ಜಾತಿ, ಧರ್ಮ, ಸಿದ್ಧಾಂತಗಳಿಗೆ ತಳುಕು ಹಾಕದೆ ಮಾನಸಿಕ ಆರೋಗ್ಯಕ್ಕಾಗಿ ಯೋಗ ಮಾಡೋಣ – ಸಿಎಂ ಸಿದ್ದರಾಮಯ್ಯ

ಜಾತಿ, ಧರ್ಮ, ಸಿದ್ಧಾಂತಗಳಿಗೆ ತಳುಕು ಹಾಕದೆ ಮಾನಸಿಕ ಆರೋಗ್ಯಕ್ಕಾಗಿ ಯೋಗ ಮಾಡೋಣ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯೋಗ- ವಸುದೈವ ಕುಟಂಬಕ್ಕಾಗಿ ಎಂಬ ಘೋಷವಾಕ್ಯದೊಂದಿಗೆ ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ ಹಾಗೂ ಆರೋಗ್ಯ ಕುಟುಂಬ ಇಲಾಖೆ ವತಿಯಿಂದ  9ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ ನಡೆಯುತ್ತಿದೆ. ವಿಧಾನಸೌಧದ ‌ಮುಂಭಾಗದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯುತ್ತಿದ್ದು, ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದ್ದಾರೆ.

ಇದನ್ನೂ ಓದಿ: 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ – ಯೋಗವು ಜಗತ್ತನ್ನು ಒಂದುಗೂಡಿಸುತ್ತದೆ ಎಂದ ಪ್ರಧಾನಿ ಮೋದಿ

ಅಂತಾರಾಷ್ಟ್ರೀಯ ಯೋಗ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ರಾಜ್ಯಪಾಲ ತಾವರ್​ಚಂದ್ ಗೆಹ್ಲೋಟ್ ಯೋಗದ ಮಹತ್ವದ ಬಗ್ಗೆ ಮಾತನಾಡಿದ್ದಾರೆ. ನಮ್ಮ ಸಂಸ್ಕೃತಿಯಲ್ಲಿ ಯೋಗ ಇದೆ. ಯೋಗದ ಮಹತ್ವದ ಕುರಿತು ನಮ್ಮ ಹಳೆಯ ಗ್ರಂಥಗಳಲ್ಲಿ ಉಲ್ಲೇಖವಿದೆ. ಯೋಗಭ್ಯಾಸದಿಂದ ಭೌತಿಕ, ಮಾನಸಿಕ ಆರೋಗ್ಯ ಸುಧಾರಣೆಯಾಗುತ್ತೆ. ಪ್ರಧಾನಿ ಮೋದಿ ಯೋಗ ದಿನ ಆಚರಣೆ ಬಗ್ಗೆ ವಿಶ್ವಸಂಸ್ಥೆ ಬಳಿ ಪ್ರಸ್ತಾಪ ಮಾಡಿದ್ದು, ಅದಕ್ಕೆ ಒಪ್ಪಿ ಇಂದು ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಗ್ತಿದೆ ಎಂದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಭಾಧ್ಯಕ್ಷ ಯುಟಿ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್ ಭಾಗಿಯಾಗಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರ ಬಿ.ಕೆ ವೆಂಕಟೇಶ್ ಪ್ರಸಾದ್, ಅಂತಾರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ಅಂಜು ಬಾಬಿ ಜಾರ್ಜ್, ನಟಿ ಭಾವನ ರಾಮಣ್ಣ, ಅದಿತಿ ಪ್ರಭುದೇವ ಸೇರಿದಂತೆ ಗಣ್ಯರು ಉಪಸ್ಥಿತರಿದ್ದಾರೆ.

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕುರಿತು ಸಿಎಂ ಟ್ವೀಟ್​ ಮಾಡಿದ್ದಾರೆ. ಜಾತಿ, ಧರ್ಮ, ಪಂಥ, ಸಿದ್ಧಾಂತಗಳನ್ನು ತಳುಕುಹಾಕದೆ. ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಯೋಗಾಭ್ಯಾಸ ಮಾಡೋಣ. ಸರ್ವರಿಗೂ ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯಗಳು ಎಂದು ಟ್ವೀಟ್​ ಮೂಲಕ ಸಿಎಂ ಸಿದ್ದರಾಮಯ್ಯ ಜನತೆಗೆ ಶುಭ ಕೋರಿದ್ದಾರೆ.

suddiyaana