ಮತದಾರರ ಓಲೈಕೆಗೆ ಗ್ಯಾರಂಟಿ ಅಸ್ತ್ರ! – ಮಹಿಳೆಯರಿಗಾಗಿ ಐದು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಮತದಾರರ ಓಲೈಕೆಗೆ ಗ್ಯಾರಂಟಿ ಅಸ್ತ್ರ! – ಮಹಿಳೆಯರಿಗಾಗಿ ಐದು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಹಲವು ಗ್ಯಾರಂಟಿಗಳನ್ನ ಘೋಷಣೆ ಮಾಡಿದ್ದ ಕಾಂಗ್ರೆಸ್ ಪಕ್ಷ, ಭರ್ಜರಿ ಗೆಲುವು ಸಾಧಿಸಿತ್ತು. ಅದೇ ಮಾದರಿಯಲ್ಲಿ ಪಂಚ ರಾಜ್ಯ ವಿಧಾನಸಭಾ ಚುನಾವಣೆಯಲ್ಲೂ ಗ್ಯಾರಂಟಿ ಅಸ್ತ್ರ ಪ್ರಯೋಗಿಸಿತು. ಆದರೆ, ತೆಲಂಗಾಣ ಹೊರತುಪಡಿಸಿ ಇನ್ನೆಲ್ಲಿಯೂ ಗ್ಯಾರಂಟಿ ಮ್ಯಾಜಿಕ್ ಮಾಡಲಿಲ್ಲ. ಇದೀಗ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಯುವಕರಿಗೆ ಹಲವು ಗ್ಯಾರಂಟಿ ಘೋಷಿಸಿದ್ದ ಕಾಂಗ್ರೆಸ್, ಈಗ ಮಹಿಳೆಯರನ್ನ ಗುರಿಯಾಗಿಸಿ 5 ಗ್ಯಾರಂಟಿ ಯೋಜನೆಗಳನ್ನ ಘೋಷಣೆ ಮಾಡಿದೆ.

ಇದನ್ನೂ ಓದಿ:ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್- ಬೈಡನ್ ನಡುವೆ ಮತ್ತೆ ಸ್ಪರ್ಧೆ!

ಹೌದು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ​ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆಯಲ್ಲಿ 5 ಘೋಷಣೆಗಳನ್ನು ಮಾಡಿದ್ದಾರೆ. ಈ ಯೋಜನೆಗಳಿಗೆ ‘ನಾರಿ ನ್ಯಾಯ’  ಯೋಜನೆ ಎಂದು ನಾಮಕರಣ ಮಾಡಲಾಗಿದೆ. ಈ ಪ್ರಣಾಳಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದರ ಅಡಿಯಲ್ಲಿ ಕಾಂಗ್ರೆಸ್ ಬಡ ಮಹಿಳೆಯರಿಗೆ ಪ್ರತಿ ವರ್ಷ ಒಂದು ಲಕ್ಷ ರೂಪಾಯಿ ನೆರವು ನೀಡುವುದಾಗಿ ಭರವಸೆ ನೀಡಿದೆ. ಅಲ್ಲದೇ ಸರ್ಕಾರಿ ನೇಮಕಾತಿಯಲ್ಲಿ ಮಹಿಳೆಯರಿಗೆ ಅರ್ಧದಷ್ಟು ಹಕ್ಕು ನೀಡಲಾಗುವುದು ಎಂದು ಹೇಳಿದರು.

ಕಾಂಗ್ರೆಸ್ ಘೋಷಣೆ ಮಾಡಿದ 5 ಯೋಜನೆಗಳು ಹೀಗಿವೆ..

  • ಮಹಾಲಕ್ಷ್ಮಿ ಗ್ಯಾರಂಟಿ – ಇದರ ಅಡಿಯಲ್ಲಿ, ಬಡ ಕುಟುಂಬದ ಪ್ರತಿಯೊಬ್ಬ ಮಹಿಳೆಗೆ ವಾರ್ಷಿಕವಾಗಿ 1 ಲಕ್ಷ ರೂ. ನೀಡಲಾಗುತ್ತದೆ.
  • ಆದಿ ಆಬಾಧಿ ಪೂರಾ ಹಕ್ – ಇದರ ಅಡಿಯಲ್ಲಿ, ಕೇಂದ್ರ ಸರ್ಕಾರದ ಹೊಸ ನೇಮಕಾತಿಗಳಲ್ಲಿ ಮಹಿಳೆಯರಿಗೆ ಅರ್ಧದಷ್ಟು ಹಕ್ಕುಗಳು ಸಿಗುತ್ತವೆ.
  • ಶಕ್ತಿ ಕಾ ಸಮ್ಮಾನ್ – ಈ ಯೋಜನೆಯಡಿ ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರ ಮಾಸಿಕ ವೇತನಕ್ಕೆ ಕೇಂದ್ರ ಸರ್ಕಾರದ ಕೊಡುಗೆಯನ್ನು ದ್ವಿಗುಣಗೊಳಿಸಲಾಗುವುದು.
  • ಅಧಿಕಾರ ಮೈತ್ರಿ –  ಇದರ ಅಡಿಯಲ್ಲಿ, ಮಹಿಳೆಯರಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅಗತ್ಯ ಸಹಾಯವನ್ನು ಒದಗಿಸಲು ಪ್ರತಿ ಪಂಚಾಯತ್‌ನಲ್ಲಿ ಪ್ಯಾರಾ-ಲೀಗಲ್ ಅಂದರೆ ಕಾನೂನು ಸಹಾಯಕರನ್ನು ಅಧಿಕಾರ ಮೈತ್ರಿಯಾಗಿ ನೇಮಿಸಲಾಗುತ್ತದೆ.
  • ಸಾವಿತ್ರಿ ಬಾಯಿ ಫುಲೆ ಹಾಸ್ಟೆಲ್ – ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಉದ್ಯೋಗಿ ಮಹಿಳೆಯರಿಗಾಗಿ ಕನಿಷ್ಠ ಒಂದು ಹಾಸ್ಟೆಲ್ ಅನ್ನು ನಿರ್ಮಿಸಲಾಗುವುದು ಮತ್ತು ಇಡೀ ದೇಶದಲ್ಲಿ ಈ ಹಾಸ್ಟೆಲ್ಗಳ ಸಂಖ್ಯೆಯನ್ನು ದ್ವಿಗುಣಗೊಳಿಸಲಾಗುವುದು.

Shwetha M