ರಮೇಶ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆಗೆ ಕುಮಾರಸ್ವಾಮಿ ಸ್ಪಷ್ಟನೆ
ಕೀಳುಮಟ್ಟದ ಪದ ಉಪಯೋಗಿಸಿದ್ದಕ್ಕೆ ಕುಮಾರಸ್ವಾಮಿ ವಿಷಾದ

ರಮೇಶ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆಗೆ ಕುಮಾರಸ್ವಾಮಿ ಸ್ಪಷ್ಟನೆಕೀಳುಮಟ್ಟದ ಪದ ಉಪಯೋಗಿಸಿದ್ದಕ್ಕೆ ಕುಮಾರಸ್ವಾಮಿ ವಿಷಾದ

ಕೋಲಾರ : ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವ್ರ ಬಗ್ಗೆ ಕೀಳುಮಟ್ಟದ ಪದ ಉಪಯೋಗಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ, ನಂತರ ವಿಷಾದ ವ್ಯಕ್ತಪಡಿಸಿದ್ದಾರೆ. ಜೆಡಿಎಸ್‌ನ ಪಂಚರತ್ನ ರಥಯಾತ್ರೆಯಲ್ಲಿ ಕೋಲಾರದ ಶ್ರೀನಿವಾಸಪುರಕ್ಕೆ ತಲುಪಿದಾಗ ಸ್ಥಳೀಯ ಶಾಸಕ ರಮೇಶ್‌ ಕುಮಾರ್‌ ವಿರುದ್ಧ ಕುಮಾರಸ್ವಾಮಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು. ಮಂಗಳವಾರ ಶ್ರೀನಿವಾಸಪುರ ತಾಲ್ಲೂಕು ಮಾಸ್ತೇನಹಳ್ಳಿ ಗ್ರಾಮದಲ್ಲಿ ಶಿಥಿಲವಾದ ಸರ್ಕಾರಿ ಶಾಲೆಯ ಕಟ್ಟಡ ವೀಕ್ಷಣೆ ಬಳಿಕ ಕಾರು ಹತ್ತುವ ವೇಳೆ ರಮೇಶ್ ಕುಮಾರ್ ಅವರ ವಿರುದ್ಧ ಸೂ* **ಗ ಎಂದೆಲ್ಲಾ ಅಶ್ಲೀಲವಾಗಿ ಕುಮಾರಸ್ವಾಮಿ ಬೈದಿದ್ದರು.

ಇದನ್ನೂ ಓದಿ :  ಮಂಗಳೂರು ಸ್ಫೋಟ ಪ್ರಕರಣ- ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಥಳಕ್ಕೆ ಭೇಟಿ, ಪರಿಶೀಲನೆ

ಪಂಚರತ್ನ ರಥಯಾತ್ರೆಯಲ್ಲಿ ಶ್ರೀನಿವಾಸಪುರದ ಮಾಸ್ತೇನಹಳ್ಳಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ್ದಾಗ ಅಲ್ಲಿನ ವಿದ್ಯಾರ್ಥಿಗಳು ಶಾಲಾ ಕಟ್ಟಡವನ್ನು ಸರಿಪಡಿಸುವಂತೆ ಕುಮಾರಸ್ವಾಮಿಯವರಿಗೆ ಮನವಿ ಮಾಡಿದ್ದರು. ಆಗ ರಮೇಶ್‌ ಕುಮಾರ್‌ ಉದ್ದೇಶಿಸಿ ಕುಮಾರಸ್ವಾಮಿ ಆಡಿರುವ ಬೈಗುಳದ ವಿಡಿಯೋ ವೈರಲ್ ಆಗಿತ್ತು. ಈ ವೇಳೆ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಇತರರು ಕಾರಿನಲ್ಲಿ ಹಿಂದಿನ ಸೀಟಿನಲ್ಲಿರುವುದು ಕಂಡುಬಂದಿದೆ. ತಾನು ಬೈದಿರೋ ವಿಡೀಯೋ ವೈರಲ್ ಆಗುತ್ತಿದ್ದಂತೆ ಟ್ವಿಟರ್​ ಮೂಲಕ ಹೆಚ್.​ಡಿ.ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ. ಮಾಜಿ ಸ್ಪೀಕರ್ ಶ್ರೀ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆ ಎಂದು ಹೆಚ್‌ಡಿಕೆ ಟ್ವೀಟ್ ಮಾಡಿದ್ದಾರೆ.

ನಿನ್ನೆ ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಬಂಗವಾದಿ ಗ್ರಾಮದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಶಾಲೆ ಕಂಡು ನನಗೆ ಬಹಳ ಬೇಸರವಾಗಿತ್ತು. ಮಕ್ಕಳು 2-3 ವರ್ಷದಿಂದ ಎದುರಿನ ಅಶ್ವತ್ಥಕಟ್ಟೆ ಮೇಲೆ ಪಾಠ ಕೇಳುತ್ತಿದ್ದರು ಎಂದು ಕೇಳಿ ನನ್ನಲ್ಲಿ ಆಕ್ರೋಶ ಉಂಟಾಗಿತ್ತು. ಈ ಆಕ್ರೋಶದ ಹಿನ್ನೆಲೆಯಲ್ಲಿ ಮಾತನಾಡುವ ಭರದಲ್ಲಿ ಹಾಗೆ ಮಾತನಾಡಿದ್ದೇನೆ ಹೊರತು, ಯಾರಿಗೂ ಅಪಮಾನ ಮಾಡುವುದಕ್ಕೆ ಅಲ್ಲ. ಮಕ್ಕಳ ಕಣ್ಣೀರು ನನ್ನ ಸಿಟ್ಟಿಗೆ ಕಾರಣವಾಯಿತು ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ ಎಂದು ಕುಮಾರಸ್ವಾಮಿ ತಮ್ಮ ಬೈಗುಳಕ್ಕೆ ಸ್ವಷ್ಟನೆ ನೀಡಿದ್ದಾರೆ

suddiyaana