ಅಯ್ಯಪ್ಪ ಭಕ್ತರಿಗೆ ಕೆಎಸ್ಆರ್‌ಟಿಸಿಯಿಂದ ಗುಡ್‌ನ್ಯೂಸ್ – ಶಬರಿಮಲೆಗೆ ವೋಲ್ವೋ ಬಸ್ ಸೇವೆ ಆರಂಭ

ಅಯ್ಯಪ್ಪ ಭಕ್ತರಿಗೆ ಕೆಎಸ್ಆರ್‌ಟಿಸಿಯಿಂದ ಗುಡ್‌ನ್ಯೂಸ್ – ಶಬರಿಮಲೆಗೆ ವೋಲ್ವೋ ಬಸ್ ಸೇವೆ ಆರಂಭ

ಬೆಂಗಳೂರು: ಪ್ರತಿ ವರ್ಷ ನವೆಂಬರ್‌, ಡಿಸೆಂಬರ್ ಹಾಗೂ ಜನವರಿಯಲ್ಲಿ ಭಕ್ತರು ಶಬರಿಮಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರೆ ಕೈಗೊಳ್ಳುತ್ತಾರೆ. ಜನವರಿಯಲ್ಲಿ ಮಕರ ಸಂಕ್ರಮಣದ ದಿನ ದೇಗುಲದಲ್ಲಿ ವಾರ್ಷಿಕ ಉತ್ಸವ ನಡೆಯಲಿದ್ದು, ಮಕರ ಜ್ಯೋತಿಯ ದರ್ಶನವಾಗುತ್ತದೆ. ಉತ್ಸವದ ದಿನ ಲಕ್ಷಾಂತರ ಭಕ್ತರು ಶಬರಿಮಲೆಗೆ ತೆರಳುತ್ತಾರೆ. ಕರ್ನಾಟಕದಿಂದಲೂ ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ  ಶಬರಿಮಲೆ ಅಯ್ಯಪ್ಪನ ದರ್ಶನಕ್ಕಾಗಿ ತೆರಳುವವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬೆಂಗಳೂರಿನಿಂದ ವಿಶೇಷ ಬಸ್​​ ವ್ಯವಸ್ಥೆ ಮಾಡಿದೆ.

ಹೌದು, ಪ್ರತಿವರ್ಷ ನವೆಂಬರ್, ಡಿಸೆಂಬರ್, ಹಾಗೂ ಜನವರಿ ತಿಂಗಳಲ್ಲಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕಾಗಿ ಅಯ್ಯಪ್ಪಸ್ವಾಮಿ ಮಾಲೆ ಧರಿಸಿಕೊಂಡು ಶಬರಿಗಿರಿಗೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತದೆ. ಶಬರಿಮಲೆಗೆ ಹೋಗಲು ಅನುಕೂಲ ಆಗುವಂತೆ ಈ ವರ್ಷದಿಂದ ಕೆಎಸ್‌ಆರ್‌ಟಿಸಿ ವತಿಯಿಂದ ಪ್ರತ್ಯೇಕ ವೋಲ್ವೋ ಬಸ್‌ ಸೇವೆಯನ್ನು ಆರಂಭಿಸಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್ ಕಾರ್ಯಚರಣೆ ನಡೆಸಲಿದೆ. ಬೆಂಗಳೂರಿಂದ ನೀಲಕ್ಕಲ್ (ಪಂಪಾ, ಶಬರಿಮಲೈ) ಮಾರ್ಗವಾಗಿ ವೋಲ್ವೋ ಬಸ್ ಸಂಚರಿಸಲಿದೆ.

ಇದನ್ನೂ ಓದಿ: ಅದ್ಧೂರಿ, ಆಡಂಬರ ಬಿಟ್ಟು ಸರಳ ವಿವಾಹವಾದ ಹೆಚ್ಚುವರಿ ಜಿಲ್ಲಾಧಿಕಾರಿ – ಮಂತ್ರಮಾಂಗಲ್ಯ ಮೂಲಕ ದಾಂಪತ್ಯಕ್ಕೆ ಕಾಲಿಟ್ಟ ಮದುಮಕ್ಕಳು

ಡಿಸೆಂಬರ್ 1 ರಿಂದ ಶಬರಿಮಲೆಗೆ ವೋಲ್ವೋ ಬಸ್ ಸಂಚರಿಸಲಿದೆ. ವೋಲ್ವೊ ಬಸ್​​ನ ಟಿಕೆಟ್ ದರ, ಮಾರ್ಗ, ಸಂಚಾರದ ವೇಳಾಪಟ್ಟಿಯ ಕುರಿತು ಕೆಎಸ್​ಆರ್​ಟಿಸಿ ಮಾಹಿತಿ ನೀಡಿದೆ. ಅಷ್ಟೇ ಅಲ್ಲದೇ ಬಸ್‌ ಟಿಕೆಟ್‌ ದರವನ್ನು ಕೂಡ ನಿಗದಿಪಡಿಸಿದೆ. ವಯಸ್ಕರಿಗೆ ಬೆಂಗಳೂರಿಂದ ಶಬರಿಮಲೆಗೆ 1600 ರೂಪಾಯಿ ದರ ನಿಗದಿ ಮಾಡಲಾಗಿದೆ. ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50 ಕ್ಕೆ ಹೊರಡಲಿರುವ ವೋಲ್ವೋ ಬಸ್ ಮರುದಿನ ಬೆಳಿಗ್ಗೆ 6.45 ಕ್ಕೆ ಪಂಪಾ ತಲುಪಲಿದೆ. ಅಂದು ಸಂಜೆ ಮತ್ತೆ ಪಂಪಾದಿಂದ ಹೊರಟು ಮರುದಿನ ಬೆಳಿಗ್ಗೆ 10 ಗಂಟೆಗೆ ಬೆಂಗಳೂರು ತಲುಪಲಿದೆ.

ಮತ್ತೊಂದು ರಾಜಹಂಸ ಬಸ್ (ನಾನ್‌ಎಸಿ) ಕೂಡ ಶಬರಿಮಲೆಗೆ ಸಂಚರಿಸಲಿದೆ. ರಾಜಹಂಸ ಬಸ್ ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 8.15ಕ್ಕೆ ಪಂಪಾ ತಲುಪಲಿದೆ. ಆ ದಿನ ಸಂಜೆ 5 ಗಂಟೆಗೆ ಪಂಪಾದಿಂದ ಹೊರಟು ಮರುದಿನ ಮಧ್ಯಾಹ್ನ 12 ಗಂಟೆಗೆ ಬೆಂಗಳೂರು ತಲುಪಲಿದೆ. ರಾಜಹಂಸದಲ್ಲಿ ಬೆಂಗಳೂರಿನಿಂದ ಶಬರಿಮಲೆಗೆ ಪ್ರತಿ ಟಿಕೆಟ್ ಬೆಲೆ 940 ರೂ. ಆಗಿದೆ.

ಶಬರಿಮಲೆ ಬಸ್ಗೆ ಟಿಕೆಟ್ ಬುಕಿಂಗ್ ಹೇಗೆ?

ಕೆಎಸ್​ಆರ್​ಟಿಸಿ ಅಧಿಕೃತ ವೆಬ್​ಸೈಟ್ (www.ksrtc.in) ಮೂಲಕ ಅಥವಾ ರಾಜ್ಯದಾದ್ಯಂತ ಪ್ರಮುಖ ಬಸ್ ಡಿಪೋಗಳಲ್ಲಿ ಕಾರ್ಯನಿರ್ವಹಿಸುವ ಕೆಎಸ್‌ಆರ್‌ಟಿಸಿ ಟಿಕೆಟ್ ಕೌಂಟರ್‌ಗಳಲ್ಲಿ ಟಿಕೆಟ್ ಕಾಯ್ದಿರಿಸುವಂತೆ ಸಂಸ್ಥೆಯು ಪ್ರಯಾಣಿಕರಿಗೆ ಸಲಹೆ ನೀಡಿದೆ.

ಕೆಎಸ್​ಆರ್​ಟಿಸಿ ಪ್ಯಾಸೆಂಜರ್​ ಅಡ್ವೈಸರಿಯಲ್ಲಿರುವ ಮಾಹಿತಿ ಪ್ರಕಾರ, ಕರ್ನಾಟಕ ರಾಜ್ಯದಾದ್ಯಂತ ಮತ್ತು ನೆರೆಯ ರಾಜ್ಯಗಳ ಪ್ರಮುಖ ಕಡೆಗಳಲ್ಲಿ ಒಟ್ಟು 707 ಟಿಕೆಟ್ ಕೌಂಟರ್‌ಗಳು ಕಾರ್ಯನಿರ್ವಹಿಸುತ್ತಿವೆ.

Shwetha M