ಫುಟ್ಬಾಲ್ ಪಂದ್ಯ ನಡೆಯುತ್ತಿರುವಾಗಲೇ ಬಡಿದ ಸಿಡಿಲು – ಇಬ್ಬರು ಸಾವು !
ಫುಟ್ಬಾಲ್ ಪಂದ್ಯ ನಡೆಯುತ್ತಿರುವ ವೇಳೆ ಮೈದಾನಕ್ಕೆ ಸಿಡಿಲು ಬಡಿದಿದ್ದು, ಇಬ್ಬರು ಧಾರುಣವಾಗಿ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಖಂಡ್ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ.
ಜಾರ್ಖಂಡ್ನ ದುಮ್ಕಾ ಜಿಲ್ಲೆಯಲ್ಲಿ ಫುಟ್ಬಾಲ್ ಪಂದ್ಯ ಆಯೋಜನೆ ಮಾಡಲಾಗಿತ್ತು. ಪಂದ್ಯ ನಡೆಯುತ್ತಿದ್ದ ವೇಳೆ ಭಾರಿ ಮಳೆ ಸುರಿದಿದೆ. ಪರಿಣಾಮ ಮೈದಾನದಲ್ಲಿದ್ದ ಪ್ರೇಕ್ಷಕರು ಆಶ್ರಯ ಪಡೆಯಲೆಂದು ಪಕ್ಕದ ಶೆಡ್ ಒಂದಕ್ಕೆ ತೆರಳಿದ್ದಾರೆ. ಈ ವೇಳೆ ಸಿಡಿಲು ಬಡಿದಿದ್ದು, ಅದರ ಪರಿಣಾಮವಾಗಿ ಇಬ್ಬರು ಪ್ರೇಕ್ಷಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೂವರು ಪ್ರೇಕ್ಷಕರು ಗಂಭೀರವಾಗಿ ಗಾಯಗೊಂಡಿದ್ದು, ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಇದನ್ನೂ ಓದಿ: ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸ್ವರಾ ಭಾಸ್ಕರ್ – ವಿವಾದಕ್ಕೀಡಾಯ್ತು ಮಗಳ ಹೆಸರು!
ಮೃತರನ್ನು ಶಿವಲಾಲ್ ಸೊರೇನ್ (32), ಸಂತಲಾಲ್ ಹೆಂಬ್ರಾಮ್ (20) ಮೃತ ದುರ್ದೈವಿಗಳೆಂದು ತಿಳಿದು ಬಂದಿದೆ. ಗಾಯಗೊಂಡಿರುವವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಾಳುಗಳನ್ನು ಸರೈಯಾಹತ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ನಿಗಾ ವಹಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.