ದಾಂಪತ್ಯ ಜೀವನಕ್ಕೆ ಕಾಲಿಟ್ಟ ಲಕ್ಷ್ಮೀ ನಿವಾಸ ಸೀರಿಯಲ್‌ ನಟಿ ಚಂದನಾ ಅನಂತಕೃಷ್ಣ  

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಲಕ್ಷ್ಮೀ ನಿವಾಸ ಸೀರಿಯಲ್‌ ನಟಿ ಚಂದನಾ ಅನಂತಕೃಷ್ಣ  

ಲಕ್ಷ್ಮೀ ಬಾರಮ್ಮ ಸೀರಿಯಲ್‌ ನಟಿ ಚಂದನಾ ಅನಂತಕೃಷ್ಣ ನಿಜ ಜೀವನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.  ನಟಿ ಲಲಿತಾಂಜಲಿ ಅವರ ಪುತ್ರ ಪ್ರತ್ಯಕ್ಷ್‌ ಅವರೊಂದಿಗೆ ಸಪ್ತಪದಿ ತುಳಿದಿದ್ದಾರೆ.

ಇದನ್ನೂ ಓದಿ: ಸಂವಿಧಾನ ಪುಸ್ತಕ ಹಿಡಿದು ಲೋಕಸಭಾ ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕ ಗಾಂಧಿ

ಸಿಲಿಕಾನ್‌ ಸಿಟಿ ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಗುರು ನರಸಿಂಹ ಕಲ್ಯಾಣ ಮಂದಿರಲ್ಲಿ ಅದ್ಧೂರಿಯಾಗಿ ಮದುವೆ ನಡೆದಿದೆ. ಸಿನಿಮಾ ಸ್ಟಾರ್ಸ್‌ ಹಾಗೂ ಕಿರುತೆರೆ ಕಲಾವಿದರು, ಸ್ನೇಹಿತರು ಮದುವೆಯಲ್ಲಿ ಭಾಗಿಯಾಗಿದ್ದಾರೆ.

ನಟಿ ಚಂದನಾ ಅನಂತಕೃಷ್ಣ ರಾಜಾ ರಾಣಿ, ಹೂಮಳೆ ಸೀರಿಯಲ್‌ಗಳಲ್ಲಿ ಮಿಂಚಿದ್ದರು.  ಸದ್ಯ ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಜಯಂತ್‌ನ ಚಿನ್ನುಮರಿ ಜಾಹ್ನವಿ ಪಾತ್ರದಲ್ಲಿ ಅಭಿನಯ ಮಾಡುತ್ತಿದ್ದಾರೆ. ಲಕ್ಷ್ಮೀ ನಿವಾಸ ಸೀರಿಯಲ್‌ ಮೂಲಕ ಪ್ರತಿ ಮನೆ ಮನೆಗೂ ಗೊತ್ತಿರುವ ನಟಿ ಚಂದನಾ ಅವರು ಇದೀಗ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಚಂದನಾ, ಬಿಕಾಂ ಓದಿದ್ದು ರಾಜಾ ರಾಣಿ, ಮುದ್ದು ಮಣಿಗಳು ಸೀರಿಯಲ್​ಗಳಲ್ಲಿ ಈ ಮೊದಲು ನಟಿಸಿದ್ದರು. ಬಿಗ್ ಬಾಸ್ ಸೀಸನ್ 7ರಲ್ಲಿ ಸ್ಫರ್ಧಿ ಕೂಡ ಆಗಿದ್ದರು.

ಪ್ರತ್ಯಕ್ಷ ಮೂಲತಃ ಚಿಕ್ಕಮಗಳೂರುನವರು. ಎಂಟೆಕ್ ವಿದ್ಯಾಭ್ಯಾಸ ಮಾಡಿದ್ದು, ಸದ್ಯ ಬೆಂಗಳೂರಿನಲ್ಲೇ ಸ್ವಂತ ಉದ್ಯಮ ಹೊಂದಿದ್ದಾರೆ. ಸಿನಿಮಾ ಕುಟುಂಬದ ಹಿನ್ನಲೆ ಹೊಂದಿರುವ ಪ್ರತ್ಯಕ್ಷ, ನಟ ದಿವಂಗತ ಉದಯ್ ಹುತ್ತಿನಗದ್ದೆ ಹಾಗೂ ತಾಯಿ ಲಲಿತಾಂಜಲಿ ಉದಯ್ ಅವರ ಮುದ್ದಿನ ಮಗ. ಡಾ.ರಾಜ್‌ ಕುಮಾರ್‌ ಸಿನಿಮಾಗಳಲ್ಲಿ ಉದಯ್ ಅವರು ಅಭಿನಯಿಸಿದ್ದರು. ದೇವತಾ ಮನುಷ್ಯ ಚಿತ್ರದಲ್ಲಿ ನಟಿಸಿದ್ದ ಇವರು ಆರಂಭ ಚಿತ್ರದ ಮೂಲಕ ಕನ್ನಡ ಸಿನಿ ರಂಗಕ್ಕೆ ಪ್ರವೇಶಿಸಿದ್ದರು. ಅಗ್ನಿಪರ್ವ, ಶುಭ ಮಿಲನ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟ ದಿವಂಗತ ಉದಯ್ ಅವರು ಅಭಿನಯ ಮಾಡಿದ್ದರು.

Shwetha M