ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್‌ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಲಕ್ಷ್ಮೀ ಹೆಬ್ಬಾಳ್ಕರ್‌  

ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್‌ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಲಕ್ಷ್ಮೀ ಹೆಬ್ಬಾಳ್ಕರ್‌  

ರಸ್ತೆ ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಧಾವಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆ ಮೆರೆದಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಚಾಲನಾ ಸಮಾರಂಭದ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಂಡ್ಯಕ್ಕೆ ತೆರಳುತ್ತಿದ್ದರು. ನಗರದ ಹೊರವಲಯದ ದೊಡ್ಡರಾಯಪೇಟೆ ಕ್ರಾಸ್ ಬಳಿ ಬೈಕ್‌ನಲ್ಲಿ ಚಲಿಸುತ್ತಿದ್ದ ಇಬ್ಬರು ಯುವಕರು ಆಟೋ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದರು.‌

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯನವರ ಪುತ್ರ ವ್ಯಾಮೋಹ, ಧೃತರಾಷ್ಟ್ರನನ್ನೇ ಮೀರಿಸುವಂತಿದೆ‌! – ಬಿಜೆಪಿ ಟೀಕೆ

ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಕಾರನ್ನು ನಿಲ್ಲಿಸಿ ಅಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿದ್ದಾರೆ. ಈ ವೇಳೆ ಸ್ಥಳೀಯರು ದೊಡ್ಡರಾಯಪೇಟೆ ಕ್ರಾಸ್‌ನಲ್ಲಿ ಪದೇ ಪದೇ ಅಪಘಾತ ಸಂಭವಿಸುತ್ತಿದ್ದು, ಇದಕ್ಕೆ ಪರಿಹಾರ ಕೊಡಿಸಬೇಕು ಎಂದು ಮನವಿ ಮಾಡಿದ್ದಾರೆ.

suddiyaana