ಜಗದೀಶ್‌ ಶೆಟ್ಟರ್‌ ಬಿಜೆಪಿಗೆ ಸೇರಿದ ಬೆನ್ನಲ್ಲೇ ಲಕ್ಷ್ಮಣ್ ಸವದಿ   ಶಾಕಿಂಗ್‌ ಹೇಳಿಕೆ! – ಮತ್ತೆ ಕಮಲಕ್ಕೆ ಜೈ ಅಂತಾರಾ ಸವದಿ?

ಜಗದೀಶ್‌ ಶೆಟ್ಟರ್‌ ಬಿಜೆಪಿಗೆ ಸೇರಿದ ಬೆನ್ನಲ್ಲೇ ಲಕ್ಷ್ಮಣ್ ಸವದಿ   ಶಾಕಿಂಗ್‌ ಹೇಳಿಕೆ! – ಮತ್ತೆ ಕಮಲಕ್ಕೆ ಜೈ ಅಂತಾರಾ ಸವದಿ?

ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ನಾಯಕರ ಪಕ್ಷಾಂತರ ಪರ್ವ ಶುರುವಾಗಿದೆ. ಗುರುವಾರ  ಮಾಜಿ ಸಿಎಂ ಜಗದೀಶ ಶೆಟ್ಟರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಈ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ  ಕೂಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ.

ಹೌದು, ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರಿದ್ದರು. ಇದೀಗ ಲಕ್ಷ್ಮಣ ಸವದಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಬಿಜೆಪಿಗೆ ಬರುವಂತೆ ನನಗೆ ಬಹಳಷ್ಟು ಒತ್ತಡ ಇದೆ. ತಿರುಗಿ ಮಗ ಮನೆಗೆ ಬರಬೇಕು ಎಂಬುದಾಗಿ ಬಿಜೆಪಿಯವರು ಬೇಡಿಕೆ ಇಟ್ಟಿದ್ದಾರೆ. ಕಹಿ ಘಟನೆಗಳನ್ನ ಮರೆಯಬೇಕು ಎಂದೂ ಹೇಳುತ್ತಿದ್ದಾರೆ ಎನ್ನುವ ಮೂಲಕ ಬಿಜೆಪಿಯಿಂದ ತಮ್ಮನ್ನು ಸೆಳೆಯಲು ಸಾಕಷ್ಟು ಪ್ರಯತ್ನ ನಡೆಯುತ್ತಿದೆ ಎಂಬುದನ್ನು ಲಕ್ಷ್ಮಣ ಸವದಿ ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ – ಧ್ವಜಾರೋಹಣ ನೆರವೇರಿಸಿ, ಐದು ಗ್ಯಾರಂಟಿಗಳನ್ನು ಕೊಂಡಾಡಿದ ರಾಜ್ಯಪಾಲ ಗೆಹ್ಲೋಟ್

ಬಿಜೆಪಿಯಿಂದ ಏನೇ ಒತ್ತಡ ಬಂದರೂ ನನ್ನ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಿದ್ದೇನೆ. ಕಾಂಗ್ರೆಸ್ ಚಿಹ್ನೆ ಮೇಲೆ ಜನ ನನ್ನ ಆಯ್ಕೆ ಮಾಡಿದ್ದಾರೆ. ಬಹಳ ದೊಡ್ಡ ಅಂತರದಲ್ಲಿ ಗೆದ್ದಿದ್ದೇನೆ. ನಾನು ಬಿಜೆಪಿಗೆ ಹೋಗುವ ಆಲೋಚನೆ ನನ್ನಲ್ಲಿ ಇಲ್ಲ. ಯಾರು ಒತ್ತಡ ಹಾಕುತ್ತಿದ್ದಾರೆ, ಸಂಪರ್ಕ ಮಾಡಿದ್ದಾರೆ ಎಂಬುದನ್ನು ಬಹಿರಂಗ ಪಡಿಸುವುದಿಲ್ಲ. ಅದನ್ನು ಸಾರ್ವಜನಿಕವಾಗಿ ಹೇಳಲು ಆಗುವುದಿಲ್ಲ. ನನ್ನ ನಿಲುವು ನಾನು ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಚರ್ಚೆ ನಡೆಯುವುದು ಸಹಜ. ಶೆಟ್ಟರ್ ಅವರ ಜತೆ ನನ್ನನ್ನು ಯಾಕೆ ತಳಕು ಹಾಕ್ತಿದೀರಿ ಗೊತ್ತಾಗುತ್ತಿಲ್ಲ. ನಾನು ಹಾಗೂ ಅವರು ಕಾಂಗ್ರೆಸ್ ಪಕ್ಷಕ್ಕೆ ಒಟ್ಟಿಗೆ ಬಂದವರು ಅಲ್ಲ. ನಾನು ಮೊದಲು ಕಾಂಗ್ರೆಸ್ ಪಕ್ಷಕ್ಕೆ ಬಂದೆ, ಬಳಿಕ ಅವರು ಬಂದರು. ಶೆಟ್ಟರ್ ಅವರು ಕಾಂಗ್ರೆಸ್ ಬಿಟ್ಟು ಈಗಾಗಲೇ ಬಿಜೆಪಿ ಸೇರ್ಪಡೆ ಆಗಿದ್ದಾರೆ. ಯಾಕೆ ಹೋದರು, ಯಾವ ಕಾರಣಕ್ಕೆ ಹೋದರು ಎಂಬುದನ್ನು ಅವರೇ ಹೇಳಬೇಕು.

Shwetha M