ಕನಕಪುರದಲ್ಲಿ ಕೊನೇ ಕ್ಷಣದ ಟ್ವಿಸ್ಟ್ – ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಕೆ

ಕನಕಪುರದಲ್ಲಿ ಕೊನೇ ಕ್ಷಣದ ಟ್ವಿಸ್ಟ್ – ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಕೆ

ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಡಿ.ಕೆ ಶಿವಕುಮಾರ್​ರನ್ನ ಕಟ್ಟಿ ಹಾಕೋಕೆ ಬಿಜೆಪಿ ಆರ್.ಅಶೋಕ್​ರನ್ನ ಕಣಕ್ಕಿಳಿಸಿದೆ.. ಆದ್ರೆ ಅಚ್ಚರಿ ಅನ್ನುವಂತೆ ಈಗ ಅದೇ ಕ್ಷೇತ್ರದಿಂದ ಡಿಕೆಶಿ ಸೋದರ ಡಿ.ಕೆ ಸುರೇಶ್ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.. ಕಡೇ ಕ್ಷಣದಲ್ಲಿ ಡಿಕೆ ಬ್ರದರ್ಸ್ ಒಂದೇ ಕ್ಷೇತ್ರದಲ್ಲಿ ನಾಮಿನೇಷನ್ ಫೈಲ್ ಮಾಡಿದ್ದಾರೆ..

ಇದನ್ನೂ ಓದಿ:  ‘ಸಿದ್ದರಾಮಯ್ಯ ರಸ್ತೆಯಲ್ಲಿ ಓಡಲು ಕನಕಪುರದ ಬಂಡೆ ಅಡ್ಡ!’ – ಬಿಜೆಪಿ ಟ್ವೀಟ್

ಏಪ್ರಿಲ್ 17ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಾವಿರಾರು ಕಾರ್ಯಕರ್ತರ ಜೊತೆ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದರು. ಇದೀಗ ಕನಕಪುರದಿಂದಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.. ಅಸಲಿಗೆ ಡಿ.ಕೆ ಶಿವಕುಮಾರ್​ ಅವರು ಸಲ್ಲಿಸಿರುವ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾವಾಗಿ ಡಿ.ಕೆ ಸುರೇಶ್ ಸಹ ಇಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ ಕೊನೇ ಗಳಿಗೆಯಲ್ಲಿ ಕನಕಪುರ ಕ್ಷೇತ್ರದಿಂದ್ಲೇ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ.. ಬಿಜೆಪಿಯ ಕುತಂತ್ರಕ್ಕೆ ತಕ್ಕ ಉತ್ತರ ಕೊಡಬೇಕಿದೆ. ಹೀಗಾಗಿ ಕೆಲವೊಂದು ಮಾಹಿತಿ ಆಧಾರದ ಮೇಲೆ ನಾಮಪತ್ರ ಸಲ್ಲಿಸಿದ್ದೇನೆ. ಬಿಜೆಪಿಯಿಂದ ವಿರೋಧ ಪಕ್ಷಗಳನ್ನು ಹತ್ತಿಕ್ಕುವ ಕೆಲಸವಾಗುತ್ತಿದೆ. ಚುನಾವಣಾಧಿಕಾರಿಗಳು ಸಹ ಸರ್ಕಾರದ ಅಧೀನದಲ್ಲೇ ಇದ್ದಾರೆ. ನನಗೆ ಸೇಡಿನ ರಾಜಕಾರಣ, ದ್ವೇಷದ ರಾಜಕಾರಣ ಗೊತ್ತಿಲ್ಲ. ಮೇ 10ರಂದು ಕನಕಪುರ ಜನ ಎಲ್ಲದಕ್ಕೂ ಉತ್ತರ ಕೊಡುತ್ತಾರೆ. ಸದ್ಯಕ್ಕೆ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಆದ್ರೆ, ಕೊನೆ ಕ್ಷಣದಲ್ಲಿ ನಾನು ಸ್ಪರ್ಧಿಸುತ್ತೇನೋ ಅಥವಾ ನನ್ನ ಅಣ್ಣ ಸ್ಪರ್ಧಿಸುತ್ತಾರೋ ಎಂದು ಕಾದುನೋಡಿ ಎಂದು ಇದೇ ವೇಳೆ ಡಿ. ಕೆ. ಸುರೇಶ್ ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ಆರ್.ಅಶೋಕ್ ವಿರುದ್ಧ ಡಿ.ಕೆ ಸುರೇಶ್ ಪದ್ಮನಾಭನಗರದಿಂದ ನಾಮಪತ್ರ ಸಲ್ಲಿಕೆ ಮಾಡುತ್ತಾರೆ ಎನ್ನಲಾಗಿತ್ತು. ಆದರೆ, ಪದ್ಮನಾಭನಗರದಿಂದ ನಾಮಪತ್ರ ಸಲ್ಲಿಸುವುದಿಲ್ಲ ಎಂದು ಡಿ.ಕೆ ಸುರೇಶ್ ಹೇಳಿದ್ದಾರೆ.

 

suddiyaana