ಮಹಿಳಾ ದಿನಾಚರಣೆಗೆ ಪ್ರಧಾನಿ ಮೋದಿ ಗಿಫ್ಟ್‌! – ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ 100 ರೂ. ಇಳಿಕೆ

ಮಹಿಳಾ ದಿನಾಚರಣೆಗೆ ಪ್ರಧಾನಿ ಮೋದಿ ಗಿಫ್ಟ್‌! – ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ 100 ರೂ. ಇಳಿಕೆ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನವೇ ಪ್ರಧಾನಿ ಮೋದಿ ಗೃಹಿಣಿಯರಿಗೆ ಖುಷಿ ಸುದ್ದಿ ಕೊಟ್ಟಿದ್ದಾರೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 100 ರೂಪಾಯಿ ಇಳಿಕೆ ಘೋಷಣೆ ಮಾಡಿದ್ದಾರೆ. ದೇಶದ ಮಹಿಳೆಯರ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಬದ್ಧತೆಗೆ ಪೂರಕವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣ –  ಓರ್ವ ಶಂಕಿತನನ್ನು ವಶಕ್ಕೆ ಪಡೆದ ಎನ್‌ಐಎ

ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ ಸಂದೇಶ ಪ್ರಕಟಿಸಿರುವ ಪ್ರಧಾನಿ ಮೋದಿ, ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್​ಪಿಜಿ ಸಿಲಿಂಡರ್ ಬೆಲೆಯನ್ನು 100 ರೂ. ಕಡಿಮೆ ಮಾಡುತ್ತಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ಈ ನಿರ್ಧಾರವು ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡಲಿದೆ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಅಡುಗೆ ಅನಿಲವನ್ನು ಕೈಗೆಟುಕುವ ದರದಲ್ಲಿ ಸಿಗುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮವನ್ನು ನೋಡಿಕೊಳ್ಳುತ್ತೇವೆ. ಜತೆಗೆ, ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ. ಈ ನಿರ್ಧಾರವು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರ ಬದುಕನ್ನು ಸುಲಭಗೊಳಿಸುವುದನ್ನು ಖಾತರಿಪಡಿಸಿಕೊಳ್ಳುವ ನಮ್ಮ ಬದ್ಧತೆಗೆ ಪೂರಕವಾಗಿದೆ ಎಂದು ಮೋದಿ ಹೇಳಿದ್ದಾರೆ.

ಮಾರ್ಚ್​ 1ರಂದು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆಯನ್ನು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 25 ರೂ. ಹೆಚ್ಚಳ ಮಾಡಿದ್ದವು. ಆದರೆ, ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಕಳೆದ 6 ತಿಂಗಳುಗಳಿಂದ ಪರಿಷ್ಕರಣೆ ಮಾಡಿರಲಿಲ್ಲ.

Shwetha M