‘ಮಾಡಾಳ್ ವಿರೂಪಾಕ್ಷಪ್ಪ ಕಾಣೆಯಾಗಿದ್ದಾರೆ’ ಎಂದು ‘ಕೈ’ ಕ್ಯಾಂಪೇನ್ – ಹೈಕೋರ್ಟ್ ನಲ್ಲಿ ಬಿಜೆಪಿ ಶಾಸಕನ ಭವಿಷ್ಯ!

‘ಮಾಡಾಳ್ ವಿರೂಪಾಕ್ಷಪ್ಪ ಕಾಣೆಯಾಗಿದ್ದಾರೆ’ ಎಂದು ‘ಕೈ’ ಕ್ಯಾಂಪೇನ್ – ಹೈಕೋರ್ಟ್ ನಲ್ಲಿ ಬಿಜೆಪಿ ಶಾಸಕನ ಭವಿಷ್ಯ!

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದಿರೋದು ಬಿಜೆಪಿ ಪಾಲಿಗೆ ಬಿಸಿತುಪ್ಪವಾಗಿದ್ರೆ ಕಾಂಗ್ರೆಸ್ ಪಾಲಿಗೆ ಮೃಷ್ಟಾನ್ನ ಭೋಜನ ಸಿಕ್ಕಿದಂತಾಗಿದೆ. ಮೊದ್ಲೇ 40 ಪರ್ಸೆಂಟ್ ಕಮಿಷನ್ ಸರ್ಕಾರ ಅಂತಾ ಟೀಕಿಸ್ತಿದ್ದ ‘ಕೈ’ಪಡೆ ಈಗ ಮಾಡಾಳ್ ಪುತ್ರನ ಭ್ರಷ್ಟಾಚಾರವನ್ನೇ ಅಸ್ತ್ರ ಮಾಡಿಕೊಂಡು ಅಟ್ಯಾಕ್ ಮಾಡ್ತಿದೆ. ಬಿಜೆಪಿ ಶಾಸಕನ ವಿರುದ್ಧ ಪೋಸ್ಟರ್ ಕ್ಯಾಂಪೇನ್ ಶುರು ಮಾಡಿದ್ದಾರೆ.

ಕೆಎಸ್‌ಡಿಎಲ್‌ (KSDL) ಟೆಂಡರ್‌ ಪ್ರಕ್ರಿಯೆಯಲ್ಲಿ ಲಂಚ ಪ್ರಕರಣದ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ (Madal Virupakshappa) ವಿರುದ್ಧ ಕಾಂಗ್ರೆಸ್‌ (Congress Poster Campaign) ಕಾರ್ಯಕರ್ತರು ಪೋಸ್ಟರ್‌ ಅಭಿಯಾನ ನಡೆಸಿದ್ದಾರೆ. ಯಶವಂತಪುರ ಬಸ್ ನಿಲ್ದಾಣದ ಗೋಡೆಗಳ ಮೇಲೆ ‘ಮಾಡಾಳ್‌ ವಿರೂಪಾಕ್ಷಪ್ಪ ಕಾಣೆಯಾಗಿದ್ದಾರೆ’ ಎಂಬ ಪೋಸ್ಟರ್‌ಗಳನ್ನು ಅಂಟಿಸಿ ವ್ಯಂಗ್ಯ ಮಾಡಿದ್ದಾರೆ. ಎ1 ಆರೋಪಿ ಕಂಡಲ್ಲಿ 100 ನಂಬರ್‌ಗೆ ಕರೆ ಮಾಡಿ. ಬಿಜೆಪಿ 40% ಸರ್ಕಾರ ಎಂದು ಕುಟುಕಿದ್ದಾರೆ. ರಾಜ್ಯದ ಹಲವೆಡೆ ಕಾಂಗ್ರೆಸ್‌ ಕಾರ್ಯಕರ್ತರು ಪೋಸ್ಟರ್‌ ಅಂಟಿಸಿ ವಿರೂಪಾಕ್ಷಪ್ಪ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ : ಬಿಜೆಪಿ ಶಾಸಕನ ಭ್ರಷ್ಟಾಚಾರ ಪ್ರಕರಣದಲ್ಲಿ ಇಬ್ಬರು ತನಿಖಾಧಿಕಾರಿಗಳ ಬದಲಾವಣೆ – ಅನುಮಾನ ಮೂಡಿದ್ದೇಕೆ..?

ವಯಸ್ಸು, ಎತ್ತರ, ಸ್ಥಳ ಬಗ್ಗೆ ಪೋಸ್ಟರ್‌ನಲ್ಲಿ ನಮೂದಿಸಿ ವ್ಯಂಗ್ಯ ಮಾಡಿರುವ ಕಾಂಗ್ರೆಸ್, ಮಾಡಾಳ್‌ ವಿರೂಪಾಕ್ಷಪ್ಪ ಮೈಸೂರು ಸ್ಯಾಂಡಲ್ ಸೋಪ್ ಹಗರಣಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿದೆ. ಇನ್ನು ಮಾಡಾಳ್‌ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್‌ ಮಾಡಾಳ್‌ 40 ಲಕ್ಷ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಪ್ರಶಾಂತ್‌ ಮತ್ತು ಸಹಚರರನ್ನು ಬಂಧಿಸಲಾಗಿತ್ತು. ನಿವಾಸ ಹಾಗೂ ಕಚೇರಿ ಎರಡೂ ಸೇರಿ ಒಟ್ಟಾರೆ 8.12 ಕೋಟಿ ನಗದು ಪತ್ತೆಯಾಗಿತ್ತು.

ಮತ್ತೊಂದೆಡೆ ಇಂದು ಮಾಡಾಳ್ ವಿರೂಪಾಕ್ಷಪ್ಪರ ಜಾಮೀನು ಅರ್ಜಿ ಭವಿಷ್ಯ ಹೈಕೋರ್ಟ್​ನಲ್ಲಿ ನಿರ್ಧಾರವಾಗಲಿದೆ. ನಿರೀಕ್ಷಣಾ ಜಾಮೀನು ಹಾಗೂ FIR ರದ್ದು ಕೋರಿ ವಿರೂಪಾಕ್ಷಪ್ಪ ಅರ್ಜಿ ಸಲ್ಲಿಸಿದ್ದಾರೆ.

suddiyaana