ಫೆಬ್ರವರಿ 10 ರಿಂದ ವಿಧಾನಮಂಡಲ ಅಧಿವೇಶನ ಆರಂಭ – ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳ ತಯಾರಿ

ಫೆಬ್ರವರಿ 10 ರಿಂದ ವಿಧಾನಮಂಡಲ ಅಧಿವೇಶನ ಆರಂಭ – ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳ ತಯಾರಿ

ರಾಜ್ಯ ಸರ್ಕಾರದ ಈ ಅವಧಿಯ ಕೊನೇ ಅಧಿವೇಶನ ಫೆಬ್ರವರಿ 10 ರಿಂದ ಆರಂಭಗೊಳ್ಳಲಿದೆ. ಶುಕ್ರವಾರ ಬೆಳಗ್ಗೆ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೂಟ್ ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ಭಾಷಣದ ಮೇಲೆ ಸೋಮವಾರದಿಂದ ಚರ್ಚೆಗಳು ನಡೆಯಲಿದೆ. ಚುನಾವಣೆ ಸಮೀಪಿಸುತ್ತಿರುವುದರಿಂದ ಈ ಬಾರಿಯ ಅದಿವೇಶನದಲ್ಲಿ ಜಟಾಪಟಿ ನಡೆಯುವುದು ಬಹುತೇಕ ಖಚಿತವಾಗಿದೆ. ಕೊನೆಯ ಅಧಿವೇಶನದಲ್ಲಿ ಆಡಳಿತ ಪಕ್ಷವನ್ನು‌ ಕಟ್ಟಿ ಹಾಕಲು ಕಾಂಗ್ರೆಸ್ ತಯಾರಿ ನಡೆಸುತ್ತಿದೆ.

ಇದನ್ನೂ ಓದಿ:  ಟರ್ಕಿ ಭೂಕಂಪಕ್ಕೆ ಸಿಲುಕಿರುವ ಕನ್ನಡಿಗರಿಗಾಗಿ ಸಹಾಯವಾಣಿ – ರಾಜ್ಯಸರ್ಕಾರದಿಂದ ನೆರವಿನ ಭರವಸೆ

ಚುನಾವಣಾ ಹಿನ್ನೆಲೆಯಲ್ಲಿ ಕೆಲವೊಂದು ವಿವಾದಾತ್ಮಕ ವಿಚಾರಗಳ ಕುರಿತಾಗಿಯೂ ಸದನದಲ್ಲಿ ಚರ್ಚೆ ನಡೆಯುವ ಸಾಧ್ಯತೆಗಳು ದಟ್ಟವಾಗಿವೆ. ಈ ಮೂಲಕ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ತಂತ್ರಗಾರಿಕೆಯನ್ನು ನಡೆಸುತ್ತಿದೆ‌. ಬೆಳಗಾವಿ ಚಳಿಗಾಲದ ಅಧಿವೇಶನದ ಸಮಯದಲ್ಲೂ ಸಾಕಷ್ಟು ಶಾಸಕರು, ಸಚಿವರು ಅಧಿವೇಶನಕ್ಕೆ ಗೈರಾಗಿದ್ದರು. ಈಗ ಚುನಾವಣೆಗೆ ಅವಧಿ ಕಡಿಮೆ ಇರುವ ಹಿನ್ನೆಲೆಯಲ್ಲಿ ಶಾಸಕರ ಗೈರು ಹೆಚ್ಚಾಗಿ ಕಂಡು ಬರಲಿದೆ ಎನ್ನಲಾಗ್ತಿದೆ.

suddiyaana