ಸಕಲೇಶಪುರದಲ್ಲಿ ರೈಲ್ವೆ ಹಳಿ ಮೇಲೆ ಬಿದ್ದ ಮಣ್ಣು ತೆರವು – ಬೆಂಗಳೂರು , ಕರಾವಳಿ ರೈಲು ಸಂಚಾರ ಆರಂಭ

ಮಳೆ ಆರ್ಭಟಕ್ಕೆ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿ ಹೋಗಿದೆ. ಅಂದರಂತೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಎಡಕುಮಾರಿ ಹಾಗೂ ಶಿರವಾಗಿಲು ನಡುವೆ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತಿತ್ತು. ಈಗ ರೈಲ್ವೆ ಇಲಾಖೆ ಯಶಸ್ವಿಯಾಗಿ ಮಣ್ಣು ತೆರವುಗೊಳಿಸಿದ್ದು ಈ ಮಾರ್ಗದಲ್ಲಿ ರೈಲು ಸಂಚಾರವನ್ನು ಅಧಿಕೃತವಾಗಿ ಪುನರಾರಂಭಿಸಿದೆ.
ಇದನ್ನೂ ಓದಿ: ಜಿಲ್ಲಾವಾರು ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜವಾಬ್ದಾರಿ – ಯಾವ್ಯಾವ ಸಚಿವರಿಗೆ ಯ್ಯಾವ ಜಿಲ್ಲೆಯ ಜವಾಬ್ದಾರಿ?
ಶನಿವಾರ ರಾತ್ರಿ ಭಾರೀ ಮಳೆಯಿಂದಾಗಿ ಬೆಟ್ಟದ ಮಣ್ಣು ಮತ್ತು ಬಂಡೆಕಲ್ಲುಗಳು ರೈಲ್ವೆ ಹಳಿಯ ಮೇಲೆ ಕುಸಿದುಬಿದ್ದಿದ್ದವು. ಇದರಿಂದಾಗಿ ಬೆಂಗಳೂರಿನಿಂದ ಕರಾವಳಿ ಮತ್ತು ಕೇರಳ ಭಾಗವನ್ನು ಸಂಪರ್ಕಿಸುವ ಪ್ರಮುಖ ರೈಲುಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಘಟನೆ ನಡೆದ ತಕ್ಷಣ ಕಾರ್ಯಪ್ರವೃತ್ತರಾದ ರೈಲ್ವೆ ಇಲಾಖೆಯ ತಾಂತ್ರಿಕ ತಂಡ ಮತ್ತು ಕಾರ್ಮಿಕರು, ಪ್ರತಿಕೂಲ ವಾತಾವರಣದ ನಡುವೆಯೂ ಸತತ ಮೂರು ದಿನಗಳ ಕಾಲ ಹಗಲಿರುಳು ಮಣ್ಣು ತೆರವು ಕಾರ್ಯಾಚರಣೆ ನಡೆಸಿದರು. ಪ್ರಸ್ತುತ ಹಳಿಯ ಮೇಲಿದ್ದ ರಾಶಿಗಟ್ಟಲೆ ಮಣ್ಣನ್ನು ಸಂಪೂರ್ಣವಾಗಿ ತೆರವುಗೊಳಿಸಿ, ಮಾರ್ಗವನ್ನು ಸಂಚಾರಕ್ಕೆ ಸಗಮಗೊಳಿಸಿದ್ದಾರೆ.

ನೋಡಿರಿ

