ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಫೈರಿಂಗ್ – ಚರ್ಚ್ ಎದುರೇ ಗುಂಡಿಕ್ಕಿ ಹ*ತ್ಯೆ ಮಾಡಿದ ಪಾಪಿ

ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಫೈರಿಂಗ್ –  ಚರ್ಚ್ ಎದುರೇ  ಗುಂಡಿಕ್ಕಿ ಹ*ತ್ಯೆ ಮಾಡಿದ ಪಾಪಿ

ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ನೆತ್ತರು ಹರಿದಿದೆ. ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಕುಂದಾಪುರದ ಚರ್ಚ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಮೃತ ವ್ಯಕ್ತಿ.

ಇದನ್ನೂ ಓದಿ: ಬೀಗ ಒಡೆದಿಲ್ಲ, ಶೆಟರ್ ತೆಗೆದಿಲ್ಲ – ಜ್ಯುವೆಲ್ಲರಿ ಶಾಪ್‌ನಲ್ಲಿ 10 ಲಕ್ಷ ಮೌಲ್ಯದ ಜ್ಯುವೆಲ್ಲರಿ ಕದಿದ್ದು ಯಾರು ಗೊತ್ತಾ?

ಮುಂಜಾನೆ 3:30 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಈ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಐವನ್ ರಿಚರ್ಡ್ ಅವರು ಕೆಲವು ವ್ಯವಹಾರಗಳನ್ನು ನಡೆಸುತ್ತಿದ್ದರು. ತಮ್ಮ ಮೊದಲ ಪತ್ನಿಯನ್ನು ತೊರೆದು, ಬಾರ್ಕೂರು ಮೂಲದ ಮಹಿಳೆಯೊಂದಿಗೆ ಅವರು ವಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮುಂಜಾನೆ ಮಹಿಳೆಯೊಂದಿಗೆ ಕಾರಿನಲ್ಲಿ ಕುಂದಾಪುರದ ಚರ್ಚ್ ರಸ್ತೆಗೆ ಬಂದಿದ್ದ ವೇಳೆ, ಹೋಲಿ ರೋಸರಿ ಚರ್ಚ್ ಎದುರು ಅಪರಿಚಿತ ವ್ಯಕ್ತಿಯೊಬ್ಬ ಪಿಸ್ತೂಲ್‌ನಿಂದ ಐವನ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಗುಂಡೇಟಿನಿಂದ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಜೊತೆಯಲ್ಲಿದ್ದ ಮಹಿಳೆ ಆರೋಪಿಯನ್ನು ಗುರುತಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಕುಂದಾಪುರ ಪೊಲೀಸರು ಹಾಗೂ ಸೊಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ಸಂಬಂಧ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾಗಿರುವ ಆರೋಪಿಯ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

Kishor KV

Leave a Reply

Your email address will not be published. Required fields are marked *