ಲಿಯೋನೆಲ್ ಮೆಸ್ಸಿ ಹ್ಯಾಟ್ರಿಕ್ ಗೋಲು – ವಿಶ್ವ ದಾಖಲೆ ಸರಿಗಟ್ಟಿದ ಕಾಲ್ಚೆಂಡಿನ ಮಾಂತ್ರಿಕ ಮೆಸ್ಸಿ

ಲಿಯೋನೆಲ್ ಮೆಸ್ಸಿ ಹ್ಯಾಟ್ರಿಕ್ ಗೋಲು – ವಿಶ್ವ ದಾಖಲೆ ಸರಿಗಟ್ಟಿದ ಕಾಲ್ಚೆಂಡಿನ ಮಾಂತ್ರಿಕ ಮೆಸ್ಸಿ

ಕಾಲ್ಚೆಂಡಿನ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಮತ್ತೊಂದು ವಿಶ್ವದಾಖಲೆ ಮಾಡಿದ್ದಾರೆ. ಹಾಲಿ ಚಾಂಪಿಯನ್ ಅರ್ಜೆಂಟೀನಾ ಮತ್ತು ಅಲ್ಜೀರಿಯಾ ನಡುವೆ ನಡೆದ ಹಣಾಹಣಿಯಲ್ಲಿ ಫುಟ್​ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಇದನ್ನೂ ಓದಿ:ಫಿಫಾ ವಿಶ್ವಕಪ್‌ನಲ್ಲಿ 68 ವರ್ಷಗಳ ಬಳಿಕ ಇತಿಹಾಸ – ಒಂದೇ ದಿನ ನಾಲ್ಕು ಪಂದ್ಯ ಡ್ರಾ

ಅಮೆರಿಕದ ಕನ್ಸಾಸ್ ಸಿಟಿಯ ಆರೋಹೆಡ್ ಕ್ರೀಡಾಂಗಣದಲ್ಲಿ ನಡೆದ ಹಾಲಿ ಚಾಂಪಿಯನ್ ಅರ್ಜೆಂಟೀನಾ ಮತ್ತು ಅಲ್ಜೀರಿಯಾ ನಡುವಿನ ಪಂದ್ಯದಲ್ಲಿ ಮೆಸ್ಸಿ ಮ್ಯಾಜಿಕ್ ಮಾಡಿದ್ದಾರೆ. ಫುಟ್‌ಬಾಲ್ ಲೋಕದ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಹ್ಯಾಟ್ರಿಕ್ ಗೋಲು ದಾಖಲಿಸುವ ಮೂಲಕ ಇತಿಹಾಸ ಬರೆದಿದ್ದಾರೆ. ಫಿಫಾ ವಿಶ್ವಕಪ್‌ನ ಗ್ರೂಪ್ ಜೆ ನ  ಆರಂಭಿಕ ಪಂದ್ಯದಲ್ಲಿ ಆಲ್ಜೀರಿಯಾ ವಿರುದ್ಧ ಭರ್ಜರಿ ಹ್ಯಾಟ್ರಿಕ್ ಗೋಲು ಸಿಡಿಸುವ ಮೂಲಕ ಮೆಸ್ಸಿ, ಜರ್ಮನಿಯ ದಿಗ್ಗಜ ಮಿರೋಸ್ಲಾವ್ ಕ್ಲೋಸ್ ಅವರ ಹೆಸರಲ್ಲಿದ್ದ ಅತಿ ಹೆಚ್ಚು ವಿಶ್ವಕಪ್ ಗೋಲುಗಳ ಸಾರ್ವಕಾಲಿಕ ದಾಖಲೆಯನ್ನು ಸರಿಗಟ್ಟಿದ್ದಾರೆ. ಪಂದ್ಯ ಆರಂಭವಾಗುತ್ತಿದ್ದಂತೆ, ಮೆಸ್ಸಿ ಮೊದಲ 17ನೇ ನಿಮಿಷದಲ್ಲೇ ಅದ್ಭುತ ಲಾಂಗ್-ರೇಂಜ್ ಗೋಲು ಬಾರಿಸಿ ಅರ್ಜೆಂಟೀನಾಕ್ಕೆ 1-0 ಮುನ್ನಡೆ ತಂದುಕೊಟ್ಟರು. ಇದಾದ ಬಳಿಕ 60ನೇ ನಿಮಿಷದಲ್ಲಿ ಎರಡನೇ ಗೋಲು ಮತ್ತು 76ನೇ ನಿಮಿಷದಲ್ಲಿ ಮೂರನೇ ಗೋಲು ಬಾರಿಸುವ ಮೂಲಕ ತಮ್ಮ ವಿಶ್ವಕಪ್ ವೃತ್ತಿಜೀವನದ ಚೊಚ್ಚಲ ಹ್ಯಾಟ್ರಿಕ್ ಪೂರೈಸಿದರು.

ಮಿರೋಸ್ಲಾವ್ ಕ್ಲೋಸ್  ಜರ್ಮನಿ ಪರ 24 ವಿಶ್ವಕಪ್ ಪಂದ್ಯಗಳನ್ನಾಡಿದ್ದರು. 16 ಗೋಲುಗಳನ್ನು ಬಾರಿಸಿ ಫಿಫಾ ವಿಶ್ವಕಪ್​ ಇತಿಹಾಸದಲ್ಲೇ ಅತ್ಯಧಿಕ ಗೋಲು ದಾಖಲಿಸಿದ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಮೆಸ್ಸಿ ಕೂಡಾ ಇವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಅರ್ಜೆಂಟೀನಾ ಪರ ಈವರೆಗೆ 27 ವಿಶ್ವಕಪ್ ಪಂದ್ಯಗಳನ್ನಾಡಿರುವ ಮೆಸ್ಸಿ ಒಟ್ಟು 16 ಗೋಲುಗಳನ್ನು ದಾಖಲಿಸಿದ್ದಾರೆ. ಈ ಮೂಲಕ ಫಿಫಾ ವಿಶ್ವಕಪ್​ನಲ್ಲಿ ಅತ್ಯಧಿಕ ಗೋಲು ದಾಖಲಿಸಿ ಕ್ಲೋಸ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮೆಸ್ಸಿ ಸರಿಗಟ್ಟಿದ್ದಾರೆ. ಮೆಸ್ಸಿ ಅವರ ಈ ಭರ್ಜರಿ ಪ್ರದರ್ಶನದ ನೆರವಿನೊಂದಿಗೆ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡವು ಅಲ್ಜೀರಿಯಾ ವಿರುದ್ಧ 3-0 ಗೋಲುಗಳ ಅಮೋಘ ಜಯ ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

Sulekha

Leave a Reply

Your email address will not be published. Required fields are marked *