ಲೋಕಸಭೆ ಚುನಾವಣೆ ದಿನಾಂಕ ಮಾರ್ಚ್‌ 16 ಕ್ಕೆ ಘೋಷಣೆ

ಲೋಕಸಭೆ ಚುನಾವಣೆ ದಿನಾಂಕ ಮಾರ್ಚ್‌ 16 ಕ್ಕೆ ಘೋಷಣೆ

ಬಹು ನಿರೀಕ್ಷಿತ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಗೆ ಮುಹೂರ್ತ ನಿಗದಿಯಾಗಿದೆ. ಶನಿವಾರ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯುಕ್ತರು ಘೋಷಣೆ ಮಾಡಲಿದ್ದಾರೆ.

ಇದನ್ನೂ ಓದಿ: ನ್ಯಾಯ ಕೊಡಿಸಿ ಎಂದು ತಾಯಿ ಮಗಳು ಮನೆಗೆ ಬಂದಿದ್ದರು – ಲೈಂಗಿಕ ಕಿರುಕುಳ ಆರೋಪಕ್ಕೆ ಬಿಎಸ್‌ವೈ ಪ್ರತಿಕ್ರಿಯೆ

ದೆಹಲಿಯ ವಿಜ್ಞಾನ್ ಭವನದಲ್ಲಿ ಶನಿವಾರ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಟಿ ನಡೆಸಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ನೇತೃತ್ವದ ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಲಿದೆ.

ಇನ್ನು ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾಗಿ ಸುಖಬೀರ್‌ ಸಿಂಗ್‌ ಸಂಧು ಮತ್ತು ಜ್ಞಾನೇಶ್‌ ಕುಮಾರ್‌ ಆಯ್ಕೆಯಾಗಿದ್ದು, ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಮುಖ್ಯಚುನಾವಣಾ ಆಯುಕ್ತ ರಾಜೀವ್ ಕುಮಾರ್ ಜೊತೆ ಶುಕ್ರವಾರ ಮಹತ್ವದ ಸಭೆ ನಡೆಸಿದೆ. ಈ ಸಭೆಯಲ್ಲಿ ಶನಿವಾರ ಮಧ್ಯಾಹ್ನ 3 ಗಂಟೆಗೆ ಚುನಾವಣೆ ದಿನಾಂಕ ಘೋಷಣೆ ಮಾಡುವ ಸುದ್ದಿಗೋಷ್ಟಿ ನಿಗದಿ ಮಾಡಲಾಗಿದೆ. ಚುನಾವಣೆ ದಿನಾಂಕ ಘೋಷಣೆಯ ಜೊತೆಗೆ ಶನಿವಾರ  ಮಧ್ಯಾಹ್ನದಿಂದಲೇ ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.

Shwetha M