ಮಹಾರಾಷ್ಟ್ರ ಭೂಷಣ್’  ಪ್ರಶಸ್ತಿ ಪ್ರದಾನ ಕಾರ್ಯಕ್ರಮ – ಬಿಸಿಲಿನ ತಾಪಕ್ಕೆ ಬಲಿಯಾದವರ ಸಂಖ್ಯೆ 13 ಕ್ಕೆ ಏರಿಕೆ

ಮಹಾರಾಷ್ಟ್ರ ಭೂಷಣ್’  ಪ್ರಶಸ್ತಿ ಪ್ರದಾನ ಕಾರ್ಯಕ್ರಮ – ಬಿಸಿಲಿನ ತಾಪಕ್ಕೆ ಬಲಿಯಾದವರ ಸಂಖ್ಯೆ 13 ಕ್ಕೆ ಏರಿಕೆ

ನವದೆಹಲಿ: ದೇಶದಾದ್ಯಂತ ಬಿಸಿಲಿನ ತಾಪ ದಿನದಿಂದ ದಿನಕ್ಕೆ  ಹೆಚ್ಚಾಗುತ್ತಿದೆ. ಬಿಸಿಲ ಝಳದಿಂದ ನವಿ ಮುಂಬೈಯಲ್ಲಿ ಮೃತಪಟ್ಟಿರುವವರ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದ ನವಿ ಮುಂಬೈಯಲ್ಲಿ ಭಾನುವಾರ ಸಮಾಜ ಸುಧಾರಕ ಅಪ್ಪಾಸಾಹೇಬ್ ಅವರಿಗೆ  ‘ಮಹಾರಾಷ್ಟ್ರ ಭೂಷಣ್’ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿತ್ತು. ಇದರಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿದ್ದರು. ಈ ವೇಳೆ ಸನ್ ಸ್ಟ್ರೋಕ್ ಗೆ ಜನ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದವರ ಪೈಕಿ ಸೋಮವಾರ ಮತ್ತೆ ಇಬ್ಬರು ಅಸುನೀಗಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ  ಕುಟುಂಬಕ್ಕೆ ಸರ್ಕಾರ ತಲಾ 5 ಲಕ್ಷ ರೂಪಾಯಿ ಘೋಷಿಸಿದೆ.

ಇದನ್ನೂ ಓದಿ: ಅಮಿತ್ ಶಾ ಕಾರ್ಯಕ್ರಮದಲ್ಲಿ ಬಿಸಿಲಿನ ತಾಪಕ್ಕೆ 11 ಮಂದಿ ಸಾವು – 120 ಕ್ಕೂ ಹೆಚ್ಚು ಜನ ಅಸ್ವಸ್ಥ

ಇನ್ನು ದೇಶದ ಪೂರ್ವ ಭಾಗದ ಕೆಲವು ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಅವಧಿಯಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ. ವಾಯವ್ಯ ಭಾಗಕ್ಕೆ ಮುಂದಿನ 2 ದಿನಗಳ ಕಾಲ ಎಚ್ಚರಿಕೆಯಿಂದ ಇರುವಂತೆ ಅಂತಾ ಹವಾಮಾನ ಇಲಾಖೆ (ಐಎಂಡಿ) ಮುನ್ನೆಚ್ಚರಿಕೆ ನೀಡಿದೆ.

ಪಂಜಾಬ್‌, ಬಿಹಾರ, ಸಿಕ್ಕಿಂ, ಒಡಿಶಾ, ಝಾರ್ಖಂಡ್‌, ಪಂಜಾಬ್‌, ಹರಿಯಾಣ, ಉತ್ತರ ಪ್ರದೇಶದ ಪೂರ್ವ ಮತ್ತು ಪಶ್ಚಿಮ ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಅವಧಿಯಲ್ಲಿ ಬಿಸಿ ಗಾಳಿ ಬೀಸುವ ಎಚ್ಚರಿಕೆ ನೀಡಲಾಗಿದೆ. ಎ.18 ಮತ್ತು ಎ.19ರಂದು ಲಡಾಖ್‌, ಹಿಮಾಚಲ ಪ್ರದೇಶ, ಉತ್ತರಾಖಂಡಗಳಲ್ಲಿ ಭಾರಿ ಮಳೆಯಾಗವು ಸಾಧ್ಯತೆ ಇದೆ.

suddiyaana