ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರೋದು ಫಿಕ್ಸ್ – ಬೆಂಗಳೂರಿನಲ್ಲಿ ಡಿಕೆಶಿ, ಸಿದ್ದು ಭೇಟಿ ಬಳಿಕ ಘೋಷಣೆ!?

ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರೋದು ಫಿಕ್ಸ್ – ಬೆಂಗಳೂರಿನಲ್ಲಿ ಡಿಕೆಶಿ, ಸಿದ್ದು ಭೇಟಿ ಬಳಿಕ ಘೋಷಣೆ!?

ಕರ್ನಾಟಕ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಬಹುತೇಕ ಕ್ಷೇತ್ರಗಳಿಗೆ ಪಕ್ಷಗಳು ಟಿಕೆಟ್ ಘೋಷಣೆ ಮಾಡಿದ್ದು, ನಾಮಿನೇಷನ್, ಪ್ರಚಾರ ಸೇರಿದಂತೆ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಆದರೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಆಕಾಂಕ್ಷಿಗಳು ಟಿಕೆಟ್ ಕೈತಪ್ಪಿದ ಸಿಟ್ಟಿನಲ್ಲಿದ್ದು ಪಕ್ಷಾಂತರ ಪರ್ವ ನಡೆಯುತ್ತಿದೆ. ಅದ್ರಲ್ಲೂ ಅಥಣಿ ಕ್ಷೇತ್ರದ ಟಿಕೆಟ್ ಮಿಸ್ ಆಗಿದ್ದಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾಗುವ ಎಲ್ಲಾ ಲಕ್ಷಣಗಳು ಕಾಣ್ತಿವೆ.

ಇದನ್ನೂ ಓದಿ : ಮತ್ತೆ ತೆನೆ ಹೊತ್ತ ದತ್ತಾ..! – ಕಡೂರಿನಿಂದ ಜೆಡಿಎಸ್ ಟಿಕೆಟ್ ಫಿಕ್ಸ್

ಅಥಣಿ (Athani) ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಲಕ್ಷ್ಮಣ ಸವದಿ (Laxman Savdi)ಗೆ ಟಿಕೆಟ್​​ ಕೈ ತಪ್ಪಿದ್ದು, ಪಕ್ಷದ ವಿರುದ್ಧ ಸೆಡ್ಡು ಹೊಡೆದಿದ್ದಾರೆ. ಪಕ್ಷ ಹಾಗೂ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್​ ಸೇರುವ ಸಾಧ್ಯತೆ ಇದೆ. ಈ ಸಂಬಂಧ ಇಂದು (ಏ.14) ಕಾಂಗ್ರೆಸ್ (Congress)​ ಎಂಎಲ್​ಸಿ ಚನ್ನರಾಜ ಹಟ್ಟಿಹೊಳಿ ಜತೆಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಲಕ್ಷ್ಮಣ ಸವದಿ ಇಂದು ಸಂಜೆ 4ಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನ ಭೇಟಿಯಾಗಿ, ರಾಜೀನಾಮೆ ಸಲ್ಲಿಸುವೆ. ನಂತರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವೆ. ಬಿಜೆಪಿ ತೊರೆಯಲು ನಿನ್ನೆಯೇ ನಿರ್ಧಾರ ಮಾಡಿದ್ದೇನೆ. ಹಾಗಾಗಿ ಬಿಜೆಪಿಯ ಯಾವುದೇ ನಾಯಕರನ್ನು ಭೇಟಿಯಾಗಲ್ಲ. ನಾನು ಇನ್ನೂ ಬಿಜೆಪಿ ಮನೆಯಲ್ಲೇ ಇದ್ದೇನೆ, ಬೇರೆ ಮಾತಾಡಲ್ಲ. ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ನಂತರ ಬೇರೆ ವಿಚಾರದ ಚರ್ಚೆ ಎಂದು ಹೇಳಿದ್ದಾರೆ.

ರಾಜೀನಾಮೆ ಕೊಟ್ಟ ಬಳಿಕ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರ ಭೇಟಿ ಬಗ್ಗೆ ಆಲೋಚನೆ ಮಾಡುತ್ತೇನೆ. ಚನ್ನರಾಜ ಹಟ್ಟಿಹೊಳಿ ನನ್ನ ಜೊತೆ ಬಂದಿದ್ದಾರೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಭೇಟಿಯಾಗೋಣ ಅಂತಾ ಅವರೇ ಹೇಳುತ್ತಿದ್ದಾರೆ. ರಾಜೀನಾಮೆ ಬಳಿಕ ಕೆಲವು ವಿಚಾರ ಅವರ ಜೊತೆ ಹಂಚಿಕೊಳ್ಳುತ್ತೇನೆ. ಆ ವಿಚಾರಗಳಿಗೆ ಅವರು ಒಪ್ಪಿದರೆ ತೀರ್ಮಾನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

suddiyaana