‘ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ’ ಪ್ರಾರಂಭ – ‘ಮಕ್ಕಳ ಬಸ್ಸು’ ಹೊಸ ಯೋಜನೆಗೆ ಅಸ್ತು

‘ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ’ ಪ್ರಾರಂಭ – ‘ಮಕ್ಕಳ ಬಸ್ಸು’ ಹೊಸ ಯೋಜನೆಗೆ ಅಸ್ತು

ಸಿಎಂ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಶಾಲಾ ಮಕ್ಕಳಿಗೆ ಮಹತ್ವದ ಯೋಜನೆಯೊಂದನ್ನು ಘೋಷಿಸಿದ್ದಾರೆ. ಎಲ್ಲಾ ಫ್ರೌಢ ಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಹೊಂದಲು ಅನುವು ಮಾಡಿಕೊಡಲು ‘ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ’ ಪ್ರಾರಂಭ ಮಾಡಲಾಗುವುದು ಎಂದು ಬಜೆಟ್‌ನಲ್ಲಿ ಹೇಳಿದ್ದಾರೆ. ಉನ್ನತ ಶಿಕ್ಷಣ ಹೊಂದಲು ಅನುಕೂಲವಾಗುವಂತೆ  ಮುಖ್ಯಮಂತ್ರಿ ವಿದ್ಯಾಶಕ್ತಿ ಎಂಬ ಯೋಜನೆಯನ್ನು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಸರ್ಕಾರಿ ಪದವಿ ಪೂರ್ವ, ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯತಿ ನೀಡಲಾಗುತ್ತದೆ. ಈ ಯೋಜನೆಯಿಂದ 8 ಲಕ್ಷ ವಿದ್ಯಾರ್ಥಿಗಳು ಅನುಕೂಲ ಪಡೆಯಲಿದ್ದಾರೆ ಎಂದು ಅವರು ಹೇಳಿದರು. ಸರ್ಕಾರಿ ಪದವಿ ಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲು ನಿರ್ಧಾರ ಮಾಡಲಾಗಿದೆ. ಈ ಉಚಿತ ಉನ್ನತ ಶಿಕ್ಷಣದಿಂದ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಮಕ್ಕಳ ಬಸ್ಸು ಹೊಸ ಯೋಜನೆ ಆರಂಭ

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮಕ್ಕಳ ಬಸ್ಸು ಎಂಬ ಹೊಸ ಯೋಜನೆಯನ್ನು ಜಾರಿ ಮಾಡಲಾಗುತ್ತದೆ. ಸಾರಿಗೆ ನಿಗಮಗಳ ಮೂಲಕ 100 ಕೋಟಿ ರೂ ವೆಚ್ಚದಲ್ಲಿ 1000 ಹೊಸ ಕಾರ್ಯಾಚರಣೆ ಶುರುವಾಗಲಿದೆ. ಈಗಾಗಲೇ 19 ಲಕ್ಷ ವಿದ್ಯಾರ್ಥಿಗಳೊಂದಿಗೆ ಹೆಚ್ಚುವರಿಯಾಗಿ 2 ಲಕ್ಷ ಹೊಸ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

suddiyaana