50 ಅಡಿ ಎತ್ತರದ ಸೇತುವೆಯಿಂದ ಬಿದ್ದ ಬಸ್ – 15 ಮಂದಿ ಸಾವು, 20 ಕ್ಕೂ ಹೆಚ್ಚು ಜನರಿಗೆ ಗಾಯ

50 ಅಡಿ ಎತ್ತರದ ಸೇತುವೆಯಿಂದ ಬಿದ್ದ ಬಸ್ – 15 ಮಂದಿ ಸಾವು, 20 ಕ್ಕೂ ಹೆಚ್ಚು ಜನರಿಗೆ ಗಾಯ

ಸುಮಾರು 50ಕ್ಕೂ ಹೆಚ್ಚು ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು 50 ಅಡಿ ಎತ್ತರದ ಸೇತುವೆಯಿಂದ ಬಿದ್ದಿದ್ದು 15 ಮಂದಿ ಸಾವನ್ನಪ್ಪಿದ್ದ ಘಟನೆ ಮಂಗಳವಾರ ಬೆಳಗ್ಗೆ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ನಡೆದಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಇನ್ನೂ 5 ದಿನ ಮಳೆ ಸಾಧ್ಯತೆ – ಸಿಲಿಕಾನ್ ಸಿಟಿಯಲ್ಲಿ 5 ಮನೆಗಳು ಕುಸಿತ, ಕಾರುಗಳು ಜಖಂ

ಮಂಗಳವಾರ ಮುಂಜಾನೆ ಇಂದೋರ್‌ಗೆ ತೆರಳುತ್ತಿದ್ದ ಬಸ್‌ ಡೊಂಗರ್‌ಗಾಂವ್‌ ಪ್ರದೇಶಕ್ಕೆ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಪರಿಣಾಮ 15 ಮಂದಿ ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಶಿವರಾಜ್ ಸಿಂಗ್ ಹೇಳಿದ್ದಾರೆ.

ಅವಘಡ ಸಂಭವಿಸುವ ವೇಳೆ ಸುಮಾರು 50 ಕ್ಕೂ ಹೆಚ್ಚು ಮಂದಿ ಬಸ್ ನಲ್ಲಿ ಇದ್ದರು ಎಂದು ತಿಳಿದು ಬಂದಿದೆ. ಈಗಾಗಲೇ ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಶಿವರಾಜ್ ಸಿಂಗ್ ವರ್ಮಾ ಹಾಗೂ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ದುರ್ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಮಧ್ಯಪ್ರದೇಶ ಸರ್ಕಾರ ಮೃತರ ಕುಟುಂಬಕ್ಕೆ ತಲಾ ರೂ.4 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50,000 ಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ ರೂ.25 ಸಾವಿರ ಪರಿಹಾರವನ್ನು ಘೋಷಣೆ ಮಾಡಿದೆ.

suddiyaana