ಲಕ್ನೋ ಸೂಪರ್ ಜೈಂಟ್ಸ್ಗೆ ಮೊದಲ ಗೆಲುವು – ಹೈದರಾಬಾದ್ ಅಬ್ಬರಕ್ಕೆ ಬಿಗ್ ಬ್ರೇಕ್

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ತಂಡ ತವರಿನಲ್ಲಿ ಸೋಲು ಕಂಡಿದೆ. ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025ರ ಏಳನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ರಿಷಭ್ ಪಂತ್ ಪಡೆ ಐಪಿಎಲ್ 2025ರಲ್ಲಿ ಮೊದಲ ಗೆಲುವು ಕಂಡಿದೆ. ಕಳೆದ ಪಂದ್ಯದಲ್ಲಿ ಲಕ್ನೋ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲು ಅನುಭವಿಸಿತ್ತು. ಇತ್ತ ಎಸ್‌ಆರ್‍ಹೆಚ್ ಕಳೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಸೋಲಿಸಿತ್ತು.
ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ನಾಯಕ ರಿಷಭ್ ಪಂತ್ ಬೌಲಿಂಗ್ ನಿರ್ಧರಿಸಿದರು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡ ನಿಗದಿತ 20 ಓವರ್‍ಗಳಲ್ಲಿ 190 ರನ್‌ಗಳನ್ನು ಕಲೆ ಹಾಕಿತು. ಎಸ್‌ಆರ್‍ಹೆಚ್ ತಂಡದ ನೀಡಿದ ಸವಾಲಿನ ಗುರಿ ಬೆನ್ನಟ್ಟಿದ ಲಕ್ನೋ ಸೂಪರ್ ಜೈಂಟ್ಸ್ ತಂಡ 5 ವಿಕೆಟ್ ಕಳೆದುಕೊಂಡು ಕೇವಲ 16.1ಓವರ್‍ಗಳಲ್ಲಿ 193 ರನ್ ಗಳಿಸಿ ಗೆಲುವಿನ ನಗೆ ಬೀರಿತು.