‘ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸಿ’ – ರಾಹುಲ್ ಗಾಂಧಿಗೆ ಕೇಂದ್ರ ಆರೋಗ್ಯ ಸಚಿವರಿಂದ ಪತ್ರ

‘ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸಿ’ – ರಾಹುಲ್ ಗಾಂಧಿಗೆ ಕೇಂದ್ರ ಆರೋಗ್ಯ ಸಚಿವರಿಂದ ಪತ್ರ

ಭಾರತದಲ್ಲಿ ಕೊರೊನಾ ಆತಂಕ ಆವರಿಸುತ್ತಿದೆ. ಜಗತ್ತಿನ ಶೇಕಡಾ 10ರಷ್ಟು ಭಾಗದಲ್ಲಿ ವೈರಸ್ ಮತ್ತೆ ಭಾರಿ ಪ್ರಮಾಣದಲ್ಲಿ ಹರಡಲಿದೆ. ಈಗಾಗ್ಲೇ ಅಮೆರಿಕ, ಜಪಾನ್, ದಕ್ಷಿಣ ಕೊರಿಯಾ, ಬ್ರೆಜಿಲ್​ನಲ್ಲಿ ಕೊರಾನಾ ಕೇಸ್​​ ದಿನಕಳೆದಂತೆ ಹೆಚ್ಚಳವಾಗುತ್ತಲೇ ಇದೆ. ಇದೀಗ ಭಾರತಕ್ಕೂ ಕೊರೊನಾ ಭೀತಿ ಎದುರಾಗಿದೆ. ಇದರ ಎಫೆಕ್ಟ್ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಗೂ ತಟ್ಟಲಿದೆ. ಹೀಗಾಗಿ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿಗೆ ಕೇಂದ್ರ ಆರೋಗ್ಯ ಇಲಾಖೆ ಪತ್ರ ಬರೆದಿದೆ. ಭಾರತ್ ಜೋಡೋ ಯಾತ್ರೆ ವೇಳೆ ಮಾಸ್ಕ್, ಸ್ಯಾನಿಟೈಜರ್ ಸೇರಿದಂತೆ ಕೋವಿಡ್-19 ನಿಯಮಾವಳಿ ಕಟ್ಟುನಿಟ್ಟಾಗಿ ಪಾಲಿಸಬೇಕು. ಕೋವಿಡ್ ಲಸಿಕೆ ಪಡೆದವರು ಮಾತ್ರ ಯಾತ್ರೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ ತಮ್ಮ ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ:  ಭಾರತಕ್ಕೂ ಕೊರೊನಾ ಭೀತಿ – ಪರಿಸ್ಥಿತಿ ಎದುರಿಸಲು ಸಜ್ಜಾದ ಕೇಂದ್ರ ಆರೋಗ್ಯ ಇಲಾಖೆ

ಕೋವಿಡ್ ನಿಯಮಾವಳಿ ಪಾಲಿಸದೇ ಇದ್ದರೆ ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸಿ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ, ಕಾಂಗ್ರೆಸ್ ನಾಯಕ ನೇತಾರ ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿದ್ದಾರೆ. ಇದೇ ಪತ್ರದ ಪ್ರತಿಯನ್ನು ಸಚಿವರು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರಿಗೂ ಕಳುಹಿಸಿದ್ದಾರೆ. ರಾಜಸ್ಥಾನದ ಮೂವರು ಬಿಜೆಪಿ ಸಂಸದರು ಭಾರತ್ ಜೋಡೋ ಯಾತ್ರೆಯಿಂದಾಗಿ ಕೋವಿಡ್ ಹರಡುವ ಸಾಧ್ಯತೆ ಬಗ್ಗೆ ಕಳವಳ ವ್ಯಕ್ತ ಪಡಿಸಿದ್ದರು. ರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆ ಮಂಗಳವಾರ ಮುಕ್ತಾಯಗೊಂಡಿದ್ದು, ಬುಧವಾರ ಹರಿಯಾಣ ಪ್ರವೇಶಿಸಿದೆ. ಭಾರತ್ ಜೋಡೋ ಯಾತ್ರೆ ವೇಳೆ ಮಾಸ್ಕ್, ಸ್ಯಾನಿಟೈಜರ್ ಸೇರಿದಂತೆ ಕೋವಿಡ್-19 ನಿಯಮಾವಳಿ ಕಟ್ಟುನಿಟ್ಟಾಗಿ ಪಾಲಿಸಬೇಕು. ಕೋವಿಡ್ ಲಸಿಕೆ ಪಡೆದವರು ಮಾತ್ರ ಯಾತ್ರೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಮಾಂಡವಿಯ ತಮ್ಮ ಪತ್ರದಲ್ಲಿ ಬರೆದಿದ್ದಾರೆ. ಸಾರ್ವಜನಿಕರ ಆರೋಗ್ಯದ ಕಾಳಜಿ, ದೇಶವನ್ನು ಕೋವಿಡ್ ಸಾಂಕ್ರಾಮಿಕದಿಂದ ಪಾರು ಮಾಡುವುದಕ್ಕಾಗಿ ಮತ್ತು ದೇಶದ ಹಿತಕ್ಕಾಗಿ ನೀವು ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸಬೇಕು ಎಂದು ನಾನು ನಿಮ್ಮಲ್ಲಿ ಮನವಿ ಮಾಡುತ್ತೇನೆ ಎಂದು ಮಾಂಡವಿಯ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ, ಮಾಂಡವಿಯ ಅವರು ಸಾರ್ವಜನಿಕರ ಆರೋಗ್ಯ ಬಗ್ಗೆ ಕಾಳಜಿ ಹೊಂದಿದ್ದರೆ, ಇತ್ತೀಚೆಗೆ ಮುಕ್ತಾಯವಾದ ಗುಜರಾತ್ ವಿಧಾನಸಭಾ ಚುನಾವಣೆಗೆ ಪ್ರಚಾರ ಮಾಡಿದ ಬಿಜೆಪಿ ನಾಯಕರು ಯಾಕೆ ಈ ನಿಯಮಾವಳಿ ಪಾಲಿಸಿಲ್ಲ ಎಂದು ಪ್ರಶ್ನಿಸಿರುವುದಾಗಿ ಎಎನ್ಐ ವರದಿ ಮಾಡಿದೆ. ಯಾತ್ರೆ ಬಗ್ಗೆ ದಿಗಿಲುಗೊಂಡಿರುವ ಬಿಜೆಪಿ ಭಯದಿಂದ ಈ ರೀತಿ ವರ್ತಿಸುತ್ತಿದೆ. ಗುಜರಾತಿನಲ್ಲಿ ಮತಯಾಚನೆ ಮಾಡುವಾಗ ಪ್ರಧಾನಿ ನರೇಂದ್ರ ಮೋದಿಯವರು ಮಾಸ್ಕ್ ಧರಿಸಿದ್ದರೇ ಎಂದು ಕಾಂಗ್ರೆಸ್ ನಾಯಕ ಪ್ರಶ್ನಿಸಿದ್ದಾರೆ.

suddiyaana