ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ – ಪ್ರಥಮ್, ಹಾಗೂ ರಕ್ಷಕ್‌ಗೆ ಸ್ಥಳ ಮಹಜರಿಗೆ ಬರುವಂತೆ ನೋಟಿಸ್!

ದೊಡ್ಡಬಳ್ಳಾಪುರ ತಾಲೂಕಿನ ರೇಣುಕಾ ಯಲ್ಲಮ್ಮ ದೇವಸ್ಥಾನದ ವ್ಯಾಪ್ತಿಯಲ್ಲಿ ಕೆಲವರು ಜೀವ ಬೆದರಿಕೆ ಹಾಕಿರುವುದಾಗಿ ನಟ ಪ್ರಥಮ್ ದೂರು ನೀಡಿದ್ರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಥಮ್, ಹಾಗೂ ರಕ್ಷಕ್‌ಗೆ ಸ್ಥಳ ಮಹಜರಿಗೆ ಬರುವಂತೆ ನೋಟಿಸ್ ನೀಡಲಾಗಿದೆ.
ಇದನ್ನೂ ಓದಿ: ಹ್ಯಾಂಡ್ರೈಟಿಂಗ್ ಚೆನ್ನಾಗಿಲ್ಲವೆಂದು ಬಾಲಕ ಕೈ ಸುಟ್ಟ ಟ್ಯೂಷನ್ ಟೀಚರ್!
ಜುಲೈ 22ರ ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ ಪ್ರಥಮ್ ಬಂದಿದ್ದರು. ಈ ವೇಳೆ ಪ್ರಥಮ್ ರನ್ನ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ಜೀವ ಬೆದರಿಕೆ ಹಾಕಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಘಟನೆ ನಡೆದು ಹಲವು ದಿನಗಳ ನಂತರ ಖುದ್ದು, ಪ್ರಥಮ್ ನೇರವಾಗಿ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ಅವರನ್ನು ಭೇಟಿಯಾಗಿ ದೂರು ನೀಡಿದ್ದರು. ಪ್ರಥಮ್ ದೂರಿನ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಜೀವ ಬೆದರಿಕೆ ಹಾಕಲಾಗಿದ್ದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಇದೀಗ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಸ್ಥಳ ಮಹಜರಿಗೆ ಹಾಜರಾಗುವಂತೆ ನಟ ಪ್ರಥಮ್, ರಕ್ಷಕ್ ಹಾಗೂ ಜಮೀನು ಮಾಲೀಕ ಮಹೇಶ್‌ಗೆ ನೋಟಿಸ್ ನೀಡಿದ್ದಾರೆ. ಸಾಕ್ಷಿಗಳ ಸಮ್ಮುಖದಲ್ಲಿ ಸ್ಪಾಟ್ ಮಹಜರು ಮಾಡುವ ಅವಶ್ಯಕತೆಯಿದೆ ಎಂದು ತಿಳಿಸಿದ್ದಾರೆ.
ಸ್ಥಳ ಮಹಜರು ಬಳಿಕ ಪೊಲೀಸರು ಮತ್ತೊಂದಿಷ್ಟು ಸಾಕ್ಷಿಗಳನ್ನ ಸಂಗ್ರಹ ಮಾಡಿ ಆರೋಪಿತ ವ್ಯಕ್ತಿಗಳಾದ ರೌಡಿಶೀಟರ್ ಬೇಕರಿ ರಘು ಹಾಗೂ ಯಶಸ್ವಿನಿಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದ್ದಾರೆ. ಬುಧವಾರ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಸಾದಿಕ್ ಪಾಷಾ ಅವರ ಮುಂದೆ ಹಾಜರಾಗುವಂತೆ ತಿಳಿಸಿದ್ದಾರೆ.

ನೋಡಿರಿ

