ಸಂಕ್ರಾಂತಿ ನಂತರ ಕೆಎಸ್ಆರ್​ಟಿಸಿ, ಬಿಎಂಟಿಸಿ ಟಿಕೆಟ್ ದರ ಹೆಚ್ಚಳ?

ಸಂಕ್ರಾಂತಿ ನಂತರ ಕೆಎಸ್ಆರ್​ಟಿಸಿ, ಬಿಎಂಟಿಸಿ ಟಿಕೆಟ್ ದರ ಹೆಚ್ಚಳ?

ಬಸ್‌ ಪ್ರಯಾಣಿಕರಿಗೆ ಸರ್ಕಾರ ವರ್ಷದ ಆರಂಬದಲ್ಲೇ ಶಾಕ್‌ ನೀಡಲು ಮುಂದಾಗಿದೆ. ಸಂಕ್ರಾಂತಿ ಹಬ್ಬದ ನಂತರ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ದೊಡ್ಮನೆಗೆ ಬಂದ ದೊಡ್ಡ ಕುಟುಂಬ –  ಐಶ್ವರ್ಯ ಹೆಸರು ಹೇಳಿ ಧನರಾಜ್ ಕೆನ್ನೆಗೆ ಹೊಡೆದ ಪತ್ನಿ!

ಶ್ರೀಘ್ರವೇ ಸಿಎಂ ಸಿದ್ಧರಾಮಯ್ಯ ಜೊತೆಯಲ್ಲಿ ಸಾರಿಗೆ ಮುಖಂಡರ ‌ಸಭೆ ನಡೆಯಲಿದೆ. ಈ ಸಭೆಯಲ್ಲಿ, ನಾಲ್ಕು ನಿಗಮಗಳ ಬಸ್​ಗಳ ಟಿಕೆಟ್ ದರ ಏರಿಕೆಗೆ ಅನುಮತಿ ನೀಡುವಂತೆ ಸಾರಿಗೆ ನೌಕರರು ಸಿಎಂ‌ ಸಿದ್ದರಾಮಯ್ಯಗೆ ಮನವಿ ಮಾಡಲು ಈಗಾಗಲೇ ‌ಅಂಕಿ ಅಂಶಗಳನ್ನು ಸಿದ್ಧಪಡಿಸಿ ಇಟ್ಟುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಬಿಎಂಟಿಸಿ ಟಿಕೆಟ್ ದರ ಏರಿಕೆ ಮಾಡಿ 10 ವರ್ಷಗಳಾಗಿವೆ. ಕೆಎಸ್ಆರ್​ಟಿಸಿ ಟಿಕೆಟ್ ಏರಿಕೆ ಮಾಡಿ ಐದು ವರ್ಷಗಳಾಗಿವೆ. ಹಾಗಾಗಿ ನಿಗಮಗಳನ್ನು ನಡೆಸಲು ಕಷ್ಟ ಆಗುತ್ತಿದೆ. ಆರ್ಥಿಕವಾಗಿ ಸಂಕಷ್ಟವನ್ನು ಎದುರಿಸುತ್ತಿದ್ದೇವೆ ಎಂದು ಮನವಿ ಮಾಡಲು ಸಾರಿಗೆ ಮುಖಂಡರು ಸಿದ್ಧವಾಗಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇತ್ತ ಕಳೆದ ವಾರ ಸಿಎಂ ಜೊತೆಗೆ ಸಾರಿಗೆ ಅಧಿಕಾರಿಗಳ ಜತೆ ನಡೆದಿದ್ದ ಸಭೆಯಲ್ಲಿ, ಟಿಕೆಟ್ ದರ ಏರಿಕೆ ಮಾಡಿದರೆ ಮಾತ್ರ ಬಿಎಂಟಿಸಿ, ಕೆಎಸ್ಆರ್​ಟಿಸಿ ಉಳಿಸಲು ಸಾಧ್ಯ ಎಂದು ಸಿಎಂಗೆ ಅಧಿಕಾರಿಗಳು ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ. ಪೆಟ್ರೋಲ್-ಡೀಸೆಲ್ ದರ ಹಾಗೂ ಬಿಡಿ ಭಾಗಗಳ ದರ ಏರಿಕೆಯಾಗಿದೆ. ಇಂಧನ‌ ದರ ನಾಲ್ಕೈದು ವರ್ಷದಲ್ಲಿ ಏರಿಕೆಯಾಗುತ್ತಲೇ ಬಂದಿದೆ. ಅದಕ್ಕೆ ಅನುಗುಣವಾಗಿ ಟಿಕೆಟ್ ದರ ಏರಿಕೆಯಾಗಬೇಕೆಂದು ನಾಲ್ಕೂ ನಿಗಮಗಳು ಮನವಿ ಮಾಡಿವೆ.

ಟಿಕೆಟ್ ದರದಲ್ಲಿ ಶೇ 25 ರಿಂದ 28 ರಷ್ಟು ಏರಿಕೆಗೆ ನಾಲ್ಕು ನಿಗಮಗಳು ಈ ಹಿಂದೆಯೇ ಪ್ರಸ್ತಾವನೆಯನ್ನು ಸಲ್ಲಿಸಿವೆ. ಸಂಕ್ರಾಂತಿ ಸಭೆಯ ನಂತರ ಶೇ 25 ಅಲ್ಲದಿದ್ದರೂ, ಅದರ ಅರ್ಧದಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಸಾರಿಗೆ ಮುಖಂಡ ಜಗದೀಶ್ ತಿಳಿಸಿದ್ದಾರೆ.

Shwetha M