ಉತ್ತರ ಭಾರತದಲ್ಲಿ ಭಾರಿ ಮಳೆಗೆ 9 ಮಂದಿ ಸಾವು – 50 ಜನರ ರಕ್ಷಣೆ

ಉತ್ತರ ಭಾರತದಲ್ಲಿ ಭಾರಿ ಮಳೆಗೆ 9 ಮಂದಿ ಸಾವು – 50 ಜನರ ರಕ್ಷಣೆ

ಡೆಹ್ರಾಡೂನ್: ಉತ್ತರಭಾರತದಲ್ಲಿ ಕಳೆದ 24 ಗಂಟೆಗಳಿಂದ ಭಾರಿ ಮಳೆ ಸುರಿಯುತ್ತದೆ. ವರುಣನ ಆರ್ಭಟಕ್ಕೆ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರಿ ಮಳೆಯ ಪರಿಣಾಮ ಉತ್ತರಪ್ರದೇಶದ ಋಷಿಕೇಶದ ಧಲ್ವಾಲ ಮತ್ತು ಖಾರಾ ಪ್ರದೇಶಗಳು ಜಲಾವೃತವಾಗಿದೆ. ಅನೇಕ ಮನೆಗಳಿಗೆ ನೀರು ನುಗ್ಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ರಾಜ್ಯ ವಿಪತ್ತು ನಿರ್ವಹಣಾ ಪಡೆಯನ್ನು ಕರೆಸಲಾಗಿದೆ. ಎಸ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ಆಗಮಿಸಿ ಮುಳುಗಿದ್ದ ಮನೆಗಳಿಂದ ಸುಮಾರು 50 ಜನರನ್ನು ರಕ್ಷಿಸಿ ತೆಪ್ಪದ ಮೂಲಕ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ತೆಂಗಿನಕಾಯಿ ಕೀಳುವ ವೇಳೆ ಮರದಿಂದ ಬಿದ್ದು ಮಹಿಳೆ ಸಾವು!

ಇನ್ನು ಕೇದಾರನಾಥ ಯಾತ್ರೆಯ ಮೂಲ ಶಿಬಿರವಾದ ಗೌರಿಕುಂಡ್‌ನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಋಷಿಕೇಶ ಪ್ರದೇಶದಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಜನರ ಮನೆಗಳಿಗೆ ನೀರು ನುಗ್ಗಿದ್ದು, ಮನೆಯೊಳಗೆ ಸಿಲುಕಿದವರ ರಕ್ಷಣೆಗೆ ಎಸ್‌ಡಿಆರ್‌ಎಫ್ ತಂಡದ ಅಗತ್ಯವಿದೆ ಎಂದು ಎಸ್‌ಡಿಆರ್‌ಎಫ್‌ಗೆ ಮನವಿ ಮಾಡಿದ ಹಿನ್ನೆಲೆ ಎಸ್‌ಡಿಆರ್‌ಎಫ್ ತಂಡ ಸ್ಥಳದಲ್ಲಿ ರಕ್ಷಣಾ ಕಾರ್ಯ ಕೈಗೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಪತ್ತು ನಿರ್ವಹಣಾ ಕೇಂದ್ರವು ರಾಜ್ಯದ ಮಳೆ ಪರಿಸ್ಥಿತಿಯನ್ನು ಪರಿಶೀಲಿಸಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ. ಅಲ್ಲದೇ ಚಾರ್‌ಧಾಮ್ ಯಾತ್ರಾರ್ಥಿಗಳು ಹವಾಮಾನದ ಬಗ್ಗೆ ಮಾಹಿತಿಯನ್ನು ಪಡೆದ ಬಳಿಕ ಪ್ರಯಾಣವನ್ನು ಮುಂದುವರಿಸಲು ಸಲಹೆ ನೀಡಿದರು.

ಭಾರೀ ಮಳೆಯ ಪರಿಣಾಮ ಕಳೆದ 24 ಗಂಟೆಗಳಲ್ಲಿ ಪ್ರತ್ಯೇಕ ಘಟನೆಗಳಲ್ಲಿ 9 ಮಂದಿ ಸಾವನ್ನಪಿದ್ದು, ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

suddiyaana