಚಾರ ನಡೆಸಲಿವೆ ಎಂದು ಕೆಎಸ್‌ಆರ್‌ಟಿಸಿ ಮಾಹಿತಿ ನೀಡಿದೆ.

ಇದನ್ನೂ ಓದಿ: ಯುವನಿಧಿ ಯೋಜನೆ ಜಾರಿಗೆ ಕೂಡಿ ಬಂತು ಕಾಲ – ದಿನಾಂಕ ಘೋಷಿಸಿದ ಸರ್ಕಾರ

ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರುಗಳಿಗೆ, ಹೊರ ಪ್ರದೇಶಗಳಿಗೆ ಪ್ರವಾಸಕ್ಕೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 1,000 ವಿಶೇಷ ಬಸ್‌ಗಳನ್ನು ಬೆಂಗಳೂರಿನಿಂದ ರಾಜ್ಯದ ವಿವಿಧ ಕಡೆ ಓಡಿಸಲಿದೆ. ಡಿಸೆಂಬರ್‌ 22 , 23 ಹಾಗೂ 24 ಬೆಂಗಳೂರಿನಿಂದ ವಿಶೇಷ ಬಸ್‌ಗಳು ಸಂಚಾರ ನಡೆಸಲಿವೆ. ಸದ್ಯ ಲಭ್ಯವಿರುವ ಬಸ್‌ಗಳ ಓಡಾಟದ ಜೊತೆಗೆ ಹೆಚ್ಚುವರಿಯಾಗಿ 1,000 ವಿಶೇಷ ಬಸ್‌ಗಳು ಓಡಲಿದೆ. ರಾಜ್ಯದ ಪ್ರಮುಖ ಸ್ಥಳಗಳ ನಡುವೆಯೂ ಸಂಚರಿಸಲಿವೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಬೆಂಗಳೂರಿನ ಯಾವ ನಿಲ್ದಾಣಗಳಿಂದ ಎಲ್ಲಿಗೆ ಬಸ್‌?

ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‌ ಸಂಚಾರ ಮಾಡಲಿದೆ.

ಮೈಸೂರು ರಸ್ತೆ ಬಸ್ ನಿಲ್ದಾಣ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಹೊರಡಲಿದೆ.

ಶಾಂತಿನಗರ ಬಸ್ನಿಲ್ದಾಣ ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣ, ಚೆನ್ನೆ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಹೊರಡಲಿದೆ.

ಶೇ 10 ರಷ್ಟು ರಿಯಾಯಿತಿ

ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದ್ದು, ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುತ್ತದೆ ಹಾಗೂ ಹೋಗುವ ಹಾಗೂ ಬರುವ ಪ್ರಯಾಣದ ಟಿಕೆಟ್‌ ನ್ನು ಒಟ್ಟಿಗೆ ಕಾಯ್ದಿರಿಸಿದರೆ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುತ್ತದೆ.

Shwetha M