ಹುಬ್ಬಳ್ಳಿ – ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಯೂಟರ್ನ್‌! – ನಾಮಪತ್ರ ವಾಪಸ್‌ ಪಡೆಯಲು ನಿರ್ಧಾರ?

 ಹುಬ್ಬಳ್ಳಿ – ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಯೂಟರ್ನ್‌! – ನಾಮಪತ್ರ ವಾಪಸ್‌ ಪಡೆಯಲು ನಿರ್ಧಾರ?

ತೀವ್ರ ಕುತೂಹಲ ಕೆರಳಿಸಿದ್ದ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ.  ಕೇಂದ್ರ ಸಚಿವ, ಹಾಲಿ ಸಂಸದ ಪ್ರಹ್ಲಾದ್‌ ಜೋಶಿ ವಿರುದ್ಧ ತೊಡೆತಟ್ಟಿದ್ದ ದಿಂಗಾಲೇಶ್ವರ ಸ್ವಾಮೀಜಿ ಈಗ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ಹೇಳಲಾಗುತ್ತಿದೆ. ಇದರಿಂದಾಗಿ ಪ್ರಹ್ಲಾದ್‌ ಜೋಶಿಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

ಇದನ್ನೂ ಓದಿ: ರಾಹುಲ್‌ ಗಾಂಧಿ ಆರೋಗ್ಯದಲ್ಲಿ ಏರುಪೇರು –  ಇಂಡಿಯಾ ಒಕ್ಕೂಟದ ರ್‍ಯಾಲಿಯಲ್ಲಿ ಗೈರು

ಲಿಂಗಾಯತ ಸಮುದಾಯವನ್ನು ಕಡೆಗಣಿಸಿದ್ದಾರೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಹುಬ್ಬಳ್ಳಿ- ಧಾರವಾಡ ಕ್ಷೇತ್ರದಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಇದು ಅವರ ಭಕ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು.  ದಿಂಗಾಲೇಶ್ವರ ಸ್ವಾಮೀಜಿ ಚುನಾವಣೆಗೆ ಸ್ಪರ್ಧಿಸುವ ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸಬೇಕು. ಇಲ್ಲದಿದ್ದರೇ ಪೀಠವನ್ನು ತೊರೆಯುವಂತೆ ಭಕ್ತರು ಆಯ್ಕೆ ನೀಡಿದ್ದರು. ಇದೀಗ ದಿಂಗಾಲೇಶ್ವರ ಸ್ವಾಮೀಜಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.

ಶಿರಹಟ್ಟಿ ಫಕೀರೇಶ್ವರ ಮಠದ ಹಿರಿಯ ಪೀಠಾಧಿಪತಿ ಶಿವಯೋಗಿ ಸಿದ್ಧರಾಮ ಮಹಾಸ್ವಾಮಿಗಳು ದಿಂಗಾಲೇಶ್ವರ ಸ್ವಾಮೀಜಿಗೆ ಚುನಾವಣಾ ಕಣದಿಂದ ಹಿಂದೆ ಸರಿಯಿರಿ ಎಂದು ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆ ದಿಂಗಾಲೇಶ್ವರ ಸ್ವಾಮೀಜಿ ಸೋಮವಾರ ನಾಮಪತ್ರ ವಾಪಸ್‌ ಪಡೆಯಲಿದ್ದಾರೆ. ಇದರಿಂದ ಪ್ರಹ್ಲಾದ್‌ ಜೋಶಿಗೆ ರಿಲೀಫ್‌ ಸಿಕ್ಕಂತಾಗಿದೆ. ಇನ್ನು ಪ್ರಹ್ಲಾದ್‌ ಜೋಶಿ ಹಾಗೂ ವಿನೋದ್‌ ಅಸೂಟಿ ನಡುವೆ ನೇರ ಹಣಾಹಣಿ ನಡೆಯಲಿದೆ.

Shwetha M