ಕೊಡಗಿನಲ್ಲಿ ಮಳೆಗೆ ಭೂಕುಸಿತ ಆತಂಕ -ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ನಿವಾಸಿಗಳಿಗೆ ಮುನ್ನೆಚ್ಚರಿಕೆ

ಕೊಡಗಿನಲ್ಲಿ ಮಳೆಗೆ ಭೂಕುಸಿತ ಆತಂಕ -ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ನಿವಾಸಿಗಳಿಗೆ ಮುನ್ನೆಚ್ಚರಿಕೆ

ಮಳೆಗಾಲ ಬಂದರೆ ಸಾಕು ಕೊಡಗಿನ ಜನತೆಗೆ ಆತಂಕ ಶುರುವಾಗುತ್ತದೆ. ಕೊಡಗು ಜಿಲ್ಲೆಯಲ್ಲಿ ಜೂನ್ 3 ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಕೊಡಗಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಷ್ಟೇ ಅಲ್ಲದೇ, ಮಡಿಕೇರಿ ನಗರಸಭಾ ವ್ಯಾಪ್ತಿಯ ಹಲವು ಬಡಾವಣೆಗಳಿಗೆ ಹಾಗೂ ಅಪಾಯಕಾರಿ ಪ್ರದೇಶಗಳ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಭೂಕುಸಿತವಾಗುವ ಆತಂಕ ಹೆಚ್ಚಾಗಿರುವ ಕಾರಣ, ಮುನ್ನೆಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ:  ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ – ಯೆಲ್ಲೋ ಅಲರ್ಟ್​ ಘೋಷಣೆ

ಭೂ ಕುಸಿತ ಆತಂಕ ಹೆಚ್ಚಾಗಿರುವ ಪ್ರದೇಶಗಳಾದ ಮಂಗಳಾದೇವಿ ನಗರ, ಚಾಮುಂಡೇಶ್ವರಿ ನಗರ, ಇಂದಿರಾ ನಗರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ನಗರಸಭೆ ಮೌಖಿಕ ಆದೇಶ ನೀಡಿದೆ. ಜಿಲ್ಲೆಯ ನದಿ ತೀರದ ನಿವಾಸಿಗಳಿಗೆ ಹಾಗೂ ಸೋಮವಾರಪೇಟೆ ತಾಲೂಕಿನ ನೆಲ್ಲಿ ಹುದಿಕೇರಿ, ವಿರಾಜಪೇಟೆ ತಾಲೂಕಿನ ಕರಡಿಗೋಡು ಸೇರಿದಂತೆ ಹಲವು ಪ್ರದೇಶಗಳ ನಿವಾಸಿಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಪ್ರವಾಹ ಪರಿಸ್ಥಿತಿ ಎದುರಿಸಲು ಸಜ್ಜಾಗಿರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕರೆ ನೀಡಿದ್ದಾರೆ.

ಬೆಂಗಳೂರು ಸೇರಿದಂತೆ, ಬೆಂಗಳೂರು ಗ್ರಾಮಾಂತರ, ಪಶ್ಚಿಮ ಘಟ್ಟದ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲೂ ಭಾರೀ ಮಳೆಯ ಮುನ್ಸೂಚನೆ ಇದೆ. ಹೀಗಾಗಿ ಈ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಜಿಲ್ಲೆಯ ಕೆಲವು ಕಡೆಗಳಲ್ಲೂ ಭಾರೀ ಮಳೆಯಾಗಲಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಯೆಲ್ಲೋ ಅಲರ್ಟ್ ನೀಡಿರುವ ಕಡೆಗಳಲ್ಲಿ ಬಿರುಗಾಳಿ , ಗುಡುಗಿನ ಜೊತೆಗೆ 64.5 ರಿಂದ 115.5 ಮಿಲಿ ಮೀಟರ್ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

suddiyaana