ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಸ್ಥಿತಿ –  ಕಾಶ್ಮೀರದಲ್ಲಿ ವೈದ್ಯಕೀಯ ಸಿಬ್ಬಂದಿ ರಜೆ ರದ್ದು

ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಸ್ಥಿತಿ –  ಕಾಶ್ಮೀರದಲ್ಲಿ ವೈದ್ಯಕೀಯ ಸಿಬ್ಬಂದಿ ರಜೆ ರದ್ದು

ಪಹಲ್ಗಾಮ್​ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ನಡೆಸಿದ ನಂತರ ಭಾರತದ ಸೇನೆ ಮಹತ್ವದ ಕಾರ್ಯಚರಣೆಯನ್ನು ನಡೆಸುತ್ತಿದೆ. ಕೇಂದ್ರ ಸರ್ಕಾರ ಈ ಘಟನೆ ನಂತರ ಸೇನೆಗೆ ಮುಕ್ತವಾಗಿ ಕೆಲಸ ಮಾಡುವಂತೆ ಅವಕಾಶವನ್ನು ನೀಡಿದೆ. ಭಾರತದ ಸೇನೆ ಪಾಕ್​​​​​ ಉಗ್ರರಿಗೆ ಒಂದರಂತೆ ಹೊಡೆತವನ್ನು ನೀಡುತ್ತಿದೆ. ಭಾರತ-ಪಾಕ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಜಮ್ಮು ಸರ್ಕಾರ ಅಲರ್ಟ್ ಆಗಿದ್ದು, ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ರಜೆ ರದ್ದು ಮಾಡಲಾಗಿದೆ.

ಇದನ್ನೂ ಓದಿ: ತವರಿನಲ್ಲಿ ಮತ್ತೆ ಸೋತ ಚೆನ್ನೈ  – ಪ್ಲೇ-ಆಫ್ ಕನಸು ಕೈಬಿಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್

ಜಮ್ಮುವಿನ ಸರ್ಕಾರಿ ಮೆಡಿಕಲ್ ಕಾಲೇಜು & ಆಸ್ಪತ್ರೆ ಸಿಬ್ಬಂದಿಗೆ ಇದು ಅನ್ವಯ ಆಗಲಿದೆ. ಎಲ್ಲಾ ವೈದ್ಯಕೀಯ ಸಿಬ್ಬಂದಿ ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ. ತುರ್ತು ಔಷಧಿಗಳು ಮತ್ತು ಉಪಕರಣಗಳು ಸಿದ್ಧವಾಗಿರಬೇಕು. ತುರ್ತು ಸೇವೆಗಾಗಿ ಕಂಟ್ರೋಲ್ ರೂಮ್ ಸ್ಥಾಪನೆ ಮಾಡಬೇಕು ಎಂದು ಸೂಚಿಸಲಾಗಿದೆ. ತುರ್ತು ಸೇವೆಗಾಗಿ 0191-2582355 ಹೆಲ್ಪ್‌ಲೈನ್ ನಂಬರ್ ಬಿಡುಗಡೆ ಮಾಡಲಾಗಿದೆ.

ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವ ಭಾರತ ಸನ್ನದ್ಧವಾಗಿದೆ. ಅಲ್ಲದೇ, ಮೂರು ಹಂತದ ಕಾರ್ಯಾಚರಣೆಗೆ ಸೇನೆ ಮುಂದಾಗಿದೆ. ಹಿಂದೂಗಳ ಹತ್ಯಾಕಾಂಡ ಬಳಿಕವೂ ಪಾಕಿಸ್ತಾನ ತನ್ನ ನರಿ ಬುದ್ದಿಯನ್ನು ಬಿಟ್ಟಿಲ್ಲ. ಎಲ್‌ಒಸಿ ಗಡಿಯಲ್ಲಿ ಪಾಕ್ ಪ್ರಚೋದನೆ ಮಾಡಿದ್ದು, ಗಡಿಯಲ್ಲಿ ಗುಂಡಿನ ಮೊರೆತ ಕೇಳಿ ಬಂದಿದೆ.

ಈಚೆಗೆ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿಯಿಂದಾಗಿ 26 ಪ್ರವಾಸಿಗರು ದಾರುಣ ಸಾವಿಗೀಡಾದರು. ಹಲವಾರು ಮಂದಿ ಗಾಯಗೊಂಡಿದ್ದರು. ದಾಳಿ ಬೆನ್ನಲ್ಲೇ ಕೇಂದ್ರ ಸರ್ಕಾರ ಹೈ ಅಲರ್ಟ್ ಆಗಿದ್ದು, ಭಯೋತ್ಪಾದಕರ ಹತ್ತಿಕ್ಕಲು ಕಾರ್ಯಾಚರಣೆ ನಡೆಸುತ್ತಿದೆ.

Shwetha M

Leave a Reply

Your email address will not be published. Required fields are marked *