ತೆರೆಗೆ ಬರಲಿದೆ ಪ್ರಧಾನಿ ಮೋದಿ ಬಯೋಪಿಕ್‌ – ನರೇಂದ್ರ ಮೋದಿ ಪಾತ್ರದಲ್ಲಿ ಮಿಂಚಲಿದ್ದಾರೆ ಮಲಯಾಳಂ ನಟ!

ತೆರೆಗೆ ಬರಲಿದೆ ಪ್ರಧಾನಿ ಮೋದಿ ಬಯೋಪಿಕ್‌ – ನರೇಂದ್ರ ಮೋದಿ ಪಾತ್ರದಲ್ಲಿ ಮಿಂಚಲಿದ್ದಾರೆ ಮಲಯಾಳಂ ನಟ!

ಪ್ರಧಾನಿ ನರೇಂದ್ರ ಮೋದಿಯವರು ಇಂದು 75ನೇ ವರ್ಷದ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿಗೆ ದೇಶ, ವಿದೇಶದ ಗಣ್ಯರು ಶುಭಕೋರುತ್ತಿದ್ದಾರೆ. ಇದೀಗ ಪ್ರಧಾನಿ ಮೋದಿ ಅವರ ಜೀವನ ಆಧಾರಿತ ಬಯೋಪಿಕ್‌ ನಿರ್ಮಾಣವಾಗಲಿದೆ. ಮೋದಿ ಅವರ ಪಾತ್ರದಲ್ಲಿ ಮಲಯಾಳಂ ನಟ ನಟಿಸಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಕರಡಿಗೆ ಕೃತಕ ಕಾಲು ಜೋಡಣೆ – ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಮೊಟ್ಟಮೊದಲ ಪ್ರಯೋಗ ಸಕ್ಸಸ್

ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸಿಲ್ವರ್ ಕ್ಯಾಸ್ಟ್ ಕ್ರಿಯೇಷನ್ಸ್ ಎಂಬ ನಿರ್ಮಾಣ ಸಂಸ್ಥೆ ಮಾ ವಂದೇ ಚಿತ್ರ ಘೋಷಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಜೀವನ ಆಧಾರಿತ ಸಿನಿಮಾ ಮಾ ವಂದೇ  ಆಗಿದೆ. ವೀರ್ ರೆಡ್ಡಿ ಎಂ. ನಿರ್ಮಿಸಿರುವ ಈ ಚಿತ್ರದಲ್ಲಿ ಮಲಯಾಳಂ ನಟ ಉನ್ನಿ ಮುಕುಂದನ್ ನರೇಂದ್ರ ಮೋದಿಯವರ ಪಾತ್ರದಲ್ಲಿ ನಟಿಸಲಿದ್ದಾರೆ. ಕ್ರಾಂತಿ ಕುಮಾರ್ ಸಿ.ಎಚ್. ನಿರ್ದೇಶಿಸಲಿದ್ದಾರೆ.

ಇನ್ನು ಪ್ರಧಾನಿ ಮೋದಿ ಅವರ ಬಯೋಪಿಕ್‌ ಅನ್ನ ಎಲ್ಲಾ ವರ್ಗಗಳ ಪ್ರೇಕ್ಷಕರನ್ನು ಗುರಿಯಾಗಿ ಇಟ್ಟುಕೊಂಡು ರಚಿಸಲಾಗುತ್ತಿದೆ. ಸಮಾಜದ ಕನಸುಗಳನ್ನು ಹೊಂದಿರುವ ಚಿಕ್ಕ ಹುಡುಗನಿಂದ ಭಾರತದ ಪ್ರಧಾನಿಯಾಗುವವರೆಗಿನ ಮೋದಿಯವರ ಪ್ರಯಾಣವನ್ನು ಚಿತ್ರದಲ್ಲಿ ಕಟ್ಟಿಕೊಡಲಾಗುತ್ತಿದೆ. ಈ ಚಿತ್ರವು ಅವರ ವೈಯಕ್ತಿಕ ಮತ್ತು ರಾಜಕೀಯ ಜೀವನ ಮತ್ತು ಸತ್ಯ ಘಟನೆಗಳ ಆಧಾರದ ಮೇಲೆ ಚಿತ್ರ ಮೂಡಿ ಬರಲಿದೆ.

ನಿರ್ಮಾಪಕ ವೀರ್ ರೆಡ್ಡಿ ಈ ಬಗ್ಗೆ ಮಾತನಾಡಿದ್ದಾರೆ. ಪ್ರಧಾನಿ ಮೋದಿಯವರ ಹುಟ್ಟುಹಬ್ಬದಂದು, ನಮ್ಮ ಸಿಲ್ವರ್ ಕ್ಯಾಸ್ಟ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಅವರ ಜೀವನ ಚರಿತ್ರೆ ‘ಮಾ ವಂದೇ’ ಅನ್ನು ಘೋಷಿಸಲು ನಮಗೆ ಅಪಾರ ಹೆಮ್ಮೆಯಾಗುತ್ತದೆ. ಈ ಚಿತ್ರವು ಮೋದಿ ಅವರ ವೈಯಕ್ತಿಕ ಮತ್ತು ರಾಜಕೀಯ ಪ್ರಯಾಣದ ಘಟನೆಗಳು ಮತ್ತು ಮೈಲಿಗಲ್ಲುಗಳನ್ನು ಅಧಿಕೃತ ರೀತಿಯಲ್ಲಿ ಪ್ರಸ್ತುತಪಡಿಸುತ್ತದೆ. ಮಾ ವಂದೇ ಚಿತ್ರವನ್ನು ಎಲ್ಲಾ ಪ್ಯಾನ್-ಇಂಡಿಯಾ ಭಾಷೆಗಳಲ್ಲಿ ಹಾಗೂ ಇಂಗ್ಲಿಷ್‌ನಲ್ಲಿ ನಿರ್ಮಿಸಲಾಗುವುದು. ಮೋದಿ ಜಿ ಮತ್ತು ಅವರ ತಾಯಿ ಹೀರಾಬೆನ್ ನಡುವಿನ ಬಾಂಧವ್ಯವನ್ನು ಚಿತ್ರದಲ್ಲಿ ಭಾವನಾತ್ಮಕವಾಗಿ ತೋರಿಸಲಾಗುವುದು. ರಾಷ್ಟ್ರ ಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ನಾಯಕನ ಗಮನಾರ್ಹ ಪ್ರಯಾಣವನ್ನು ನಾವು ಪ್ರೇಕ್ಷಕರಿಗೆ ತರುತ್ತಿದ್ದೇವೆ ಎಂದು ಹೇಳಿದ್ದಾರೆ.

Shwetha M