ಕೇದಾರನಾಥ ಜ್ಯೋತಿರ್ಲಿಂಗ ದರ್ಶನಕ್ಕೆ ಲಕ್ಷ ಲಕ್ಷ ಭಕ್ತರು – ಆರಂಭದಲ್ಲೇ ಭಕ್ತರ ಸಂಖ್ಯೆ ಹೆಚ್ಚಾಗಿದ್ದಕ್ಕೆ ಆರೋಗ್ಯ ಇಲಾಖೆ ಅಲರ್ಟ್

ಪವಿತ್ರ ಜ್ಯೋತಿರ್ಲಿಂಗದ ನೆಲೆಯಾದ ಕೇದಾರನಾಥ ದೇಗುಲಕ್ಕೆ ಬರುವ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ಉತ್ತರಾಖಂಡದ ಪವಿತ್ರ ಚಾರ್ ಧಾಮ್ ಯಾತ್ರೆಗಳಲ್ಲಿ ಒಂದಾದ ಕೇದಾರನಾಥ ಧಾಮಕ್ಕೆ ಈಗಾಗಲೇ 5 ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿದ್ದಾರೆ. ಭಕ್ತರ ಸಂಖ್ಯೆ ವಿಪರೀತ ಹೆಚ್ಚಾಗುತ್ತಿರುವ ಬೆನ್ನಲ್ಲೇ, ರುದ್ರಪ್ರಯಾಗ ಜಿಲ್ಲಾ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ಹೈ ಅಲರ್ಟ್ ಘೋಷಿಸಿದೆ.
ಇದನ್ನೂ ಓದಿ:ಇನ್ಮುಂದೆ CBT ಮಾದರಿಯಲ್ಲಿ NEET ಪರೀಕ್ಷೆ! – ಜೂನ್ 21ಕ್ಕೆ ರೀ-ಎಕ್ಸಾಮ್!
ಹಿಮಾಲಯದ ಮಡಿಲಲ್ಲಿರುವ ಕೇದಾರನಾಥಕ್ಕೆ ಈ ವರ್ಷ ದೇಶದ ವಿವಿಧ ಮೂಲೆಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಆರಂಭಿಕ ಹಂತದಲ್ಲೇ ಈ ಮಟ್ಟದ ಸಂಖ್ಯೆ ದಾಖಲಾಗಿರುವುದು ಪ್ರವಾಸೋದ್ಯಮ ಇಲಾಖೆಗೂ ಅಚ್ಚರಿ ಮೂಡಿಸಿದೆ. ಯಾತ್ರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ. ಯಾತ್ರಾ ಮಾರ್ಗದುದ್ದಕ್ಕೂ ಸುಮಾರು 52,000ಕ್ಕೂ ಹೆಚ್ಚು ಭಕ್ತರಿಗೆ ಪ್ರಾಥಮಿಕ ಆರೋಗ್ಯ ತಪಾಸಣೆ ನಡೆಸಲಾಗಿದೆ. ಈವರೆಗೆ 62,000 ಜನರು ಒಪಿಡಿ (OPD) ಸೌಲಭ್ಯವನ್ನು ಬಳಸಿಕೊಂಡಿದ್ದಾರೆ. ಗಂಭೀರ ಅನಾರೋಗ್ಯಕ್ಕೆ ಒಳಗಾದ 26 ಯಾತ್ರಿಕರನ್ನು ಹೆಲಿಕಾಪ್ಟರ್ ಮೂಲಕ ತುರ್ತಾಗಿ ಏರ್‌ಲಿಫ್ಟ್ ಮಾಡಿ ಉನ್ನತ ಚಿಕಿತ್ಸೆಗೆ ರವಾನಿಸಲಾಗಿದೆ. ಎತ್ತರದ ಪ್ರದೇಶಗಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಿರುವುದರಿಂದ, ಈ ಬಾರಿ ಇಸಿಜಿ ತಪಾಸಣೆಯನ್ನು ಕಡ್ಡಾಯಗೊಳಿಸಲಾಗಿದೆ.
ಎತ್ತರದ ಪ್ರದೇಶಗಳಲ್ಲಿನ ಹವಾಮಾನ ವೈಪರೀತ್ಯವು ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಬಹುದು. ಆದ್ದರಿಂದ, ಶ್ವಾಸಕೋಶದ ಕಾಯಿಲೆ ಇರುವವರು ಮತ್ತು ಸಣ್ಣ ಮಕ್ಕಳನ್ನು ಈ ಕಠಿಣ ಯಾತ್ರೆಗೆ ಕರೆತರಬೇಡಿ ರುದ್ರಪ್ರಯಾಗದ ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ರಾಮ್ ಪ್ರಕಾಶ್ ಮನವಿ ಮಾಡಿದ್ದಾರೆ.

ನೋಡಿರಿ

