ದ್ವೇಷ ಬಿತ್ತುವ ಪಠ್ಯಗಳಿಗೆ ಕತ್ತರಿ ಹಾಕಲು ಕಸರತ್ತು – ಪರಿಷ್ಕರಣೆ ಮಾಡಿಯೇ ಸಿದ್ಧವೆಂದ ಮಧು ಬಂಗಾರಪ್ಪ!

ದ್ವೇಷ ಬಿತ್ತುವ ಪಠ್ಯಗಳಿಗೆ ಕತ್ತರಿ ಹಾಕಲು ಕಸರತ್ತು – ಪರಿಷ್ಕರಣೆ ಮಾಡಿಯೇ ಸಿದ್ಧವೆಂದ ಮಧು ಬಂಗಾರಪ್ಪ!

ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಪಠ್ಯಪುಸ್ತಕದಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿತ್ತು. ರೋಹಿತ್ ಚಕ್ರತೀರ್ಥ ಸಮಿತಿಯ ಕೆಲ ನಿರ್ಧಾರಗಳು ಚರ್ಚೆಗೂ ಗ್ರಾಸವಾಗಿದ್ದವು. ಇದೀಗ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಈ ಹಿಂದಿನ ಬಿಜೆಪಿ ಸರ್ಕಾರ ಕೆಲ ನಿಯಮಗಳನ್ನು ಬದಲಿಸಲು ಮುಂದಾಗಿದೆ. ಅದರಲ್ಲೂ ಮುಖ್ಯಮಂತ್ರಿ ಶಾಲಾ ಪಠ್ಯ ಪರಿಷ್ಕರಣೆ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ನೂತನ ಶಿಕ್ಷಣ ಸಚಿವ ಮಧುಬಂಗಾರಪ್ಪ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ‘ಸಿದ್ಧಗಂಗಾ ಮಠದ ₹10 ಕೋಟಿ ಅನುದಾನ ತಡೆ ಹಿಡಿಯಲಾಗಿದೆ’ – ಕಾಂಗ್ರೆಸ್ ವಿರುದ್ಧ ಸುರೇಶ್ ಗೌಡ ಗುಡುಗು!

ಹಿಂದಿನ ಸರಕಾರ ಶಾಲಾ ಪಠ್ಯ ಪುಸ್ತಕಗಳಲ್ಲಿ(School Textbook) ಸೇರಿಸಿದ ವಿಷಯಗಳನ್ನು ತೆಗೆದುಹಾಕಬೇಕೆಂದು ಬರಹಗಾರರು, ಸಾಹಿತಿಗಳು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ. ಅವರ ಮನವಿಗೆ  ಸಿಎಂ ಸಿದ್ದರಾಮಯ್ಯ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. ಕನ್ನಡ ನಾಡಿನ ಸೌಹಾರ್ಧ ಮತ್ತು ಜಾತ್ಯತೀತ ಪರಂಪರೆಯ ರಕ್ಷಣೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ದ್ವೇಷ ರಾಜಕಾರಣವನ್ನು ಬಲಿ ಹಾಕಿ, ಭಯದ ವಾತಾವರಣ ಅಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದರ ಬೆನ್ನಲ್ಲೇ  ನೂತನ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu Bangarappa) ಪ್ರತಿಕ್ರಿಯಿಸಿದ್ದು, ಹಂತ ಹಂತವಾಗಿ ಶಾಲಾ ಪಠ್ಯ ಪರಿಷ್ಕರಣೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಕಾಲೇಜುಗಳಲ್ಲಿ ಹಿಜಾಬ್​ ಅನುಮತಿ ಬಗ್ಗೆ ಪ್ರತಿಕ್ರಿಯಿಸಿದ್ದು, ಹಿಜಾಬ್ ವಿಚಾರವಾಗಿ ಕೆಲವೊಂದು ಕಾನೂನು ತೊಡಕುಗಳಿವೆ. ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿ ಕ್ರಮ ಕೈಗೊಳ್ಳುತ್ತೇವೆ. ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೂ ಅನುಕೂಲವಾಗುವಂತೆ ಕಾನೂನು ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದಾರೆ. 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭ ಹಿನ್ನೆಲೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬುಧವಾರ (ಮೇ 31) ಶಿವಮೊಗ್ಗ ಗ್ರಾಮಾಂತರ ಶಾಲೆಗೆ ಭೇಟಿ ನೀಡುತ್ತಿದ್ದು, ಮಕ್ಕಳನ್ನ ನಾನೇ ಬರಮಾಡಿಕೊಳ್ಳುತ್ತಿದ್ದೇನೆ. ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆಯಲ್ಲಿ ಯಾವುದೇ ಗೊಂದಲವಿಲ್ಲ. ಶಿಕ್ಷಣ ‌ಇಲಾಖೆ‌ ಸಿದ್ದವಾಗಿದೆ. ಮಕ್ಕಳು ನಿರಾತಂಕವಾಗಿ, ಖುಷಿಯಿಂದ ಶಾಲೆಗೆ ಬನ್ನಿ ಎಂದು ಶಿಕ್ಷಣ ಸಚಿವರು ಕರೆ ನೀಡಿದರು.

suddiyaana