ಏ. 26 ರಂದು ಲೋಕಸಭೆ ಚುನಾವಣೆ – ನಮ್ಮ ಮೆಟ್ರೋ ಸೇವೆ ವಿಸ್ತರಣೆ!

ಏ. 26 ರಂದು ಲೋಕಸಭೆ ಚುನಾವಣೆ – ನಮ್ಮ ಮೆಟ್ರೋ ಸೇವೆ ವಿಸ್ತರಣೆ!

ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಸುದ್ದಿಯೊಂದಿದೆ. ಏಪ್ರಿಲ್‌ 26 ರಂದು ನಮ್ಮ ಮೆಟ್ರೋ ಸೇವೆಯನ್ನು ವಿಸ್ತರಿಸಲಾಗುತ್ತಿದೆ ಎಂದು ಬಿಎಂಆರ್‌ಸಿಎಲ್‌ ಮಾಹಿತಿ ನೀಡಿದೆ.

ಏ. 26 ರಂದು ರಾಜ್ಯದಲ್ಲಿ ಮೊದಲನೇ ಹಂತದ ಲೋಕಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಯಲ್ಲಿ ಮತದಾನದ ದಿನ ಮೆಟ್ರೋ ಸೇವೆಯನ್ನು ವಿಸ್ತರಿಸಲಾಗುತ್ತಿದೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

ಇದನ್ನೂ ಓದಿ: CSK ಸೋಲಿಗೆ ಧೋನಿ ಕಾರಣನಾ? – ಚಹಾರ್ ಗೆ ಬೌಲಿಂಗ್ ಕೊಟ್ಟಿಲ್ಲ ಯಾಕೆ? -ತಲೈವಾ ಫ್ಯಾನ್ಸ್ ರೊಚ್ಚಿಗೆದ್ದಿದ್ದೇಕೆ?

ಬೆಂಗಳೂರಿನ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ, ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳಿಂದ ಕೊನೆಯ ರೈಲು ಸೇವೆಯನ್ನು ರಾತ್ರಿ 11.55 ರವರೆಗೆ ವಿಸ್ತರಿಸಲಾಗಿದೆ. ಇತ್ತ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳಿಗೆ ಏ.26 ರ ಮಧ್ಯರಾತ್ರಿ 12.35 ಕ್ಕೆ ಮೆಜೆಸ್ಟಿಕ್ ಮೆಟ್ರೋ ಸ್ಟೇಷನ್​ನಿಂದ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು ಹೊರಡಲಿದೆ.

ಈ ಮೊದಲಿನಿಂದಲೂ ಮೆಟ್ರೋ, ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹಬ್ಬಗಳು, ಕ್ರಿಕೆಟ್​ ಹಾಗೂ ಇನ್ನಿತರ ವಿಶೇಷ ಸಂದರ್ಭಗಳಲ್ಲಿ ಮೆಟ್ರೋ ಸಂಚಾರ ಅವಧಿಯನ್ನು ವಿಸ್ತರಣೆಯನ್ನು ಮಾಡುತ್ತಲೇ ಬಂದಿದೆ. ಅದರಂತೆ ಏ.26 ರಂದು ಲೋಕಸಭಾ ಚುನಾವಣೆ ಮತದಾನ ಇರುವ ಹಿನ್ನಲೆ ಮಧ್ಯರಾತ್ರಿ ವರೆಗೆ ಸಂಚಾರ ಅವಧಿಯನ್ನು ವಿಸ್ತರಿಸಿದೆ.

Shwetha M