ಭೂ ಕುಸಿತದಿಂದ ಶಿರಾಡಿಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ – ಬೆಂಗಳೂರು – ಮಂಗಳೂರು ಸಂಚಾರಕ್ಕೆ ಬದಲಿ ಮಾರ್ಗ!

ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಮಳೆಯಿಂದಾಗಿ ಸಾಕಷ್ಟು ಅವಾಂತರ ಸೃಷ್ಠಿಸಿದೆ. ಇದೀಗ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡಕುಸಿತವಾಗಿದೆ. ಇದ್ರ ಪರಿಣಾಮ ಬೆಂಗಳೂರು-ಮಂಗಳೂರು ಸಂಪರ್ಕ ಕಡಿತವಾಗಿದೆ.
ಇದನ್ನೂ ಓದಿ: ಇಂತಹ ಆಹಾರಗಳನ್ನು ತಿಂದ ಬಳಿಕ ತಪ್ಪಿಯೂ ಹಾಲು ಸೇವಿಸಬಾರದು!
ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ಗುಡ್ಡ ಕುಸಿದಿದೆ. ತಡರಾತ್ರಿ ಮರಗಳ ಸಮೇತ ರಸ್ತೆಗೆ ಅಡ್ಡಲಾಗಿ ಗುಡ್ಡ ಕುಸಿದ ಕಾರಣ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ವಾಹನ ಸವಾರರು ಪರದಾಟ ಅನುಭವಿಸಿದ್ದಾರೆ. ಇದೀಗ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ.
ಮಂಗಳೂರು ಕಡೆಗೆ ತೆರಳುವ ವಾಹನಗಳಿಗೆ ಬೇಲೂರು ಮೂಲಕ ಚಾರ್ಮಾಡಿ ಘಾಟ್ ರಸ್ತೆ ಬಳಸಬೇಕು. ಮಂಗಳೂರು ಕಡೆಯಿಂದ ಬೆಂಗಳೂರಿಗೆ ತೆರಳುವ ವಾಹನಗಳು ಸಂಪಾಜೆ ಘಾಟ್ ಬಳಸುವಂತೆ ಹಾಸನ ಡಿಸಿ ಕೆ.ಎಸ್.ಲತಾಕುಮಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಇನ್ನು ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಮತ್ತು ಬೆಳಗಾವಿಯ ಕಣಕುಂಬಿ ಭಾಗದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬರೆಯುತ್ತಿದ್ದಾನೆ. ಇದರಿಂದ ಬೆಳಗಾವಿ ಜಿಲ್ಲೆಯಲ್ಲಿ ಹರಿಯುವ ಸಪ್ತ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಶುರುವಾಗಿದ್ದು, ಜಿಲ್ಲೆಯ ಜನರು ಆತಂಕದಲ್ಲಿದ್ದಾರೆ.

ನೋಡಿರಿ

