ಆರನೇ ಹಂತದ ಚುನಾವಣೆ ಆರಂಭ – 58 ಕ್ಷೇತ್ರಗಳ 889 ಅಭ್ಯರ್ಥಿಗಳು ಕಣದಲ್ಲಿ

ಆರನೇ ಹಂತದ ಚುನಾವಣೆ ಆರಂಭ – 58 ಕ್ಷೇತ್ರಗಳ 889 ಅಭ್ಯರ್ಥಿಗಳು ಕಣದಲ್ಲಿ

ಲೋಕಸಭಾ ಚುನಾವಣೆಯ 6ನೇ ಹಂತದ  ಮತದಾನ ಆರಂಭವಾಗಿದೆ. ಆರನೇ ಹಂತದ ಚುನಾವಣೆಯಲ್ಲಿ 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 889 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಬಿಹಾರ (8 ಸ್ಥಾನಗಳು), ಹರಿಯಾಣ (ಎಲ್ಲಾ 10 ಸ್ಥಾನಗಳು), ಜಮ್ಮು ಮತ್ತು ಕಾಶ್ಮೀರ (1 ಸ್ಥಾನ), ಜಾರ್ಖಂಡ್ (4 ಸ್ಥಾನಗಳು), ದೆಹಲಿ (ಎಲ್ಲಾ 7 ಸ್ಥಾನಗಳು), ಒಡಿಶಾ (6 ಸ್ಥಾನಗಳು), ಉತ್ತರ ಪ್ರದೇಶ (14 ಸ್ಥಾನಗಳು), ಮತ್ತು ಪಶ್ಚಿಮ ಬಂಗಾಳ (8 ಸ್ಥಾನಗಳು)ದಲ್ಲಿ ಮತದಾನ ನಡೆಯುತ್ತಿದೆ.

ಇದನ್ನೂ ಓದಿ: ರಾಜ್ಯದ ಮದ್ಯ ಪ್ರಿಯರಿಗೆ ಬಿಗ್‌ ಶಾಕ್‌ – ಜೂನ್‌ ಮೊದಲ ವಾರ ಮದ್ಯ ಸಿಗಲ್ಲ!

ತೀವ್ರ ಕುತೂಹಲ ಮೂಡಿಸಿರುವ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) 4 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಉಳಿದ 3 ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬಿಜೆಪಿ ವಿರುದ್ಧ ಎಎಪಿ ಮತ್ತು ಕಾಂಗ್ರೆಸ್ ಜಂಟಿಯಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಮೊದಲ ಲೋಕಸಭೆ ಚುನಾವಣೆ ಇದಾಗಿದ್ದು, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ ಸವಾಲಾಗಿ ಪರಿಣಮಿಸಿದೆ.

ಇನ್ನು ದೇಶದ ವಿದೇಶಾಂಗ ಸಚಿವ ಡಾ. ಜೈಶಂಕರ್​​​ ಅವರು ತಮ್ಮ ಮತವನ್ನು ಚಲಾಯಿಸಿದ್ದಾರೆ. ವಿಶೇಷವೇನೆಂದರೆ ತಮ್ಮ ಮತಗಟ್ಟೆಯಲ್ಲಿ ಮೊದಲ ಪುರುಷ ಮತದಾರ ಎಂಬ ಪ್ರಶಂಸೆ ಪಡೆದುಕೊಂಡಿದ್ದಾರೆ. ಇದರ ಜತೆಗೆ ಮೊದಲ ಪುರುಷ ಮತದಾರ ಪ್ರಮಾಣಪತ್ರವನ್ನು ಸಹ ಪಡೆದಿದ್ದಾರೆ.

“ಈ ಬೂತ್‌ನಲ್ಲಿ ನಾನು ಮೊದಲ ಪುರುಷ ಮತದಾರರಾಗಿದ್ದೇನೆ” ಎಂದು ಜೈಶಂಕರ್ ತಮ್ಮ ಪ್ರಮಾಣಪತ್ರವನ್ನು ಹಿಡಿದುಕೊಂಡು ಫೋಟೋ ಕ್ಲಿಕಿಸಿದ್ದಾರೆ. ದೆಹಲಿಯ ಮತದಾರರು ಮತ್ತೊಮ್ಮೆ ಮೋದಿ ಸರ್ಕಾರವನ್ನು ಬೆಂಬಲಿಸುತ್ತಾರೆ ಎಂಬ ಭರವಸೆ ಇದೆ ಎಂದು ಹೇಳಿದರು. ದೇಶಕ್ಕೆ ಇದು ನಿರ್ಣಾಯಕ ಕ್ಷಣವಾಗಿರುವುದರಿಂದ ಜನರು ಮತಗಟ್ಟೆಗೆ ಬಂದು ಮತದಾನ ಮಾಡಬೇಕು. ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ನನಗೆ ವಿಶ್ವಾಸವಿದೆ ಎಂದರು.

Shwetha M