ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ನ್ಯೂಸ್! – 15 ದಿನದೊಳಗೆ ಮನೆ ಯಜಮಾನಿ ಖಾತೆಗೆ ಹಣ ಜಮೆ!
ಕಾಂಗ್ರೆಸ್ ಸರ್ಕಾರ ಘೋಷಿಸಿರುವ 5 ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮೀ ಯೋಜನೆಯೂ ಒಂದು. ಇದೀಗ ಈ ಯೋಜನೆ ಜಾರಿಯಾಗಿದ್ದು, ರಾಜ್ಯದ ಹಲವು ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ರೂಪಾಯಿ ಹಣ ಜಮೆಯಾಗಿದೆ. ಆದರೆ ಆದರೆ, ಇನ್ನೂ ಕೆಲವರ ಅಕೌಂಟ್ಗೆ ಹೋಗಿಲ್ಲ. ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಮುಂದಿನ 15 ದಿನದೊಳಗೆ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಹಣ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾಗೆ 2000 ರೂಪಾಯಿ ಹಣ ಬರುತ್ತಿಲ್ಲ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬುಧವಾರ ಬೆಂಗಳೂರಿನ ಮಲ್ಲೇಶ್ವರಂನ ಬೆಂಗಳೂರು ಒನ್ ಕೇಂದ್ರಕ್ಕೆ ಭೇಟಿ ನೀಡಿ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಪ್ರತಿ ಜಿಲ್ಲೆಯಿಂದಲೂ ಈ ಕುರಿತು ಮಾಹಿತಿ ಪಡೆಯುತ್ತಿದ್ದಾರೆ. ಈ ಹಿನ್ನಲೆ ರಾಜ್ಯದ ಎಲ್ಲಾ ಜಿಲ್ಲೆಗಳ ಸಿಡಿಪಿಒ(CDPO) ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗೃಹಲಕ್ಷ್ಮೀ ಯೋಜನೆಯನ್ನು ಜಾರಿ ಮಾಡಿದ ಮೇಲೆ ಮಹಿಳೆಯರಿಗೆ ಉಪಯೋಗವಾಗಿತ್ತಿದೆ. ಆಗಸ್ಟ್ 1.8 ಕೋಟಿ ಜನ ಮಹಿಳೆಯರು, ಸೆಪ್ಟೆಂಬರ್ ತಿಂಗಳಲ್ಲಿ 1.14 ರಷ್ಟು ಜನ ರಿಜಿಸ್ಟರ್ ಮಾಡಿಕೊಂಡಿದ್ದರೆ, ಅಕ್ಟೋಬರ್ ತಿಂಗಳಲ್ಲಿ 1.16 ರಷ್ಟು ಮಹಿಳೆಯರಿಗೆ ರಿಜಿಸ್ಟರ್ ಮಾಡಿಕೊಂಡಿದ್ದಾರೆ. ಇನ್ನು ತಾಂತ್ರಿಕ ಸಮಸ್ಯೆಯಿಂದಾಗಿ ಮಹಿಳೆಯರ ಖಾತೆಗೆ ಹಣ ಹೋಗಿಲ್ಲ, ಇದರ ಜೊತೆಗೆ ಆಧಾರ್ ಲಿಂಕ್ ಆಗದಿರುವುದಕ್ಕೆ ಸಮಸ್ಯೆ ಆಗುತ್ತಿದೆ. ಹೀಗಾಗಿ ಇಂದು ತಾಂತ್ರಿಕ ಸಮಸ್ಯೆಗಳ ಕುರಿತು ಮಾಹಿತಿ ಪಡೆದಿದ್ದೇನೆ. ಇನ್ನು 15 ದಿನದೊಳಗೆ ಎಲ್ಲರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಹಣ ಹೋಗಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ 5 ಲಕ್ಷ ಫಲಾನುಭವಿಗಳಿಗೆ ಗೃಹ ಲಕ್ಷ್ಮೀ ಹಣ ಹೋಗಿಲ್ಲ ಎಂದ ಲಕ್ಷ್ಮೀ ಹೆಬ್ಬಾಳ್ಕರ್ ‘ ಸೆಪ್ಟೆಂಬರ್ ತಿಂಗಳಿನಲ್ಲಿ 2,288 ಕೋಟಿ ರೂಪಾಯಿ, ಅಕ್ಟೋಬರ್ ತಿಂಗಳಿನಲ್ಲಿ 2,400 ಕೋಟಿ ಹಣ ಬಿಡುಗಡೆಯಾಗಿದೆ. ಆದ್ರೆ, 12 ಲಕ್ಷ ಜನರಿಗೆ ದುಡ್ಡು ಹೋಗಿಲ್ಲ, ಬ್ಯಾಂಕ್ ಖಾತೆಯಲ್ಲೇ ಇದೆ. ದೀಪಾವಳಿಗೆ ಎಲ್ಲರ ಖಾತೆಗೂ ಹಣ ಹೋಗಬೇಕೆಂದು ಸಿಎಂ ಹೇಳಿದ್ದಾರೆ. 15 ದಿನದೊಳಗೆ ಎಲ್ಲರ ಖಾತೆಗೆ ಹಣ ಬರಲಿದೆ. 3 ತಿಂಗಳ ಹಣ ಬಂದಿಲ್ಲ ಅಂದರೆ, ಒಟ್ಟಿಗೆ 6 ಸಾವಿರ ರೂಪಾಯಿ ಸಿಗುತ್ತೆ ಎಂದು ಬೆಂಗಳೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೇಳಿದರು. ಇದರ ಜೊತೆಗೆ ‘1902’ ಹೆಲ್ಪ್ ಲೈನ್ ನಂಬರ್ ಇದ್ದು, ಇದಕ್ಕೆ ಕೆರೆಮಾಡಿ ಮಹಿಳೆಯರು ಮಾಹಿತಿಯನ್ನ ಪಡೆದುಕೊಳ್ಳಬಹುದು ಎಂದು ಮಾಹಿತಿ ನೀಡಿದ್ದಾರೆ.