ಬೆಂಗಳೂರಿನ ಇತಿಹಾಸದಲ್ಲೇ ಮೊದಲ ಬಾರಿಗೆ ಕೆರೆ ಸೀಜ್! – ಕಾರಣ ಏನು ಗೊತ್ತಾ?
ಅಕ್ರಮ ಚಟುವಟಿಕೆಗಳಿಗೆ ಬಳಸಿದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಳ್ಳುವುದು ಕಾಮನ್. ಆದ್ರೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾಡಳಿತ ಕೆರೆಯೊಂದನ್ನು ಸೀಜ್ ಮಾಡಿದ್ದಾರೆ.
ಹೌದು, ಬೆಂಗಳೂರಿನ ಜಿಗಣಿ ವ್ಯಾಪ್ತಿಯಲ್ಲಿರೋ ಹೆನ್ನಾಗರ ಕೆರೆಯನ್ನು ಬೆಂಗಳೂರಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸೀಜ್ ಮಾಡಿದ್ದಾರೆ. ಆನೇಕಲ್ ತಹಶೀಲ್ದಾರ್ ವಶಕ್ಕೆ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಕೆರೆಯ ಒಳಗೆ ಪ್ರವೇಶಿಸುವ ಮಾರ್ಗಗಳನ್ನು ಜಿಲ್ಲಾಡಳಿತ ಬಂದ್ ಮಾಡಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಭಾರತದಲ್ಲೂ ಸೈಬೀರಿಯನ್ ಹುಲಿಗಳ ಘರ್ಜನೆ! – ಯೂರೋಪ್‌ನಿಂದ ಡಾರ್ಜಿಲಿಂಗ್ ಮೃಗಾಲಯಕ್ಕೆ ಹುಲಿಗಳ ಆಗಮನ
ಏನಿದು ಪ್ರಕರಣ?
ಜಿಗಣಿ ವ್ಯಾಪ್ತಿಯಲ್ಲಿರೋ ಹೆನ್ನಾಗರ ಕೆರೆಯ ಒತ್ತುವರಿ ಕಾರ್ಯವನ್ನು ಖಾಸಗಿ ಕಂಪನಿಯೊಂದು ನಡೆಸುತ್ತಿತ್ತು. ಕೆರೆ ಒಳಗಡೆ ಮಣ್ಣು ಹಾಕಿ ಮುಚ್ಚಲು ಯತ್ನಿಸಲಾಗುತ್ತಿತ್ತು. ಹೆನ್ನಾಗರ ಕೆರೆ ಒತ್ತುವರಿ ಕಾರ್ಯ ಮಾಡುತ್ತಿರುವ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಆನೇಕಲ್ ತಹಶೀಲ್ದಾರ್ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.ದೀರು ದಾಖಲಾದ ಬೆನ್ನಲ್ಲೇ ಕೆರೆ ಒತ್ತುವರಿ ಬಗ್ಗೆ ಅಧಿಕಾರಿಗಳು ಪರಿಶೀಲನೆ ಮಾಡಿ ಖಾಸಗಿ ಕಂಪನಿ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಕೆರೆಯನ್ನು ಮುಚ್ಚಲು ಲಾರಿಗಳಲ್ಲಿ ಮಣ್ಣನ್ನು ಕೊಂಡೊಯ್ಯುತ್ತಿದ್ದವರನ್ನು ತಡೆಯಲಾಗಿದೆ. ಈಗ ಒಳಗಡೆ ಯಾವುದೇ ವಾಹನ ಪ್ರವೇಶ ಮಾಡದಂತೆ ಕೆರೆಯ ಪ್ರವೇಶ ದ್ವಾರಗಳನ್ನು ಬ್ಯಾರಿಕೇಡ್ ಹಾಗೂ ಕಬ್ಬಿಣದ ಸರಳುಗಳನ್ನು ಹಾಕಿ ಬಂದ್ ಮಾಡಲಾಗಿದೆ. ತಹಶೀಲ್ದಾರ್ ದೂರಿನ ಅನ್ವಯ ಜಿಗಣಿ ಪೊಲೀಸ್ ಠಾಣೆ ಪೊಲೀಸರು ಕೆರೆಯ ಪ್ರವೇಶದ್ವಾರಗಳನ್ನು ಮುಚ್ಚಿದ್ದಾರೆ. ಒತ್ತುವರಿ ಮಾಡುತ್ತಿದ್ದ ವೀಡಿಯೋ ಆಧರಿಸಿ ತಹಶೀಲ್ದಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಇದೀಗ ಖಾಸಗಿ ಕಂಪನಿ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ.