ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಪ್ರಯಾಣಿಸುವಾಗ ಎಚ್ಚರ.. ಘಾಟಿಯ 34 ಕಡೆಗಳಲ್ಲಿ ಭೂ ಕುಸಿತ ಭೀತಿ!

ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಪ್ರಯಾಣಿಸುವಾಗ ಎಚ್ಚರ.. ಘಾಟಿಯ 34 ಕಡೆಗಳಲ್ಲಿ ಭೂ ಕುಸಿತ ಭೀತಿ!

ಮಂಗಳೂರು: ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಅಲ್ಲಲ್ಲಿ ಭೂಕುಸಿತ ಸಂಭವಿಸುತ್ತಿದೆ. ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟ್‌ ನ ರಸ್ತೆಯಲ್ಲಿ ನೀರು ಜಲಪಾತದಂತೆ ಉಕ್ಕಿ ಹರಿಯುತ್ತಿದೆ. ಇದೀಗ ಚಾರ್ಮಾಡಿ ಘಾಟ್‌ನಲ್ಲಿ ಭೂಕುಸಿತ ಉಂಟಾಗಬಹುದಾದಂತಹ ಸಮಾರು 34 ಜಾಗಗಳನ್ನು ಗುರುತಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್​ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಪ್ರವಾಹ ಸಾಧ್ಯತೆಯ 63 ಜಾಗಗಳು ಮತ್ತು ರಸ್ತೆಗಳು ಸೇರಿದಂತೆ ಭೂ ಕುಸಿತ ಸಾಧ್ಯತೆಯ 87 ಜಾಗಗಳನ್ನು ಗುರುತಿಸಲಾಗಿದೆ. ಚಾರ್ಮಾಡಿ ಘಾಟ್‌ ನಲ್ಲಿ ಭೂಕುಸಿತ ಉಂಟಾಗಬಹುದಾದಂತಹ ಸಮಾರು 34 ಜಾಗಗಳನ್ನು ಗುರುತಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ನಿಯಮ ಉಲ್ಲಂಘಿಸಿದರೆ ಫಾಸ್ಟ್‌ಟ್ಯಾಗ್‌ ಮೂಲಕವೇ ದಂಡ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸದ್ಯ ನಾಲ್ಕು ದಾರಿಯಿದ್ದು, ಇದರಲ್ಲಿ ಎರಡು ದಾರಿ ಬಂದ್ ಆಗಿದೆ. ಹೀಗಾಗಿ ಆದಷ್ಟು ಕುಕ್ಕೆ ಸುಬ್ರಹ್ಮಣ್ಯ ಪ್ರವಾಸ ಮುಂದೂಡಿ. ಹೊರಗಿನ ಪ್ರವಾಸಿಗರು ಅಪಾಯಕಾರಿ ಜಲಪಾತ, ನೀರಿಗೆ ಇಳಿಯುವಂತ್ತಿಲ್ಲ. ದೇವಸ್ಥಾನ ಭೇಟಿಗೆ ಬಂದವರು ದೇವರ ದರ್ಶನ ಅಷ್ಟೇ ಮಾಡಿ. ರೆಡ್ ಅಲರ್ಟ್ ಇರುವ ಈ ರಸ್ತೆಗಳಲ್ಲಿ ಪ್ರಯಾಣ ಸೂಕ್ತವಲ್ಲ. ಯಾವುದೇ ರಸ್ತೆ ಬಿರುಕು ಬಿಟ್ಟಲ್ಲಿ 112 ನಂಬರ್​ಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ಮುಗಿಲನ್ ತಿಳಿಸಿದ್ದಾರೆ.

ಇನ್ನು ಅಪಾಯಕಾರಿ ಪ್ರವಾಸಿ ತಾಣಗಳಲ್ಲಿ ಫೋಟೋ, ಸೆಲ್ಫಿ ತೆಗೆಯುತ್ತಾರೆ. ಇಂಥ ಜಾಗಗಳಲ್ಲಿ ನಿಷೇಧದ ಆದೇಶಗಳನ್ನು ನಾವು ಮಾಡಿದ್ದೇವೆ. ಎಂಟು ಬೀಚ್​ಗಳಲ್ಲಿ 24 ಜನ ಹೋಂ ಗಾರ್ಡ್ಸ್​​ಗಳನ್ನ ನೇಮಿಸಿದ್ದೇವೆ. ಟ್ರೆಕ್ಕಿಂಗ್ ಪಾಯಿಂಟ್, ಕುಕ್ಕೆ ಬಳಿಯ ಕಾಡು ಪ್ರವೇಶ ಕೂಡ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಕಾಲು ಸಂಕ, ಸೇತುವೆ ಬಿರುಕು ಬಿಟ್ಟ ಜಾಗಗಳಲ್ಲಿ ಅಪಾಯ ಇದೆ. ಅಲ್ಲಿ ಜ‌ನ ಸಂಚಾರ ನಿಷೇಧದ ಫಲಕ ಅಳವಡಿಸಲು ಸೂಚಿಸಿದ್ದೇವೆ. ರೆಡ್ ಅಲರ್ಟ್ ಸಮಯದಲ್ಲಿ ಹೆಚ್ಚು ಗಮನ ಹರಿಲಾಗುತ್ತೆ. ಈ ಫಲಕ ಇದ್ದೂ ನಿಯಮ ಉಲ್ಲಂಘಿಸಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

suddiyaana