ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಕರೆ ತಂದು ಕಠಿಣ ಶಿಕ್ಷೆ ನೀಡಬೇಕು –  ಪ್ರಧಾನಿ ಮೋದಿ

ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಕರೆ ತಂದು ಕಠಿಣ ಶಿಕ್ಷೆ ನೀಡಬೇಕು –  ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಆರಂಭವಾಗಿದ್ದು ಮೂರನೇ ಹಂತದ ಮತದಾನ ನಡೆಯುತ್ತಿದೆ. ದೇಶದ ಸಾರ್ವತ್ರಿಕ ಚುನಾವಣೆಗೆ ಇಂದು ಮೂರನೇ ಹಂತದ ಮತದಾನ ನಡೆಯುತ್ತಿದ್ದು, ತವರು ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಗುಜರಾತ್‌ನ ಅಹಮದಾಬಾದ್‌ನಲ್ಲಿ ನಿಶಾನ್‌ ಹಿರಿಯ ಪ್ರಾಥಮಿಕ ಶಾಲೆಯಲ್ಲಿದ್ದ ಮತಗಟ್ಟೆಗೆ ತೆರಳಿ ಪ್ರಧಾನಿ ಮೋದಿ ಅವರು ಮತ ಚಲಾಯಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಜೊತೆಗೆ ಗೃಹ ಸಚಿವ ಅಮಿತ್ ಶಾ ಕೂಡ ಉಪಸ್ಥಿತರಿದ್ದರು. ಮತದಾನ ಮಾಡಿದ ಬಳಿಕ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಕರೆ ತಂದು ಕಠಿಣ ಶಿಕ್ಷೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇದನ್ನೂ ಓದಿ:ರಾಜ್ಯದಲ್ಲಿ ಎರಡನೇ ಹಂತದ ಮತದಾನ ಆರಂಭ – ಬಿಸಿಗಾಳಿ ಎದುರಿಸಲು ಚುನಾವಣಾ ಆಯೋಗದಿಂದ ವಿಶೇಷ ವ್ಯವಸ್ಥೆ 

ಕರ್ನಾಟಕ ರಾಜ್ಯ ಸರ್ಕಾರವೇ ಕ್ರಮ ಕಠಿಣ ಕ್ರಮ ಕೈಗೊಳ್ಳಬೇಕು. ಈ 2,979 ಸಾವಿರ ವಿಡಿಯೋಗಳನ್ನು ಒಂದೇ ದಿನ ಮಾಡಿಲ್ಲ. ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದಾಗ ರೇಕಾರ್ಡ್​ ಮಾಡಿರುವ ವಿಡಿಯೋ ಇದು. ಆರೋಪಿಯ ಮೇಲೆ ರಾಜ್ಯ ಸರ್ಕಾರ ನಿಗಾ ವಹಿಸಬೇಕಿತ್ತು ಎಂದು ಹೇಳಿದ್ದಾರೆ.

ವಿದೇಶಕ್ಕೆ ಹೋಗಲು ಬಿಟ್ಟಿರುವುದು ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದ ಗಮನಕ್ಕೆ ವಿಷಯ ತಂದಿಲ್ಲ. ಒಕ್ಕಲಿಗ ಪ್ರಾಬಲ್ಯದ ಕ್ಷೇತ್ರಗಳ ಚುನಾವಣೆ ಮುಗಿದ ಮೇಲೆ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಒಕ್ಕಲಿಗ ಪ್ರಾಬಲ್ಯದ ಕ್ಷೇತ್ರಗಳ ಚುನಾವಣೆ ಮುಗಿದ ಮೇಲೆ ವಿಡಿಯೋ ಬಿಡುಗಡೆ ರಾಜಕೀಯ ಗೇಮ್. ಇದು ಅನುಮಾನಕ್ಕೆ ಕಾರಣವಾಗಿದೆ. ಈ ರೀತಿಯ ರಾಜಕೀಯ ಗೇಮ್ ದೇಶದಲ್ಲಿ ನಿಲ್ಲಬೇಕು. ಪ್ರಜ್ವಲ್ ರೇವಣ್ಣರಂತಹ ಅತ್ಯಾಚಾರಿ ವ್ಯಕ್ತಿಗಳ ಬಗ್ಗೆ ಶೂನ್ಯ ಸಹಿಷ್ಣುತೆ ಹೊಂದಿರಬೇಕು. ಕಠಿಣಾತಿ ಕಠಿಣ ಶಿಕ್ಷೆ ಆಗಲೇಬೇಕು. ಪ್ರಜ್ವಲ್ ರೇವಣ್ಣನನ್ನು‌ ವಿದೇಶದಿಂದ ವಾಪಸ್ಸು ಕರೆ ತರಬೇಕು ಎಂದು ಮೋದಿ ಹೇಳಿದ್ದಾರೆ

Shwetha M