ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಖ್ಯಾತ ನಟಿ ಮಾಧುರಿ ದೀಕ್ಷಿತ್! – ಈ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕೆ?

ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಖ್ಯಾತ ನಟಿ ಮಾಧುರಿ ದೀಕ್ಷಿತ್! – ಈ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕೆ?

ಲೋಕಸಭೆ ಚುನಾವಣೆಗೆ ಇನ್ನು ಕೇವಲ ಐದಾರು ತಿಂಗಳು ಮಾತ್ರ ಬಾಕಿ ಇದೆ. ಈ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಕುತೂಹಲ ಒಂದೆಡೆಯಾದರೆ, ಯಾರೆಲ್ಲ ಕಣಕ್ಕೆ ಇಳಿಯಬಹುದು ಎಂಬ ನಿರೀಕ್ಷೆಗಳು ಮತ್ತೊಂದೆಡೆ. ಇನ್ನು ರಾಜಕೀಯಕ್ಕೆ ಸಿನಿಮಾ ಕಲಾವಿದರು, ಕ್ರಿಕೆಟ್ ಪಟುಗಳು ರಾಜಕೀಯಕ್ಕೆ ಬರುವುದು ಹೊಸತಲ್ಲ. ಈಗಾಗಲೇ ಸಾಕಷ್ಟು ಕಲಾವಿದರು ರಾಜಕಾರಣ ಮಾಡುತ್ತಿದ್ದಾರೆ. ಇದೀಗ ಲೋಕಸಭೆ ಚುನಾವಣೆಯಲ್ಲಿ ಹಿಂದಿ ಚಿತ್ರರಂಗದ ಖ್ಯಾತ ನಟಿಯೊಬ್ಬರು ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಂಬರುವ ಲೋಕಸಭಾ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ. ಯಾವ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಗಳನ್ನು ಕಣಕ್ಕಿಸಿದ್ರೆ ಒಳ್ಳೆದು ಅಂತಾ ರಾಜಕೀಯ ಪಕ್ಷಗಳು ಲೆಕ್ಕಾಚಾರ ಹಾಕುತ್ತಿವೆ. ಈ ಹೊತ್ತಲ್ಲೇ ಬಾಲಿವುಡ್ನ ಖ್ಯಾತ ನಟಿ ಮಾಧುರಿ ದೀಕ್ಷಿತ್ ರಾಜಕಾರಣಕ್ಕೆ ಪ್ರವೇಶ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಭಾರಿ ಸದ್ದು ಮಾಡುತ್ತಿದೆ. ಮಾಧುರಿ ದೀಕ್ಷಿತ್ ಅವರು ರಾಜಕೀಯಕ್ಕೆ ಎಂಟ್ರಿ ಕೊಟ್ಟರೆ ಈಗಾಗಲೇ ಸಕ್ರಿಯ ರಾಜಕೀಯದಲ್ಲಿರುವ ತಾರೆಯರ ದಂಡಿಗೆ ಹೊಸ ಸೇರ್ಪಡೆಯಾದಂತಾಗಲಿದೆ.

ಇದನ್ನೂ ಓದಿ: ಬಿಗ್‌ಬಾಸ್ ಸ್ಪರ್ಧಿಯಿಂದ ಗರ್ಭಿಣಿಯಾಗಿದ್ದಾಗಿ ಹೇಳಿಕೆ- ಈ ವಾರ ಎಲಿಮಿನೇಟ್ ಆಗೋದು ಇವರೇ..!

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಾಧುರಿ ದೀಕ್ಷಿತ್ ಸ್ಪರ್ಧಿಸುತ್ತಿದ್ದು, ಬಿಜೆಪಿಯಿಂದ ಟಿಕೆಟ್ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಬಿಜೆಪಿಯ ಮುಖಂಡರು ಮಾಧುರಿಯನ್ನು ಸಂಪರ್ಕಿಸಿದ್ದಾರಂತೆ. ಅಲ್ಲದೇ, ಪುಣೆಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಹೇಳಿದ್ದಾರೆ ಎನ್ನಲಾಗುತ್ತಿದೆ.

ಪುಣೆಯ ಲೋಕಸಭಾ ಕ್ಷೇತ್ರವು ಅತ್ಯಂತ ಪ್ರತಿಷ್ಠಿತ ಕಣವಾಗಿದ್ದು, ಇಲ್ಲಿಂದಲೇ ಮಾಧುರಿ ಅವರನ್ನು ಅಖಾಡಕ್ಕೆ ಇಳಿಸಲು ಚಿಂತನೆ ಮಾಡಲಾಗುತ್ತಿದೆ. ಬಿಜೆಪಿ ಮತ್ತು ಮಾಧುರಿ ನಡೆವೆ ಈಗಾಗಲೇ ಒಂದು ಸುತ್ತಿನ ಮಾತುಕತೆ ಕೂಡ ಮಾಡಲಾಗಿದೆ. ಬಹುತೇಕ ಬಿಜೆಪಿಯನ್ನು ಮಾಧುರಿ ಸೇರುವುದು ಪಕ್ಕಾ ಎಂದು ಮೂಲಗಳು ಹೇಳುತ್ತಿವೆ.

Shwetha M