ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ – ಸುಖ ನಿದ್ರೆಯಲ್ಲಿದ್ದ ಸರ್ಕಾರಿ ಅಧಿಕಾರಿಗಳಿಗೆ ಶಾಕ್!
ಬೆಂಗಳೂರು: ಮಂಗಳವಾರ ಬೆಳ್ಳಂಬೆಳ್ಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಮಿಚಾಂಗ್ ಚಂಡಮಾರುತದ ಅಬ್ಬರಕ್ಕೆ ಚೆನ್ನೈನಲ್ಲಿ ಐವರು ಬಲಿ – ಆಂಧ್ರ ಪ್ರದೇಶದ ಬಾಪಟ್ಲಾಗೆ ಅಪ್ಪಳಿಸಲಿದೆ ಸೈಕ್ಲೋನ್!
ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸುಮಾರು 13 ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಲ್ಲಿ ಬೆಂಗಳೂರಿನಲ್ಲಿ 3 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ.
ಬೆಂಗಳೂರಿನಲ್ಲಿ 3 ಕಡೆಯಾದರೆ, ಕಲಬುರಗಿ, ಬೀದರ್, ಬಳ್ಳಾರಿ, ಕೊಪ್ಪಳ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ, ಧಾರವಾಡದಲ್ಲಿಯೂ ದಾಳಿ ನಡೆಸಲಾಗಿದೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಸಂಬಂಧ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.