ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಶನಿವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಕಾವೇರಿಗಾಗಿ ಆಸ್ಪತ್ರೆಯಿಂದಲೇ ಹೋರಾಟಕ್ಕೆ ಕರೆ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಶನಿವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಕಾವೇರಿಗಾಗಿ ಆಸ್ಪತ್ರೆಯಿಂದಲೇ ಹೋರಾಟಕ್ಕೆ ಕರೆ

ರಾಜ್ಯದಲ್ಲಿ ಮೊದಲೇ ಮಳೆಯ ಕೊರತೆ ಎದುರಾಗಿದೆ. ಇದರ ಮಧ್ಯೆ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹೋರಾಟ ಕೂಡಾ ಆರಂಭವಾಗಿದೆ. ಮಂಡ್ಯ, ರಾಮನಗರ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಇತ್ತ ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ನಗರದ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿದ್ದುಕೊಂಡೇ ಕಾವೇರಿ ನೀರಿಗಾಗಿ ಹೋರಾಟ ಆರಂಭಿಸುವಂತೆ ಕರೆ ಕೊಟ್ಟಿದ್ದಾರೆ.

ಇದನ್ನೂ ಓದಿ: ದೇವರ ಪ್ರಸಾದ ಹಿಡಿದುಕೊಂಡು ಮಗನ ನೋಡಲು ಬಂದ ಚೆನ್ನಮ್ಮ ದೇವೇಗೌಡ

ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿಯವರು ಶನಿವಾರ ಡಿಸ್ಚಾರ್ಜ್ ಆಗಲಿದ್ದಾರೆ. ಕುಮಾರಸ್ವಾಮಿಯವರ ಆರೋಗ್ಯ ವಿಚಾರಿಸಲೆಂದು ಆಸ್ಪತ್ರೆಗೆ ಆಗಮಿಸಿದ್ದ ಮಳವಳ್ಳಿ ಮಾಜಿ ಶಾಸಕ ಅನ್ನದಾನಿ, ಕಾವೇರಿ ನದಿ ನೀರು ಹಂಚಿಕೆ ಬಗ್ಗೆ ಚರ್ಚಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಶಾಸಕ ಅನ್ನದಾನಿ, ಕುಮಾರಸ್ವಾಮಿಯವರು ಅರ್ಧಗಂಟೆಗೂ ಹೆಚ್ಚು ಕಾಲ ನನ್ನೊಟ್ಟಿಗೆ ಮಾತನಾಡಿದ್ದಾರೆ. ಆರೋಗ್ಯವಾಗಿದ್ದಾರೆ. ಕಾವೇರಿ ನೀರು ಉಳಿವಿಗಾಗಿ ಹೋರಾಟ ಶುರು ಮಾಡಿ ಅಂತ ಕರೆ ಕೊಟ್ಟಿದ್ದಾರೆ. ಸೆಪ್ಟೆಂಬರ್ 2ರಿಂದ ರಾಷ್ಟ್ರೀಯ ಅಧ್ಯಕ್ಷರಾದ ದೇವೆಗೌಡರ ನೇತೃತ್ವದಲ್ಲಿ ಚಳುವಳಿ ಆರಂಭವಾಗಲಿದೆ ಎಂದರು. ಸದ್ಯದ ನೀರಿನ ಪರಿಸ್ಥಿತಿ ಬಹಳ ಕೆಟ್ಟದಾಗಿದೆ. ಮುಂದಿನ ದಿನಗಳಲ್ಲಿ ಮಂಡ್ಯ ಸೇರಿದಂತೆ ಬೆಂಗಳೂರಿಗೂ ನೀರಿನ ಅಭಾವ ಎದುರಾಗಲಿದೆ. ಹೀಗಾಗಿ ಚಳುವಳಿ ಅಗತ್ಯವಿದೆ ಎಂದು ಕುಮಾರಣ್ಣ ಹೇಳಿದ್ದಾರೆ. ಅದರಂತೆ ನಾಳೆಯಿಂದ ಚಳುವಳಿ ಆರಂಭಿಸಿಸುತ್ತೇವೆ ಎಂದು ಅನ್ನದಾನಿ ತಿಳಿಸಿದರು.

suddiyaana