ಮತದಾನದ ಬೆನ್ನಲ್ಲೇ ಸಿಂಗಾಪುರಕ್ಕೆ ಹಾರಿದ ಕುಮಾರಣ್ಣ – ಕಾರಣವೇನು ಗೊತ್ತಾ?

ಮತದಾನದ ಬೆನ್ನಲ್ಲೇ ಸಿಂಗಾಪುರಕ್ಕೆ ಹಾರಿದ ಕುಮಾರಣ್ಣ – ಕಾರಣವೇನು ಗೊತ್ತಾ?

ದೇಶಾದ್ಯಂತ ಕುತೂಹಲ. ಅಭ್ಯರ್ಥಿಗಳ ಎದೆಯಲ್ಲಿ ಡವಡವ. ಮತದಾರರೆಲ್ಲಾ ಮತಮುದ್ರೆ ಒತ್ತಿದ್ದು ಸೋಲು ಗೆಲುವಿನ ಭವಿಷ್ಯ ಬರೆದಾಗಿದೆ. ಮೇ 10ರಂದು ಯಶಸ್ವಿಯಾಗಿ ಮತದಾನ ಮುಗಿದಿದ್ದು ಮೇ 13ರಂದು ಫಲಿತಾಂಶ ಹೊರಬೀಳಲಿದೆ. ಮತದಾನ ಮುಕ್ತಾಯಗೊಂಡ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿದೇಶಕ್ಕೆ ಹಾರಿದ್ದಾರೆ.

ಇದನ್ನೂ ಓದಿ : ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ – ಮಂಗಳೂರಿನ 5 ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144

ಹೆಚ್.ಡಿ ಕುಮಾರಸ್ವಾಮಿಯವರು ಬುಧವಾರ ತಡರಾತ್ರಿ ಆಪ್ತರ ಜೊತೆ ಬೆಂಗಳೂರಿನಿಂದ ಸಿಂಗಾಪುರಕ್ಕೆ ತೆರಳಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಕಳೆದ ಆರು ತಿಂಗಳಿನಿಂದ ಸತತ ಪ್ರಚಾರ, ಪ್ರವಾಸದಿಂದ ಸುಸ್ತಾಗಿದ್ದ ಹೆಚ್‍ಡಿಕೆ ಎರಡು ದಿನಗಳ ಕಾಲ ವಿಶ್ರಾಂತಿಗಾಗಿ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆಂದು ಮೂಲಗಳು ತಿಳಿಸಿವೆ. ಸಿ ವೋಟರ್ ಸಮೀಕ್ಷೆಯ ಪ್ರಕಾರ ಬಿಜೆಪಿ 83 ರಿಂದ 95 ಸ್ಥಾನ ಗಳಿಸಬಹುದು ಎಂದು ಅಂದಾಜಿಸಲಾಗಿದ್ದು, ಕಾಂಗ್ರೆಸ್ 100 ಸ್ಥಾನದಿಂದ 112 ಸ್ಥಾನ ಗಳಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇನ್ನು ಜೆಡಿಎಸ್ 21 ರಿಂದ 29 ಸ್ಥಾನ ಪಡೆಬಹುದು ಎಂದು ಹೇಳಿದೆ, ಪಕ್ಷೇತರ ಅಭ್ಯರ್ಥಿಗಳು ಇಬ್ಬರಿಂದ 6 ಜನ ಗೆಲ್ಲಬಹುದು ಎಂದು ಅಂದಾಜು ಲೆಕ್ಕ ನೀಡಿದೆ. ಚುನಾವಣೋತ್ತರ ಸಮೀಕ್ಷೆಗಳಲ್ಲಿ ಒಂದೊಂದು ರೀತಿಯ ಫಲಿತಾಂಶ ಬಂದಿದೆ. ಹೀಗಾಗಿ ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ಎನ್ನುವುದು ಕುತೂಹಲ ಮೂಡಿಸಿದೆ.

suddiyaana