ದೆಹಲಿ ಸಿಎಂ ವಿರುದ್ಧ ಭುಗಿಲೆದ್ದ ಕಿಚ್ಚು – ಅರವಿಂದ್ ಕೇಜ್ರಿವಾಲ್ ರಾಜೀನಾಮೆಗೆ ಒತ್ತಡ ಹೆಚ್ಚಿದ್ದೇಕೆ..!?

ದೆಹಲಿ ಸಿಎಂ ವಿರುದ್ಧ ಭುಗಿಲೆದ್ದ ಕಿಚ್ಚು – ಅರವಿಂದ್ ಕೇಜ್ರಿವಾಲ್ ರಾಜೀನಾಮೆಗೆ ಒತ್ತಡ ಹೆಚ್ಚಿದ್ದೇಕೆ..!?

ರಾಷ್ಟ್ರ ರಾಜಧಾನಿ ಹೆಹಲಿಯಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಬೃಹತ್ ಹೋರಾಟ ನಡೆಸುತ್ತಿದೆ. ದೆಹಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಇಂದು ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿ ಎದುರು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ : ವಿವಾಹಿತೆಯನ್ನ ಮದುವೆಯಾಗುವುದಾಗಿ ಹೇಳಿದ ದೈವನರ್ತಕ – ಪಾತ್ರಿ ನುಡಿ ಕೇಳಿ ಜನ ಕೆರಳಿದ್ದೇಕೆ..!? 

ಅಬಕಾರಿ ಹಗರಣದ ಆರೋಪ ಪಟ್ಟಿಯಲ್ಲಿ ಇಡಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನು ಸೇರಿಸಿದೆ. ಈ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಇಂದು ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹಾಕಲಾಗಿದ್ದ ಬ್ಯಾರಿಕೇಡ್‌ಗಳ ಮೇಲೆ ಹತ್ತಿದ್ದಾರೆ. ಇನ್ನೂ ಕೆಲವರು ಘೋಷಣಾ ಫಲಕಗಳನ್ನು ಹಿಡಿದು ನಿಂತು ಘೋಷಣೆಗಳನ್ನು ಕೂಗಿದ್ದಾರೆ.

ಜಾರಿ ನಿರ್ದೇಶನಾಲಯವು ಇತ್ತೀಚೆಗೆ ಎರಡನೇ ಚಾರ್ಜ್ ಶೀಟ್ ಸಲ್ಲಿಕೆ ಮಾಡಿತ್ತು. ಇದ್ರಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದೆ. ಹೀಗಾಗಿ ಕೇಜ್ರಿವಾಲ್ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಸಾಬೀತಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಐವರು ವ್ಯಕ್ತಿಗಳು ಮತ್ತು 7 ಕಂಪನಿಗಳ ವಿರುದ್ಧದ ಪೂರಕ ಚಾರ್ಜ್ ಶೀಟ್ ಅನ್ನು ನ್ಯಾಯಾಲಯ ಗುರುವಾರ ಸ್ವೀಕರಿಸಿದೆ. ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ಪ್ರತಿನಿಧಿಯಾಗಿರುವ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಸಿಬಿಐ ತನಿಖೆಗೆ ಆದೇಶಿಸಿದ ನಂತರ ಎಎಪಿ ಸರ್ಕಾರವು ಕಳೆದ ವರ್ಷ ಅಬಕಾರಿ ನೀತಿಯನ್ನು ಹಿಂತೆಗೆದುಕೊಂಡಿತು.

ಅಬಕಾರಿ ನೀತಿಯಿಂದ ಗಳಿಸಿದ 100 ಕೋಟಿ ರೂಪಾಯಿ ಕಿಕ್‌ಬ್ಯಾಕ್ ನ ಒಂದು ಭಾಗವನ್ನು ಕಳೆದ ವರ್ಷದ ಗೋವಾ ವಿಧಾನಸಭಾ ಚುನಾವಣೆಗೆ ಎಎಪಿ ಪ್ರಚಾರದಲ್ಲಿ ಬಳಸಲಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು. ಆದರೆ, ಕೇಜ್ರಿವಾಲ್ ಅವರು ಈ ಎಲ್ಲಾ ಆರೋಪಗಳನ್ನು ಬಲವಾಗಿ ತಳ್ಳಿಹಾಕಿದ್ದರು. ಆಮ್ ಆದ್ಮಿ ಪಕ್ಷವನ್ನು ತುಳಿಯಲು ಬಿಜೆಪಿ ಈ ನಾಟಕವಾಡುತ್ತಿದೆ ಎಂದಿದ್ದರು.

suddiyaana